ಮಳೆ ಅಬ ºರ: ಜನಜೀವನ ದುಸ್ತರ
Team Udayavani, Jul 16, 2021, 10:25 PM IST
ಚಿಕ್ಕಮಗಳೂರು: ಜಿಲ್ಲಾದ್ಯಂತ ಪುನರ್ವಸು ಮಳೆ ಅಬ್ಬರಿಸುತ್ತಿದ್ದು, ಗುರುವಾರ ಸುರಿದ ಮಳೆಗೆ ಮಲೆನಾಡಿನಲ್ಲಿ ರಸ್ತೆ, ಮನೆ, ಧರೆ ಕುಸಿದಂತಹ ಘಟನೆಗಳು ನಡೆದಿವೆ. ತುಂಗಾ, ಭದ್ರಾ, ಹೇಮಾವತಿ ನದಿ ನೀರಿನ ಹರಿವು ಹೆಚ್ಚುತ್ತಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದ ಜಿಲ್ಲಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಕಳಸ, ನರಸಿಂಹರಾಜಪುರ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಈ ಭಾಗದಲ್ಲಿ ಹರಿಯುವ ನದಿ, ಹಳ್ಳಕೊಳ್ಳ ಕರೆಕಟ್ಟೆಗಳಲ್ಲಿ ನೀರಿನ ಹರಿವು ಹೆಚ್ಚುತ್ತಿದೆ.
ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು, ವಸ್ತಾರೆ, ಮುಳ್ಳಯ್ಯನಗಿರಿ, ಮುತ್ತೋಡಿ ಭಾಗದಲ್ಲಿ ಹಾಗೆಯೇ ಕಡೂರು, ತರೀಕೆರೆ ಭಾಗದಲ್ಲೂ ಮಳೆಯಾಗುತ್ತಿದೆ. ಬುಧವಾರ ರಾತ್ರಿ ಸುರಿದ ಚಿಕ್ಕಮಗಳೂರು ತಾಲೂಕು ಹೊನ್ನಾಳ ಚೆಕ್‌ಪೋಸ್ಟ್ ಬಳಿ ಮುತ್ತೋಡಿ ಅಭಯಾರಣ್ಯ ಸಂಪರ್ಕಿಸುವ ರಸ್ತೆ ಕುಸಿದಿದ್ದು ವಾಹನ ಸಂಚಾರ ಸ್ತಬ್ಧಗೊಂಡಿದೆ. ಚಿಕ್ಕಮಗಳೂರು- ಮುತ್ತೋಡಿ ಸಂಪರ್ಕ ಸ್ಥಗಿತಗೊಂಡಿದೆ.
ಮೂಡಿಗೆರೆ ತಾಲೂಕು ಬೊಮ್ಮನಗದ್ದೆ ಗ್ರಾಮದಲ್ಲಿ ಭಾರೀ ಗಾಳಿ- ಮಳೆಗೆ ಮನೆ ಮೇಲೆ ಮರ ಬಿದ್ದು ಫೆಲಿಕ್ಸ್ ಎಂಬುವರ ಮನೆಗೆ ಹಾನಿಯಾಗಿದೆ. ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ ಮನೆ ಮರ ತೆರವುಗೊಳಿಸಿದ್ದು, ಕಂದಾಯಾಧಿ ಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳಸ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು ಭದ್ರಾನದಿ ತುಂಬಿ ಹರಿಯುತ್ತಿದೆ. ಕಳಸ- ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಟಾಳೆ ಸೇತುವೆ ಮುಳುಗುವ ಹಂತಕ್ಕೆ ತಲುಪಿದೆ.
ವಿವಿಧೆಡೆ ಗಾಳಿ- ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ಭಾಗದಲ್ಲೂ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದ ಅಲ್ಲಲ್ಲಿ ರಸ್ತೆ ಬದಿಗಳಲ್ಲಿ ಧರೆ ಕುಸಿತಗೊಂಡು ಕೆಲವು ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಚಿಕ್ಕಮಗಳೂರು ನಗರ ಸೇರಿದಂತೆ ಕಡೂರು, ತರೀಕೆರೆ ಭಾಗದಲ್ಲೂ ಉತ್ತಮ ಮಳೆಯಾಗಿದ್ದು ಮಧ್ಯಾಹ್ನದ ನಂತರ ಮೋಡ ಕವಿದ ವಾತವರಣ ನಿರ್ಮಾಣವಾಗಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಉತ್ತಮ ಮಳೆಯಾಗುತ್ತಿದ್ದು ನಿರಂತರ ಸುರಿಯುತ್ತಿರುವ ಮಳೆಯಿಂದ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ನಿರಂತರ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿರುವ ಜಲಪಾತಗಳಲ್ಲಿನ ನೀರು ಭಾರೀ ಪ್ರಮಾಣದಲ್ಲಿ ಧುಮ್ಮಿಕ್ಕುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ. ಒಟ್ಟಾರೆ ನಿರಂತರ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.