ರಿಷಭ್ ಪಂತ್ ಮಾತ್ರವಲ್ಲದೆ ಟೀಂ ಇಂಡಿಯಾ ಸಹಾಯಕ ಸಿಬ್ಬಂದಿಗೂ ಕೋವಿಡ್ ಪಾಸಿಟಿವ್
Team Udayavani, Jul 15, 2021, 5:16 PM IST
ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ಕೋವಿಡ್ ಕಂಟಕ ಎದುರಾಗಿದೆ. ತಂಡದ ವಿಕೆಟ್ ಕೀಪರ್ ಬ್ಯಾಟ್ಸಮನ್ ರಿಷಭ್ ಪಂತ್ ಗೆ ಕೋವಿಡ್ ಸೋಂಕು ದೃಢವಾದ ಬೆನ್ನಲ್ಲೇ ಸಹಾಯಕ ಸಿಬ್ಬಂದಿಯೊಬ್ಬರಿಗೆ ಸೋಂಕು ತಾಗಿರುವ ಬಗ್ಗೆ ವರದಿಯಾಗಿದೆ.
ಮೂವರು ತರುಬೇತಿ ಸಿಬ್ಬಂದಿಯನ್ನು ಐಸೋಲೇಶನ್ ಗೆ ಒಳಪಡಿಸಲಾಗಿದೆ. ಇವರುಗಳು ಡರ್ಹಮ್ ನಲ್ಲಿ ನಡೆಯಲಿರುವ ಅಭ್ಯಾಸ ಪಂದ್ಯಕ್ಕಾಗಿ ತಂಡವನ್ನು ಸೇರುವುದಿಲ್ಲ ಎಂದು ವರದಿ ಮಾಡಿದೆ.
ಇದನ್ನೂಓದಿ:ಭಾರತ ಮಹಿಳಾ ಕ್ರಿಕೆಟ್ ತಂಡದಲ್ಲಿ ‘ಸೈದ್ಧಾಂತಿಕ ಬದಲಾವಣೆ’ ಅಗತ್ಯವಿದೆ: ಕೋಚ್ ರಮೇಶ್ ಪೊವಾರ್
ಜೂನ್ ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗಾಗಿ ಇಂಗ್ಲೆಂಡ್ ಗೆ ಆಗಮಿಸಿದ್ದ ಭಾರತ ತಂಡ ನಂತರ ಟೆಸ್ಟ್ ಸರಣಿಗಾಗಿ ಅಲ್ಲಿಯೇ ಉಳಿದಿದೆ. ಫೈನಲ್ ಪಂದ್ಯದ ಬಳಿಕ ತಂಡದ ಸದಸ್ಯರು ಬಯೋಬಬಲ್ ನಿಂದ ಹೊರಬಂದಿದ್ದರು. ಇದೀಗ ಮತ್ತೆ ತಂಡ ಒಟ್ಟಿಗೆ ಸೇರಿದ್ದು, ಕೋವಿಡ್ ಪಾಸಿಟಿವ್ ಬಂದಿರುವ ಆಟಗಾರರು ತಂಡದಿಂದ ಪ್ರತ್ಯೇಕವಾಗಿದ್ದಾರೆ.
ಭಾರತ ತಂಡ ಜು.20ರಂದು ಕೌಂಟಿ ಚಾಂಪಿಯನ್ ಶಿಪ್ ಇಲೆವೆನ್ ವಿರುದ್ಧ ಅಭ್ಯಾಸ ಪಂದ್ಯವಾಡಲಿದೆ. ಭಾರತ- ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಆಗಸ್ಟ್ 4ರಂದು ಟ್ರೆಂಟ್ ಬ್ರಿಡ್ಜ್ ನಲ್ಲಿ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.