ವಿಶೇಷ ಹೂಡಿಕೆ ವಲಯ ಕುರಿತು ಚರ್ಚೆಗೆ ಗುಜರಾತ್ ಭೇಟಿ: ಸಚಿವ ಜಗದೀಶ್ ಶೆಟ್ಟರ್
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರೊಂದಿಗೆ ಚರ್ಚೆ
Team Udayavani, Jul 16, 2021, 5:41 PM IST
ಗುಜರಾತ್ ರಾಜ್ಯದ ಪ್ರಮುಖ ಕೈಗಾರಿಕಾ ಪ್ರದೇಶಗಳಿಗೆ ಸಚಿವರ ನೇತೃತ್ವದ ಅಧಿಕಾರಿಗಳ ತಂಡ ಭೇಟಿ
- ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರೊಂದಿಗೆ ಚರ್ಚೆ
- ಗುಜರಾತ್ ರಾಜ್ಯದ ಪ್ರಮುಖ ಕೈಗಾರಿಕಾ ಪ್ರದೇಶಗಳಿಗೆ ಸಚಿವರ ನೇತೃತ್ವದ ಅಧಿಕಾರಿಗಳ ತಂಡ ಭೇಟಿ
- ದೇಶದ ಮೊದಲ ಯೋಜಿತ ಕೈಗಾರಿಕಾ ನಗರ ಧೋಲೇರಾ ಹಾಗೂ ಗಿಫ್ಟ್ ಸಿಟಿಗೆ ಭೇಟಿ ಅಧಿಕಾರಿಗಳೊಂದಿಗೆ ಚರ್ಚೆ
ಗಾಂಧಿನಗರ, ಗುಜರಾತ್ : ಗುಜರಾತ್ ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿರುವ ವಿಶೇಷ ಹೂಡಿಕೆ ವಲಯ (ಎಸ್ ಐ ಆರ್) ದ ಕುರಿತು ಗುಜರಾತ್ ಸರಕಾರದೊಂದಿಗೆ ಚರ್ಚೆ ನಡೆಸಲು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದೇವೆ ಎಂದು ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯಾಗಿರುವ ಧೋಲೇರಾ (SIR) ದೇಶದ ಮೊದಲ ವ್ಯವಸ್ಥಿತವಾಗಿ ಯೋಜನೆ ಮಾಡಿ ನಿರ್ಮಿಸಲಾಗುತ್ತಿರುವ ವಿಶೇಷ ಹೂಡಿಕೆ ವಲಯ. ದೇಶದ ಮೊದಲ ಸ್ಮಾರ್ಟ್ ಸಿಟಿ ಎನ್ನುವ ಹೆಗ್ಗಳಿಕೆಯೂ ಇದರದ್ದಾಗಿದೆ. ಈ ವಿಶೇಷ ಹೂಡಿಕೆ ವಲಯ (ಎಸ್ ಐ ಆರ್) ದಿಂದ ಗುಜರಾತ್ ನಲ್ಲಿ ಹೆಚ್ಚಿನ ಹೂಡಿಕೆ ಯಾಗುತ್ತಿದೆ. ಕರ್ನಾಟಕ ರಾಜ್ಯ ಕೈಗಾರಿಕಾ ನೀತಿಯಲ್ಲಿ ಈಗಾಗಲೇ ಘೋಷಣೆ ಮಾಡಿರುವಂತಹ ವಿಶೇಷ ಹೂಡಿಕೆ ವಲಯ ರಚನೆಗೆ ಮಾಹಿತಿಯನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಈ ಸಂಬಂಧ ಗುಜರಾತ್ ರಾಜ್ಯ ಹೊರತಂದಿರುವ ನೀತಿ ನಿಯಮಗಳಲ್ಲಿ ಮಾಡಲಾದಂತಹ ಬದಲಾವಣೆಯ ಬಗ್ಗೆ ಗುಜರಾತ್ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದೇವೆ.
ಇದನ್ನೂ ಓದಿ : ಕ್ರೈಸ್ತ ಉದ್ಯಮಿ ಕಟ್ಟಿಸಿದ ಶ್ರೀ ಸಿದ್ಧಿ ವಿನಾಯಕ ದೇಗುಲದಲ್ಲಿ ಬ್ರಹ್ಮಕಲಶ ಸಂಪನ್ನ
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹಿರಿಯ ಮತ್ತು ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಧಿಕಾರಿಗಳ ತಂಡದ ಜೊತೆ ದೋಲೇರಾ, ಗಿಫ್ಟ್ ಸಿಟಿ ಸೇರಿದಂತೆ ಹಲವಾರು ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಯನ್ನು ಗಮನಿಸಿದ್ದೇವೆ. ಅಲ್ಲದೆ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನು ಭೇಟಿಯಾದ ಸಂಧರ್ಭದಲ್ಲಿ ಗುಜರಾತ್ ರಾಜ್ಯದಲ್ಲಿ ಕೈಗಾರಿಕಾಭಿವೃದ್ದಿಗೆ ಭೂ ಪ್ರದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲಾಯಿತು. ಅಲ್ಲದೆ, ನಮ್ಮ ರಾಜ್ಯದಲ್ಲಿ ಹೊರತಂದಿರುವ ನೀತಿಗಳ ಬಗ್ಗೆಯೂ ತಿಳಿಸಿಕೊಡಲಾಯಿತು. ಮುಂಬರುವ ಫೆಬ್ರವರಿಯಲ್ಲಿ ರಾಜ್ಯದಲ್ಲಿ ವಿಶ್ವ ಹೂಡಿಕೆದಾರರ ಸಭೆ ದಿನಾಂಕ ಘೋಷಣೆಯ ಬಗ್ಗೆಯೂ ಚರ್ಚಿಸಲಾಯಿತು ಎಂದು ಸಚಿವರು ತಿಳಿಸಿದರು.
ಮಾನ್ಯ ಸಚಿವರ ನೇತೃತ್ವದ ತಂಡದಲ್ಲಿ ಕೈಗಾರಿಕಾಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಓ ಡಾ ಶಿವಶಂಕರ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕರಾದ ರೇವಣ್ಣ ಗೌಡ, ಇನ್‌ವೆಸ್ಟ್ ಕರ್ನಾಟಕ ಫೋರಂ ನ ಸಿಓಓ ಬಿ ಕೆ ಶಿವಕುಮಾರ್, ಕೆಐಎಡಿಬಿ ಸಿಡಿಓ ಬಿ.ಕೆ ಪವಿತ್ರ, ಕಾರ್ಯನಿರ್ವಾಹಕ ಇಂಜಿನೀಯರ್ ಸಿ ಸುನಿಲ್, ಕೈಗಾರಿಕಾ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸಪ್ಪ, ಮಧು ರೆಡ್ಡಿ ಉಪಸ್ಥಿತರಿದ್ದರು.
ಸಭೆಯಲ್ಲಿ ಗುಜರಾತ್ ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ ರಾಜೀವ್ ಕುಮಾರ್ ಗುಪ್ತಾ, ಗುಜರಾತ್ ಮುಖ್ಯಮಂತ್ರಿ ಅವರ ಚೀಫ್ ಪ್ರಿನ್ಸಿಪಲ್ ಸೆಕ್ರೆಟರಿ ಕೈಲಾಶ್ ನಾಥನ್, ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಅಶ್ವಿನಿ ಕುಮಾರ್, ಕೈಗಾರಿಕಾಭಿವೃದ್ದಿ ಆಯುಕ್ತ ರಾಹುಲ್ ಗುಪ್ತಾ ಪಾಲ್ಗೊಂಡಿದ್ದರು.
ಇದನ್ನೂ ಓದಿ : ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ : ಸಚಿವ ಡಾ.ಕೆ.ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.