ನಿಯಮ ಮೀರಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಸೂಚನೆ : ಸಚಿವ ಡಾ. ನಾರಾಯಣಗೌಡ.
Team Udayavani, Jul 15, 2021, 9:59 PM IST
ಬೆಂಗಳೂರು : ಜಕ್ಕೂರು ಏರೋ ಡ್ರಮ್ ನ 5km ವ್ಯಾಪ್ತಿಯಲ್ಲಿ ನಿಯಮ ಮೀರಿ 45 ಮೀಟರ್ ಗಿಂತಲೂ ಎತ್ತರ ಕಟ್ಟಿರುವ ಕಟ್ಟಡಗಳನ್ನು ತಕ್ಷಣವೆ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ, ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಆದೇಶಿಸಿದರು.
ವಿಕಾಸ ಸೌಧದಲ್ಲಿ ಇಂದು ನಡೆದ ಸಭೆಯಲ್ಲಿ, ಜಕ್ಕೂರು ಏರೋಡ್ರಮ್ ನ 5km ವ್ಯಾಪ್ತಿಯಲ್ಲಿ, 45 ಮೀಟರ್ ಗಿಂತ ಎತ್ತರದ ಕಟ್ಟಡ ಕಟ್ಟುವಂತಿಲ್ಲ. ಆದಾಗ್ಯೂ ಡಿಜಿಸಿಎ ನಿಯಮ ಮೀರಿ, ಪರವಾನಿಗೆ ಇಲ್ಲದೆ ಕಟ್ಟಡಗಳನ್ನು ಕಟ್ಟಿದ್ದಾರೆ. ಸಚಿವರ ಸೂಚನೆ ಮೇರೆಗೆ ಸರ್ವೆ ನಡೆಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಪ್ರಾಥಮಿಕ ಸಮೀಕ್ಷೆಯಲ್ಲಿ 15 ಕಟ್ಟಡಗಳು ನಿಯಮ ಉಲ್ಲಂಘಿಸಿ 45 ಮೀಟರ್ ಗಿಂತ ಹೆಚ್ಚು ಎತ್ತರದ ಕಟ್ಟಡಗಳನ್ನು ನಿರ್ಮಿಸಿರುವುದು ಪತ್ತೆ ಹಚ್ಚಲಾಗಿದೆ. ಆದ್ದರಿಂದ ಅಕ್ರಮ ಕಟ್ಟಡಗಳನ್ನು ತಕ್ಷಣವೆ ತೆರವು ಮಾಡಬೇಕು. ನಿಯಮ ಮೀರಿ 5km ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಿಸಿರುವ ಪತ್ತೆ ಹಚ್ಚಲು ಡ್ರೋಣ್ ಸರ್ವೆ ನಡೆಸಿ 15 ದಿನಗಳಲ್ಲಿ ವರದಿ ನೀಡುವಂತೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಇಲಾಖೆ ಅಧಿಕಾರಿಗಳಿಗೆ ಜಂಟಿ ಸರ್ವೆ ನಡೆಸುವಂತೆ ಸಚಿವರು ಸೂಚಿಸಿದರು. ಕೆಲವರು ಎನ್ ಓ ಸಿ ಪಡೆಯದೆ ಕಟ್ಟಡ ನಿರ್ಮಿಸಿದ್ದು, ಮತ್ತೆ ಕೆಲವರು ಎನ್ ಓ ಸಿ ಪಡೆದರೂ ಅನುಮೋದಿತ ಎತ್ತರದ ಮಿತಿ ಉಲ್ಲಂಘಿಸಿದ್ದಾರೆ. ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನಡೆಸಿದ ಸರ್ವೆಯಲ್ಲಿ 11 ಕಟ್ಟಡಗಳು ಹಾಗೂ ವೈಮಾನಿಕ ತರಬೇತಿ ಶಾಲೆಯಿಂದ ನಡೆಸಿದ ಸರ್ವೆಯಲ್ಲಿ 4 ಕಟ್ಟಡಗಳು ನಿಯಮ ಉಲ್ಲಂಘಿಸಿದ್ದು ಪತ್ತೆಯಾಗಿದೆ. ಕೆಲವರು ಸರ್ವೆ ನಡೆಸಲು ಅಸಹಕಾರ ತೋರಿದ್ದಾರೆ. ಹೀಗಾಗಿ ಮತ್ತೊಮ್ಮೆ ಸರ್ವೆ ನಡೆಸಲು ಸೂಚನೆ ನೀಡಿದರು.
ಬಾಡಿಗೆ ಬಾಕಿ ನೀಡದ ಕಂಪೆನಿ ಆಸ್ತಿ ಜಪ್ತಿ
ಲ್ಯಾಂಡಿಂಗ್ ಹಾಗೂ ಪಾರ್ಕಿಂಗ್ ಬಾಡಿಗೆ ಬಾಕಿ ನೀಡದ ಕಂಪೆನಿಗಳ ಆಸ್ತಿಯನ್ನು ಸೀಜ್ ಮಾಡಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಎಲ್ಲ ಕಂಪೆನಿಗಳಿಂದ ಸುಮಾರು ರೂ.5 ಕೋಟಿ ಬಾಡಿಗೆ ಹಣ ಬಾಕಿ ಇದೆ. ಬಾಕಿ ಹಣ ಪಾವತಿಸಲು ನೀಡಿರುವ ಕೊನೆಯ ನೋಟಿಸ್ ನ ಅವಧಿ ಮುಗಿದಿದೆ. ಕೆಲವು ಕಂಪೆನಿಗಳು ಸ್ವಲ್ಪ ಪ್ರಮಾಣದಲ್ಲಿ ಬಾಕಿ ಪಾವತಿಸಿದ್ದಾರೆ. ಎಲ್ಲ ಕಂಪೆನಿಗಳು ಹಣ ಪಾವತಿಸಬೇಕು. ಅದಕ್ಕಾಗಿ ಕಂಪೆನಿಗಳ ಮುಖ್ಯಸ್ಥರ ಜೊತೆ ಮಾತನಾಡುವಂತೆ ಸಚಿವರು ಸೂಚಿಸಿದರು.
ಆಗಸ್ಟ್ 20 ರಿಂದ ವೈಮಾನಿಕ ತರಬೇತಿ ಶಾಲೆ ಆರಂಭ
ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತವಾಗಿದ್ದ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆಗಸ್ಟ್ 20 ರಿಂದ ಆರಂಭಿಸಲಾಗುವುದು. ಮುಖ್ಯ ಬೋಧಕರ ನೇಮಕವಾಗಿದ್ದು, ಸಹಾಯಕ ಬೋಧಕರ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಶ್ರೀಘ್ರದಲ್ಲಿ ಎಲ್ಲ ಪ್ರಕ್ರಿಯೆ ಮುಗಿಸಿ, ಮುಖ್ಯಮಂತ್ರಿಗಳಿಂದ ಚಾಲನೆ ಕೊಡಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಡಾ. ಗೋಪಾಲಕೃಷ್ಣ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.