ಕಮಲ್‌ನಾಥ್ ಎಐಸಿಸಿ ಅಧ್ಯಕ್ಷ?
Team Udayavani, Jul 16, 2021, 6:50 AM IST
ಹೊಸದಿಲ್ಲಿ: ಗಾಂಧಿ ಕುಟುಂಬದ ನಂಬಿಕಸ್ತ, ಕಾಂಗ್ರೆಸ್ ಹಿರಿಯ ನಾಯಕ ಕಮಲ್‌ನಾಥ್ ಅವರಿಗೆ ಎಐಸಿಸಿ ಅಧ್ಯಕ್ಷ ಗಾದಿ ಒಲಿಯುವುದೇ? ಇಂಥದ್ದೊಂದು ಮಾತು ದಿಲ್ಲಿ ರಾಜಕಾರಣದ ಪಡಸಾಲೆಯಲ್ಲಿ ಓಡಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ, ಕಮಲ್‌ನಾಥ್ ಅವರು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು ಕುತೂಹಲಕ್ಕೆಡೆ ಮಾಡಿಕೊಟ್ಟಿದೆ.
ಎಲ್ಲವೂ ಅಂದುಕೊಂಡಂತಾಗಿದ್ದರೆ ಇಷ್ಟೊತ್ತಿಗೆ ಎಐಸಿಸಿ ಅಧ್ಯಕ್ಷ ಗಾದಿಗೆ ಆಂತರಿಕ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ಕಾರಣದಿಂದಾಗಿ ಈ ಚುನಾವಣೆ ನಡೆದಿಲ್ಲ. ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಅತ್ತ ರಾಹುಲ್ ಗಾಂಧಿ ಅವರು ಮತ್ತೆ ಅಧ್ಯಕ್ಷ ಗಾದಿ ವಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದು, ಹೀಗಾಗಿ, ಗಾಂಧಿ ಕುಟುಂಬಕ್ಕೆ ತೀರಾ ಆಪ್ತರೆನಿಸಿರುವ ಕಮಲ್‌ನಾಥ್‌ರನ್ನೇ ನೇಮಕ ಮಾಡುವ ಸಂಭವವಿದೆ ಎನ್ನಲಾಗುತ್ತಿದೆ.
ಒಂದು ವೇಳೆ ಎಐಸಿಸಿ ಅಧ್ಯಕ್ಷರಾಗದಿದ್ದರೆ, ಕಾರ್ಯಾಧ್ಯಕ್ಷ ಸ್ಥಾನ ನೀಡುವ ಸಾಧ್ಯತೆಗಳೂ ಇವೆೆ. ಕಮಲ್‌ನಾಥ್ ಅವರ ನೇಮಕದ ಚಿಂತನೆ ಬೆನ್ನ ಹಿಂದೆ ಪಕ್ಷದಲ್ಲಿ ಎದ್ದಿರುವ ಒಡಕನ್ನು ನಿವಾರಿಸುವ ತಂತ್ರಗಾರಿಕೆ ಇದೆ. ಕಮಲ್‌ನಾಥ್ ಅವರು, ಕಾಂಗ್ರೆಸ್‌ನಲ್ಲಿ ಬಂಡಾಯಗಾರರೆಂದು ಗುರುತಿಸಿಕೊಂಡಿರುವ ಜಿ23 ನಾಯಕರ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಸಾಮರ್ಥ್ಯ ಕಮಲ್‌ನಾಥ್‌ಗಿದೆ ಎಂಬುದು ಮೂಲಗಳ ಹೇಳಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.