ಸಸಿ ನೆಟ್ಟು ಅರಣ್ಯೀಕರಣಕ್ಕೆ ಒತ್ತು ನೀಡಿ : ದೇವರಮನಿ


Team Udayavani, Jul 16, 2021, 9:27 PM IST

f್​್​್​್​್​್​್​್​್​್​್ಸದಗ್ದಗದ

ಇಂಡಿ: ನರೇಗಾ ಯೋಜನೆಯಡಿ ರೈತರು ಬದುಗಳಲ್ಲಿ ಸಸಿ ನೆಟ್ಟು ಸಾಮಾಜಿಕ ಅರಣ್ಯೀಕರಣಕ್ಕೆ ಒತ್ತು ನೀಡಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಸಿ.ಬಿ. ದೇವರಮನಿ ಹೇಳಿದರು.

ಬೆನಕನಹಳ್ಳಿ ಮತ್ತು ತೆನ್ನಿಹಳ್ಳಿ ಗ್ರಾಪಂಗೆ ಗುರುವಾರ ಭೇಟಿ ನೀಡಿ ನರೇಗಾ ಯೋಜನೆಯ ವಿವಿಧ ಕಾಮಗಾರಿಗಳ ಅನುಷ್ಠಾನ ಮತ್ತು ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು. ವಿಜಯಪುರ ಜಿಲ್ಲೆ ಬರಗಾಲ ಪೀಡಿತವಾಗಿದ್ದು, ಅಂತರ್ಜಲ ಮಟ್ಟ ಕುಸಿಯುತ್ತಿದೆ. ಮಳೆ ನೀರು ಹಿಡಿದಿಟ್ಟು ಇಂಗಿಸಲು 2021-22ರ ನರೇಗಾ ಯೋಜನೆಯ ಅಂದಾಜು ಪತ್ರಿಕೆ ಅನುಸಾರ ಇಂಡಿ ತಾಲೂಕಿನಲ್ಲಿ 2120 ಕಂದಕ ಬದು, 1757 ಕೃಷಿ ಹೊಂಡ, 339 ಬಸಿಗಾಲುವೆ, 346 ಕೆರೆ ಮತ್ತು ಹಳ್ಳದ ಹೂಳೆತ್ತುವುದು, 80 ಮರುಪೂರಣ ಘಟಕಗಳ ನಿರ್ಮಾಣದ ಗುರಿ ಹೊಂದಲಾಗಿದೆ. ರೈತರ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಕ್ರಿಯಾಯೋಜನೆಗೂ ಅನುಮೋದನೆ ನೀಡಲಾಗುತ್ತಿದೆ ಎಂದರು.

ಜಿಪಂ ಎಪಿಒ ಅರುಣಕುಮಾರ ದಳವಾಯಿ ಮಾತನಾಡಿ, ಮಳೆಗಾಲ ಆರಂಭವಾಗಿದ್ದು ರೈತರು ಸಸಿ ನೆಟ್ಟು ಹಸಿರೀಕರಣ ಮಾಡಬೇಕು. ಇದರಿಂದ ಮಣ್ಣಿನ ಸವಕಳಿ ತಡೆಗಟ್ಟಬಹುದು ಎಂದರು. ನಂತರ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎನ್‌ಆರ್‌ಎಲ್‌ಎಂ ಶೆಡ್‌, ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ, ಶಾಲಾ ಕಾಂಪೌಂಡ್‌, ಅಡುಗೆ ಕೋಣೆ, ಪೌಷ್ಟಿಕ ತೋಟ, ಎರೆಹುಳು ತೊಟ್ಟಿ, ಕೃಷಿಹೊಂಡ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು. ತ್ಯಾಜ್ಯ ವಿಲೇವಾರಿ ಘಟಕಕ್ಕೆ ಮೆಚ್ಚುಗೆ: ತೆನ್ನಿಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 3 ಎಕರೆ ನಿವೇಶನದಲ್ಲಿ ನಿರ್ಮಿಸುತ್ತಿರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಸುಮಾರು 800 ವಿವಿಧ ಸಸಿ ನೆಟ್ಟು, ಹನಿ ನಿರಾವರಿ ಪದ್ಧತಿ ಅಳವಡಿಸಿ ಪೋಷಿಸಲಾಗುತ್ತಿದ್ದು, ಸಸಿಗಳಿಗೆ ಗೊಬ್ಬರ ಒದಗಿಸಲು ಎರೆ ಹುಳು ತೊಟ್ಟಿಯನ್ನೂ ನಿರ್ಮಿಸಲಾಗಿದೆ. ಇದೊಂದು ಮಾದರಿ ಘಟಕವಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗೆ ಭೇಟಿ: ಬೆನಕನಹಳ್ಳಿ ಮತ್ತು ತೆನ್ನಿಹಳ್ಳಿ ಗ್ರಾಪಂ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಬಿಸಿಯೂಟ ವಿತರಣೆ ಬಗ್ಗೆ ಪರಿಶೀಲಿಸಿದರು. ಬಿಸಿಯೂಟದ ಹಂಚಿಕೆ ಮತ್ತು ಸ್ಟಾಕ್‌ ರಜಿಸ್ಟರ್‌ ಸರಿಯಾಗಿ ನಿರ್ವಹಣೆ ಮಾಡುವಂತೆ ಸೂಚಿಸಿದರು. ಈ ವೇಳೆ ಜಿಪಂ ಎಡಿಪಿಸಿ ಪೃಥ್ವಿರಾಜ ಪಾಟೀಲ, ತಾಂತ್ರಿಕ ಸಂಯೋಜಕ ಸಂಜೀವಕುಮಾರ ಬಿರಾದಾರ, ಪಿಡಿಒ ಪಿ.ಎಲ್‌. ರಾಠೊಡ, ಬಿಎಫ್‌ಟಿ ಶಿವಾನಂದ ವರವಂಟಿ, ಗ್ರಾಪಂ ಅಧ್ಯಕ್ಷ ಕಾಶಿನಾಥ ಹಚಡದ, ಸಿ.ಆರ್‌. ಮಸಳಿ ಸೇರಿದಂತೆ ಗ್ರಾಪಂ ಸದಸ್ಯರು, ಶಾಲೆ ಮುಖ್ಯ ಗುರುಗಳು ಇದ್ದರು.

ಟಾಪ್ ನ್ಯೂಸ್

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.