ಅನ್ನದಾತರ ಉತ್ತೇಜಿಸಿ ಆಸರೆಯಾಗಲು ರೈತ ಸಿರಿ ಅನುಷ್ಠಾನ


Team Udayavani, Jul 16, 2021, 10:06 PM IST

16-13

„ಕೆ. ನಾಗರಾಜ್‌

ಕೂಡ್ಲಿಗಿ: ರೈತರಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಿರಿಧಾನ್ಯಗಳನ್ನು ಬೆಳೆಯುವಂತೆ ಉತ್ತೇಜಿಸಲು ರೈತ ಸಿರಿ ಯೋಜನೆಯನ್ನು ಕೃಷಿ ಇಲಾಖೆ ಅನುಷ್ಠಾನಗೊಳಿಸಿದ್ದು ಅರ್ಹ ರೈತರಿಗೆ ಪ್ರೋತ್ಸಾಹಧನ ನೀಡಲು ತೀರ್ಮಾನಿಸಲಾಗಿದೆ. ತಾಲೂಕಿನ ಆಸಕ್ತ ರೈತರು ಬೆಳೆದ ಸಿರಿ ಧಾನ್ಯಗಳಾದ ಸಜ್ಜೆ ಜೋಳ, ರಾಗಿ, ಊದಲು, ನವಣೆ, ಅರ್ಕ, ಕೊರಲೆ, ಸಾಮೆಗಳ ಪ್ರದೇಶ ವಿಸ್ತರಣೆ ಹಾಗೂ ಉತ್ಪಾದನೆ ವೃದ್ಧಿಸುವುದು, ಸಿರಿಧಾನ್ಯಗಳ ಸಂಸ್ಕಾರಣಾ ಘಟಕಗಳ ಸ್ಥಾಪನೆ ಪ್ರೋತ್ಸಾಹಧನ ನೀಡುವುದು ಮಾರುಕಟ್ಟೆ ಸಾಮಥ್ಯಾಭಿವೃದ್ಧಿ ಇತರೆ ವಿಷಯಗಳ ಕುರಿತು ರೈತರಲ್ಲಿ ಅರಿವು ಮೂಡಿಸಲು ಕೂಡ್ಲಿಗಿ ಕೃಷಿ ಇಲಾಖೆ ಸಜ್ಜಾಗಿದೆ.

ಉದ್ದೇಶ: ಸಿರಿಧಾನ್ಯಗಳೆಂದು ಕರೆಯುವ ಕಿರುಧಾನ್ಯಗಳಿಗೆ ಕಡಿಮೆ ನೀರು ಸಾಕು, ಕಡಿಮೆ ಒಳಸುರಿ ಸಾಕು. ಅಷ್ಟರಲ್ಲೇ ಅವು ಹೆಚ್ಚಿನ ಪೌಷ್ಟಿಕಾಂಶ ನೀಡುತ್ತವೆ. ಕೊರೊನಾ ಸಂದರ್ಭದಲ್ಲಿ ನಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಈ ಧಾನ್ಯಗಳು ಸಹಕಾರಿಯಾಗಲಿವೆ. ಇತ್ತೀಚಿನ ದಿನಗಳಲ್ಲಿ ಬಯಲು ಸೀಮೆಯಲ್ಲಿ ಕಡಿಮೆ ಮಳೆ ಬೀಳುವುದರಿಂದ ಸಿರಿಧಾನ್ಯಗಳನ್ನು ಬೆಳೆಯಲು ಅನುಕೂಲ ಎಂದು ಕಂಡುಕೊಳ್ಳಲಾಗಿದೆ. ಸಿರಿಧಾನ್ಯಗಳ ಮಾರುಕಟ್ಟೆ ಸಂಪರ್ಕ ಹೆಚ್ಚಿಸಿ ಇವುಗಳನ್ನು ಬೆಳೆಯುವ ಕೃಷಿಕರನ್ನು ಮುಖ್ಯವಾಹಿನಿಗೆ ತರುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಅರ್ಹತೆ: ರೈತರು ಅವರ ದಾಖಲೆಗಳನ್ನು ರೈತ ಸಂಪರ್ಕ ಕೇಂದ್ರದಲ್ಲಿ ಸಲ್ಲಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಕಾನೂನು ರೀತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಹಿಂದುಳಿದ ರೈತರಿಗೆ ಆದ್ಯತೆ ನೀಡಲಾಗುತ್ತದೆ. ಕೃಷಿ ಇಲಾಖೆಯಿಂದ ಅವರು ನೀಡಿರುವ ಗುರಿ ಅನ್ವಯ ತಾಲೂಕು ಹೋಬಳಿವಾರು ನಿಗದಿಪಡಿಸಿರುವ ಗುರಿಯಂತೆ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರನ್ನು ಮೊದಲು ನೋಂದಾಯಿಸಿಕೊಂಡ ನಂತರ ಬೆಳೆ ಬಂದಾಗ ಕೃಷಿ ಅಧಿ ಕಾರಿಗಳು ಬೆಳೆಗಾರರ ಹೊಲಗಳಿಗೆ ತೆರಳಿ ಜಿಪಿಎಸ್‌ ಮಾಡಿ ನಂತರ ಜಮೀನು ವಿಸ್ತರಣೆ ಹೊಂದಾಣಿಕೆ ಆಗುವುದನ್ನು ಖಾತರಿ ಮಾಡಿಕೊಂಡು ಫಲಾನುಭವಿಗಳನ್ನು ಆಯ್ಕೆ ಮಾಡುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿ ಕಾರಿಗಳನ್ನು ಸಂಪರ್ಕಸಬಹುದಾಗಿದೆ.

ಸಿರಿಧಾನ್ಯ ಯೋಜನೆ: ಈ ಹೊಸ ಯೋಜನೆಗೆ ಹಲವು ಮುಖ. ಪಟ್ಟಣ ವಾಸಿಗಳಲ್ಲಿ ಕಿರುಧಾನ್ಯಗಳ ಸೇವನೆಯಿಂದ ಆಗುವ ಆರೋಗ್ಯ ಲಾಭಗಳ ಬಗ್ಗೆ ಅರಿವು ಮೂಡಿಸುವುದು, ಕಿರುಧಾನ್ಯಗಳನ್ನು ಬೆಳೆಯುವುದು ಲಾಭಕರ ಎಂಬ ಭಾವ ರೈತರಲ್ಲಿ ಮೂಡಿಸುವುದು ಆಗಿದೆ. ಇತರ ಬೆಳೆಗಳಿಗಿಂತ ಶೇ. 70ರಷ್ಟು ಕಡಿಮೆ ನೀರು ಸಾಕು. ಕ್ರಿಮಿನಾಶಕಗಳ ಅಗತ್ಯವಿಲ್ಲ, ಕಡಿಮೆ ರಸಗೊಬ್ಬರ ಸಾಕು. ಪ್ರೊಟೀನ್‌, ನಾರಿನಂಶ, ಬಿ ಕಾಂಪ್ಲೆಕ್ಸ್‌, ಅಮೈನೋ ಆಮ್ಲಗಳು, ಫೋಲಿಕ್‌ ಆಮ್ಲ, ವಿಟಮಿನ್‌ ಇ, ಕಬ್ಬಿಣ, ಮ್ಯಾಗ್ನಿಸಿಯಂ, ತಾಮ್ರ, ಫಾಸ್ಪ ರಸ್‌, ಸತು, ಪೊಟ್ಯಾಷಿಯಂ, ಕ್ಯಾಲ್ಸಿಯಂಗಳ ಆಗರ, ಕೊಬ್ಬಿನಾಂಶವನ್ನು ಕಡಿಮೆ ಮಾಡುತ್ತದೆ. ಹೃದಯದ ಕಾಯಿಲೆಗಳು ಮತ್ತು ಮಧುಮೇಹದ ಆತಂಕವನ್ನು ಕಡಿಮೆ ಮಾಡುತ್ತದೆ.

ಟಾಪ್ ನ್ಯೂಸ್

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.