ನೀರಿನ ಸಮಸ್ಯೆ ಆಗದಂತೆ ಜಾಗ್ರತೆ ವಹಿಸಿ: ಜಾನಕಿರಾಮ

Team Udayavani, Jul 16, 2021, 10:54 PM IST

16-19

ಮೊಳಕಾಲ್ಮೂರು: ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಜಾಗ್ರತೆ ವಹಿಸಬೇಕು ಎಂದು ತಾಪಂ ಕಾರ್ಯನಿರ್ವಹಣಾ ಧಿಕಾರಿ ಕೆ.ಒ. ಜಾನಕಿರಾಮ ಸೂಚಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಜನಸಾಮಾನ್ಯರಿಗೆ ಕೊರತೆಯಾಗದಂತೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಬೇಕಾಗಿದೆ. ಅಮಕುಂದಿ ಮತ್ತು ಚಿಕ್ಕೇರಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಾಗಿ ಗಮನಕ್ಕೆ ಬಂದಿದೆ. ಕೂಡಲೇ ಕೆಟ್ಟು ನಿಂತಿರುವ ಶುದ್ಧೀಕರಣ ಘಟಕಗಳನ್ನು ರಿಪೇರಿ ಮಾಡಿಸಿ. ಅಗತ್ಯವಿರುವಲ್ಲಿ ಕೊಳವೆಬಾವಿ ಕೊರೆಸಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕೆಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ನಿರ್ದೇಶಕ ಸುಕುಮಾರ್‌ ಪವಾರ್‌ ಮಾತನಾಡಿ, ತಾಲೂಕಿನಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಕೊರತೆ ಕಂಡು ಬಂದಿಲ್ಲ. ಶುದ್ಧೀಕರಣ ಘಟಕಗಳು ಕೆಟ್ಟು ನಿಂತಿರುವ ಬಗ್ಗೆ ಸಂಬಂಧಿ ತ ಏಜೆನ್ಸಿಯವರ ಗಮನಕ್ಕೆ ತರಲಾಗಿದೆ. ಕೂಡಲೇ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕಾರ್ಯನಿರ್ವಹಿಸ ಲಾಗುವುದೆಂದು ತಿಳಿಸಿದರು.

ಸಹಾಯಕ ಕೃಷಿ ನಿರ್ದೇಶಕ ಉಮೇಶ್‌ ಮಾತನಾಡಿ, ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ವಾಡಿಕೆ ಮಳೆಗಿಂತಲೂ ಹೆಚ್ಚಿನ ಮಳೆಯಾಗಿದೆ. ಶೇಂಗಾ , ತೊಗರಿ,ಹುರುಳಿ , ಜೋಳ , ರಾಗಿ ಸೇರಿದಂತೆ ಇನ್ನಿತರ ಬೆಳೆಗಳ ಬಿತ್ತನೆಗೆ ನಿಗ ದಿತ ಗುರಿಯನ್ನು ಹೊಂದಲಾಗಿದೆ. ತಾಲೂಕಿನ ಶೇಂಗಾ ಬೆಳೆಗಾರರಿಗೆ ಬಿತ್ತನೆಗೆ ರೈತ ಸಂಪರ್ಕ ಕೇಂದ್ರದಲ್ಲಿ 3,739 ಕ್ವಿಂಟಲ್‌ ಶೇಂಗಾ ದಾಸ್ತಾನು ಮಾಡಿಕೊಳ್ಳಲಾಗಿದೆ. 3083 ಕ್ವಿಂಟಲ್‌ ಶೇಂಗಾವನ್ನು ನಿಗ ದಿತ ದರದಲ್ಲಿ ವಿತರಣೆ ಮಾಡಲಾಗಿದೆ. ತಾಲೂಕಿನಲ್ಲಿ ಡಿಎಪಿ ಕೊರತೆ ಕಂಡು ಬರುತ್ತಿದೆ. ಉಳಿದ ಇತರೆ ಗೊಬ್ಬರ ಲಭ್ಯವಿದೆ. ಫಸಲ್‌ ಬಿಮಾ ಯೋಜನೆಯಲ್ಲಿ ವಿಮಾ ಕಂಪನಿಯ ಆ್ಯಪ್‌ ಮೂಲಕ ಕೆಲ ಮಾನದಂಡಗಳಂತೆ ತಾಲೂಕಿನ 3 ಗ್ರಾಪಂಗಳ ರೈತರಿಗೆ ಬೆಳೆ ವಿಮೆ ಹಣ ಪಾವತಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಹಾಗೂ ತಾಪಂ ಆಡಳಿತಾಧಿ ಕಾರಿ ಶಿವರಾಜ್‌ ಕುಲಕರ್ಣಿ, ತಾಪಂ ವ್ಯವಸ್ಥಾಪಕ ನಂದೀಶ್‌, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವಿರೂಪಾಕ್ಷಪ್ಪ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಡಿ. ಚಿದಾನಂದಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಯತೀಶ್‌, ಬಿಸಿಎಂ ವಿಸ್ತರಣಾಧಿಕಾರಿ ಶೇಖರಪ್ಪ, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಎಂ. ಹನುಮಂತಪ್ಪ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಪಾತಲಿಂಗಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ. ಸವಿತಾ, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ| ತಿಮ್ಮಣ್ಣ, ವಿವಿಧ ಇಲಾಖಾ ಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.