![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 16, 2021, 7:10 AM IST
ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ಹೊಸದಿಲ್ಲಿಗೆ ಪ್ರವಾಸ ಬೆಳೆಸಲಿದ್ದು, ಎಲ್ಲರ ಕಣ್ಣು ಈ ಭೇಟಿ ಮೇಲಿದೆ.
ಮುಖ್ಯಮಂತ್ರಿ ಕಚೇರಿ ಮಾಹಿತಿ ಪ್ರಕಾರ ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಪಡೆಯುವ ಸಲುವಾಗಿ ಈ ಭೇಟಿ ನಡೆಯಲಿದೆ. ಆದರೆ ರಾಜ್ಯ ಸಚಿವ ಸಂಪುಟ ಪುನಾರಚನೆಯೂ ಕಾರ್ಯಸೂಚಿಯಲ್ಲಿದೆ ಎನ್ನಲಾಗುತ್ತಿದೆ.
ಶುಕ್ರವಾರ ಸಂಜೆ 7ಕ್ಕೆ ಮುಖ್ಯಮಂತ್ರಿ ಬಿಎಸ್‌ವೈ ಅವರು ಪ್ರಧಾನಿಯವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಮೇಕೆದಾಟು ಯೋಜನೆಯ ಜತೆಗೆ ರಾಜ್ಯ ರಾಜಕೀಯದ ಬಗ್ಗೆಯೂ ಮಾತನಾಡಲಿದ್ದಾರೆ ಎನ್ನಲಾಗಿದೆ.
ಪುನಾರಚನೆ ನಿರೀಕ್ಷೆ;
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಜು. 26ಕ್ಕೆ 2 ವರ್ಷ ಪೂರೈಸಲಿದೆ. ಸಂಪುಟ ಪುನಾರಚನೆ ಮಾಡಿ ಹೊಸಬರಿಗೆ ಅವಕಾಶ ಕೊಡಬೇಕೆಂಬ ಬೇಡಿಕೆ ಶಾಸಕರಿಂದ ಇದೆ. ಈ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆಯ ಬಗೆಗೂ ಯಡಿಯೂರಪ್ಪ ವರಿಷ್ಠರ ಜತೆಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕೇಂದ್ರದಲ್ಲಿ ಬಾಕಿ ಉಳಿದಿರುವ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ತೆರಳುತ್ತಿದ್ದೇನೆ, ರಾಜಕೀಯ ಉದ್ದೇಶವಿಲ್ಲ ಎಂದು ಮುಖ್ಯಮಂತ್ರಿ ಹೇಳಿಕೊಂಡಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.