ಹರಿಹರದಲ್ಲಿ ವೈದ್ಯಕೀಯ ಕಾಲೇಜು ಕಷ್ಟ : ಸಚಿವ ಬೈರತಿ
Team Udayavani, Jul 15, 2021, 9:46 PM IST
ಹರಿಹರ: ರಾಷ್ಟ್ರೀಯ ವೈದ್ಯಕೀಯ ಮಂಡಳಿಯ (ಎನ್‌ಎಂಸಿ) ಷರತ್ತುಗಳನ್ನು ಪೂರೈಸಲಾಗದ ಕಾರಣಕ್ಕೆ ಹರಿಹರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವುದು ಕಷ್ಟ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಹೇಳಿದರು.
ತಾಲೂಕಿನ ಬೆಳ್ಳೂಡಿ ಸಮೀಪದ ಕನಕ ಗುರುಪೀಠದ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಮಠಾ ಧೀಶರ ಹಾಗೂ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯ ಪದಾ ಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ವೈದ್ಯ ಪದವೀಧರರ ಗುಣಮಟ್ಟದ ದೃಷ್ಟಿಯಿಂದ ನ್ಯಾಷನಲ್ ಮೆಡಿಕಲ್ ಕೌನ್ಸಿಲ್ ವಿ ಧಿಸಿರುವ ನಿಯಮ- ನಿಬಂಧನೆ ಪೂರೈಸಿದರಷ್ಟೇ ವೈದ್ಯಕೀಯ ಕಾಲೇಜಿಗೆ ಅನುಮತಿ ಸಿಗುತ್ತದೆ ಎಂದರು. ವೈದ್ಯಕೀಯ ಕಾಲೇಜಿನ ಪ್ರಾಯೋಗಿಕ ತರಗತಿಗಳಿಗೆ ಕನಿಷ್ಠ 2 ವರ್ಷದಿಂದ ಕಾರ್ಯ ನಿರ್ವಹಿಸುತ್ತಿರುವ 1000-1200 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಡ್ಡಾಯವಾಗಿ ಇರಲೇಬೇಕು. ಅಲ್ಲಿ ಎಲ್ಲಾ ವಿಧವಾದ ಚಿಕಿತ್ಸಾ ಸೌಲಭ್ಯ ಹಾಗೂ ಸುಸಜ್ಜಿತ ಶಸ್ತ್ರಚಿಕಿತ್ಸಾ ವಿಭಾಗಗಳಿರಬೇಕು.
ಆದರೆ ಹರಿಹರದ ಸರ್ಕಾರಿ ಆಸ್ಪತ್ರೆ ಕೇವಲ 100 ಹಾಸಿಗೆ ಸಾಮರ್ಥ್ಯ ಹೊಂದಿದೆ. ಎನ್‌ಎಂಸಿಯ ಇಂತಹ ಹತ್ತು ಹಲವು ಷರತ್ತು ಈಡೇರಿಕೆ ಹರಿಹರದಲ್ಲಿ ಸಾಧ್ಯವಿಲ್ಲ ಎಂದು ತಿಳಿಸಿದರು. ಎನ್‌ಎಂಸಿ ನಿಯಮಾವಳಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಹಸ್ತಕ್ಷೇಪ ಮಾಡಲು ಅವಕಾಶವಿಲ್ಲ. ಆದ್ದರಿಂದ ದಾವಣಗೆರೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲು ಸಿಎಂ ಮೇಲೆ ಒತ್ತಡ ಹೇರುತ್ತಿದ್ದೇವೆ.
ಈ ವಿಷಯದಲ್ಲಿ ಇನ್ನೂ ಸಾಕಷ್ಟು ಪ್ರಗತಿ ಕಾಣಬೇಕಿದೆ. ಒಟ್ಟಾರೆ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಜಿಲ್ಲೆಯಲ್ಲಿ ಆರಂಭಿಸಬೇಕು, ಆ ಮೂಲಕ ಜಿಲ್ಲೆಯ ಬಡವರಿಗೆ ಆರ್ಥಿಕ ಹೊರೆಯಾಗದಂತೆ ಉತ್ತಮ ಆರೋಗ್ಯ ಸೇವೆ ದೊರಕಿಸಬೇಕೆಂಬುದಷ್ಟೇ ನಮ್ಮ ಗುರಿ ಎಂದರು.
ಪಿಪಿಪಿ ಮಾದರಿ: ಈಗ ರಾಜ್ಯ ಸರ್ಕಾರ ಪಿಪಿಪಿ ಮಾದರಿಯಲ್ಲಿ ಅಂದರೆ ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ಮಾತ್ರ ನೂತನ ಕಾಲೇಜಿಗೆ ಅನುಮತಿ ನೀಡುತ್ತಿದೆ. ಒಂದು ಸರಕಾರಿ ವೈದ್ಯಕೀಯ ಕಾಲೇಜಿಗೆ 400-500 ಕೋಟಿ ರೂ.ಗಳ ಬಂಡವಾಳ ಹೂಡುವ ಖಾಸಗಿ ಉದ್ಯಮಿಗಳು ಸಹ ಬೇಕಾಗಿದ್ದಾರೆ ಎಂದು ಸಚಿವ ಬೈರತಿ ತಿಳಿಸಿದರು.
ಜಿಲ್ಲೆಯ ಸಿಜಿ ಆಸ್ಪತ್ರೆಗೆ ಜಯದೇವ ಹೃದಯಾಲಯದ 50 ಹಾಸಿಗೆ ಸಾಮರ್ಥ್ಯದ ಘಟಕ ಆಸ್ಪತ್ರೆ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಜೊತೆಗೆ ಇನ್ನೂ 50 ಹಾಸಿಗೆಯ ಘಟಕವನ್ನು ಹರಿಹರಕ್ಕೆ ಮಂಜೂರು ಮಾಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಮಾತನಾಡಿ, ಹರಿಹರ ತಾಲೂಕಿನ ಅಭಿವೃದ್ಧಿಗೆ ವಿವಿಧ ಮಠಾಧಿಧೀಶರು ಸದಾ ಸಿದ್ಧರಿದ್ದೇವೆ. ಆದರೆ ಸರಕಾರಿ ವೈದ್ಯಕೀಯ ಕಾಲೇಜಿನ ವಿಚಾರದಲ್ಲಿ ಎನ್‌ಎಂಸಿ ನಿಯಮಾವಳಿಗಳ ಪಾಲನೆ ಕಷ್ಟಕರವಾಗಿದೆ. ಇದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕಾಗಿದೆ ಎಂದರು.
ಹೋರಾಟ ಸಮಿತಿ ಪರವಾಗಿ ಶಿವಪ್ರಕಾಶ ಶಾಸ್ತ್ರಿ ಮಾತನಾಡಿ, ಕಿರ್ಲೋಸ್ಕರ್ ಕಾರ್ಖಾನೆ ಮುಚ್ಚಿದ ನಂತರ ಹರಿಹರ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಬೆಳೆಯುವ ಸಾಮರ್ಥ್ಯ ಇರುವ ಹರಿಹರಕ್ಕೆ ಒಂದು ಆರ್ಥಿಕ ಚೈತನ್ಯ ನೀಡುವ ಅಂಶ ಬೇಕಾಗಿದೆ. ಸರಕಾರಿ ವೈದ್ಯಕೀಯ ಕಾಲೇಜು ಹರಿಹರದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಪ್ರತಿಪಾದಿಸಿದರು.
ಸಭೆಯಲ್ಲಿ ರಾಜನಹಳ್ಳಿ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ, ಹೊಸಳ್ಳಿ ವೇಮನ ಮಠದ ಶ್ರೀ ವೇಮನಾನಂದ ಸ್ವಾಮೀಜಿ, ನಂದಿಗುಡಿ ಮಠದ ವೃಷಭಪುರಿ ಶ್ರೀಗಳು, ಮೌಲಾನಾ ಷಂಶುದ್ದೀನ್ ಬರ್ಕಾತಿ, ಫಾದರ್ ಅಂತೋನಿ ಪೀಟರ್, ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಮಾಜಿ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬಿಳಗಿ, ಎಸ್‌ಪಿ ರಿಷ್ಯಂತ್, ಹೋರಾಟ ಸಮಿತಿಯ ಎಚ್.ಕೆ. ಕೊಟ್ರಪ್ಪ, ಎಚ್. ನಿಜಗುಣ, ಶ್ರೀನಿವಾಸ್ ನಂದಿಗಾವಿ, ಬಿ. ರಾಮಚಂದ್ರಪ್ಪ, ತಾಪಂ ಮಾಜಿ ಸದಸ್ಯ ಬೆಳ್ಳೂಡಿ ಬಸವರಾಜ್, ಬಿ.ಕೆ. ಸೈಯದ್ ರೆಹಮಾನ್, ಪಿ.ಜೆ. ಮಹಾಂತೇಶ್, ನಾಗರಾಜ್ ಮೆಹರವಾಡೆ, ಕಿರಣ್ ಭೂತೆ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.