ಎಸ್‌ಡಿಎಂನಿಂದ ಸೆಂಟರ್ ಫಾರ್ ಎಕ್ಸಲೆನ್ಸ್ ಸ್ಥಾಪನೆ
ಧಾರವಾಡ-ಮೈಸೂರಲ್ಲಿ ಏಕಕಾಲಕ್ಕೆ ಚಾಲನೆ
Team Udayavani, Jul 16, 2021, 6:21 PM IST
ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಉದ್ಯೋಗಕ್ಕೆ ಹಾಗೂ ಸ್ವಯಂ ಉದ್ಯಮ ಆರಂಭಿಸಲು ಅಗತ್ಯವಿರುವ ಕೌಶಲ್ಯಗಳನ್ನು ಬೆಳೆಸಲು ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆ (ಬಿಸಿಐಸಿ) ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು (ಎಸ್ ಡಿಎಂ) ಜಂಟಿಯಾಗಿ ಮೈಸೂರು ಮತ್ತು ಧಾರವಾಡದಲ್ಲಿ ನಿರ್ಮಿಸಲಾದ ಸೆಂಟರ್ ಫಾರ್ ಎಕ್ಸಲೆನ್ಸ್ ಇನ್ ಮ್ಯಾನೇಜ್‌ಮೆಂಟ್‌ಗೆ ಗುರುವಾರ ಚಾಲನೆ ದೊರೆಯಿತು.
ನಗರದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸೆಂಟರ್ ಫಾರ್ ಎಕ್ಸಲೆನ್ಸ್ ಅನ್ನು ಉದ್ಘಾಟಿಸಿದರು. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆ ಅಧ್ಯಕ್ಷ ಟಿ.ಆರ್. ಪರಶುರಾಮನ್ ಸಾಕ್ಷಿಯಾದರು. ವಿದ್ಯಾರ್ಥಿಗಳಲ್ಲಿ ಕೈಗಾರಿಕೆಗಳಿಗೆ ಅಗತ್ಯಕ್ಕೆ ತಕ್ಕ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಈ ಎಕ್ಸಲೆನ್ಸ್ ಸೆಂಟರ್ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ. ಇಲ್ಲಿ ಬಿಸಿಐಸಿಯ ಅನುಭವಿ ಉದ್ಯಮಿಗಳು ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ದಿ, ಹೊಸ ಸಂಶೋಧನೆ ಹಾಗೂ ಸ್ವಂತ ಉದ್ಯಮವನ್ನು ಬೆಳೆಸುವ ತರಬೇತಿ ನೀಡಲಿದ್ದಾರೆ.
ನಂತರ ಮಾತನಾಡಿದ ಜಗದೀಶ್ ಶೆಟ್ಟರ್, ಉದ್ದೇಶಿತ ಬಿಸಿಐಸಿ-ಎಸ್ ಡಿಎಂ ನೋಡಲ್ ಸೆಂಟರ್‌ಗಳು ಬಹಳ ಪರಿಣಾ ಮ ಕಾರಿಯಾಗಲಿವೆ. ಈ ಎಕ್ಸಲೆನ್ಸ್ ಸೆಂಟರ್‌ಗಳ ಮೂಲಕ ವಿದ್ಯಾರ್ಥಿಗಳು ಉದ್ಯೋಗಕ್ಕೆ ಸೇರುವ ಮೊದಲೇ ಉದ್ಯೋಗದ ಅನುಭವ ಮತ್ತು ಮಾಹಿತಿ ಪಡೆದುಕೊಳ್ಳಲಿದ್ದಾರೆ. ಇಂತಹ ಪ್ರಯತ್ನವನ್ನು ರಾಜ್ಯದ ಇತರೆ ಭಾಗ ಗಳಿಗೂ ವಿಸ್ತರಿಸಲು ಎರಡೂ ಸಂಸ್ಥೆಗಳು ಮುಂದಾಗಬೇಕು ಎಂದು ಹೇಳಿದರು.
ಕೋವಿಡ್ ಹಾವಳಿ ಹೆಚ್ಚಾದ ಸಂದರ್ಭ ದಲ್ಲಿ ಬಿಸಿಐಸಿಯು ಸರ್ಕಾರದ ಜತೆ ಕೈಜೋಡಿಸಿ ಹಲವಾರು ಕೊಡುಗೆ ಗಳನ್ನು ನೀಡಿತು. ಸಂಕಷ್ಟದ ಸಮಯದಲ್ಲಿ ಸರ್ಕಾರ ಮತ್ತು ಉದ್ಯಮಿಗಳ ಮಧ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸಿದ ಬಿಸಿಐಸಿ ಕಾರ್ಯ ಶ್ಲಾಘನೀಯ. ರಾಜ್ಯ ದೇಶದ ಪ್ರಮುಖ ಬಂಡವಾಳ ಹೂಡಿಕೆಯ ತಾಣವಾಗಿ ಹೊರಹೊಮ್ಮಿದೆ. ಇದನ್ನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. ಬಿಸಿಐಸಿ ಹಿರಿಯ ಉಪಾಧ್ಯಕ್ಷ ಕೆ.ಆರ್. ಶೇಖರ್, ಉಪಾಧ್ಯಕ್ಷ ಡಾ. ರವೀಂದ್ರನ್, ಧರ್ಮಸ್ಥಳ ಮಂಜುನಾಥೇಶ್ವರ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮೈಸೂ ರಿನ ನಿರ್ದೇಶಕರಾದ ಡಾ.ಎನ್. ಆರ್. ಪರುಶುರಾಮನ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.