23 ರಿಂದ ಭದ್ರಾ ಕಾಲುವೆಗಳಿಗೆ ನೀರು: ಪವಿತ್ರಾ ರಾಮಯ್ಯ
Team Udayavani, Jul 16, 2021, 11:04 PM IST
ಶಿವಮೊಗ್ಗ: ಭದ್ರಾ ಜಲಾಶಯ ಅಚ್ಚುಕಟ್ಟು ಪ್ರದೇಶದ ಮುಂಗಾರು ಹಂಗಾಮಿನ ಬೆಳೆಗಳಿಗಾಗಿ ಬಲದಂಡೆ ಮತ್ತು ಎಡದಂಡೆ ಕಾಲುವೆ ಹಾಗೂ ಶಾಖಾ ನಾಲೆಗಳಿಗೆ ಜು.23 ರ ಮಧ್ಯರಾತ್ರಿಯಿಂದ 120 ದಿನ ನೀರು ಹರಿಸಲು ನಿರ್ಧರಿಸಲಾಗಿದೆ. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆ ವಹಿಸಿದ್ದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಮಾತನಾಡಿ ನೀರಾವರಿ ಸಲಹಾ ಸಮಿತಿಯ ಸರ್ವ ಸದಸ್ಯರು ಹಾಗೂ ರೈತರೊಂದಿಗೆ ಚರ್ಚೆ ನಡೆಸಿ ಒಮ್ಮತದಿಂದ ಭದ್ರಾ ಬಲದಂಡೆ, ಎಡದಂಡೆ ನಾಲೆ, ಆನವೇರಿ, ದಾವಣಗೆರೆ, ಮಲೆಬೆನ್ನೂರು ಮತ್ತು ಹರಿಹರ ಶಾಖಾನಾಲೆಗಳಲ್ಲಿ ಜು. 23 ರಿಂದ ನೀರು ಹರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಜು.14 ರಂದು ಜಲಾಶಯದಲ್ಲಿ 157 ಅಡಿ 4 ಇಂಚುಗಳಷ್ಟು ನೀರು ಸಂಗ್ರಹವಿದೆ. ಈ ಮಟ್ಟಕ್ಕೆ ನೀರಿನ ಸಂಗ್ರಹಣೆ 40.484 ಟಿಎಂಸಿ ಇದೆ. ಇದರಲ್ಲಿ 8.50 ಟಿ.ಎಂ.ಸಿ ಬಳಕೆಗೆ ಬಾರದ (ಡೆಡ್ ಸ್ಟೋರೇಜ್) ಪ್ರಮಾಣವಾಗಿದ್ದು, 26.652 ಟಿಎಂಸಿ ಬಳಕೆಗೆ ಬರುವ ನೀರಿನ ಪ್ರಮಾಣವಾಗಿದೆ. ಭದ್ರಾ ಬಲದಂಡೆ ಕಾಲುವೆಗೆ ಪ್ರತಿದಿನ ಸರಾಸರಿ 3050 ಕ್ಯೂಸೆಕ್ ಮತ್ತು ಭದ್ರಾ ಎಡದಂಡೆ ಕಾಲುವೆಗೆ 490 ಒಟ್ಟು 3540 ಕ್ಯೂಸೆಕ್ ನೀರು ಹರಿಸಲು ಬೇಡಿಕೆ ಇದೆ. ಪ್ರಸ್ತುತ ಜಲಾಶಯದಲ್ಲಿ ಬಳಕೆಗೆ 26.652 ಟಿಎಂಸಿ ನೀರು ಲಭ್ಯವಿದ್ದು ಮುಂಗಾರು ಅವಧಿಗೆ 49.13 ಟಿಎಂಸಿ ನೀರಿನ ಅವಶ್ಯಕತೆ ಇದೆ.
ಕೊರತೆಯಿರುವ ನೀರಿನ ಪ್ರಮಾಣ 22.478 ಟಿಎಂಸಿ, ಆಗಿದ್ದು ಇದರ ಆಧಾರದಲ್ಲಿ ಎಲ್ಲರ ಸದಸ್ಯರು ಚರ್ಚಿಸಿ ಜು.23 ರಿಂದ ನೀರು ಹರಿಸಲು ನಿರ್ಧರಿಸಿದ್ದೇವೆ ಎಂದರು. ಸಲಹಾ ಸಮಿತಿ ಸದಸ್ಯ ಷಡಾಕ್ಷರಪ್ಪ ಮಾತನಾಡಿ, ನೀರಾವರಿ ಸಲಹಾ ಸಮಿತಿ ಸಭೆ ಕರೆಯದೆ, ಚರ್ಚೆ ಮಾಡದೇ ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಅ ಕಾರಿಗಳೇ ನೀರು ಬಿಡುವುದಾದರೆ ಸಮಿತಿ ಇದ್ದು ಉಪಯೋಗವೇನು? ಜು. 6 ರ ಸರ್ಕಾರಿ ಆದೇಶದ ಪ್ರಕಾರ ಜು.7 ರಿಂದ (ಅಕ್ಟೋಬರ್ 15 ರವರಗೆ) ಪ್ರತಿ ದಿನ ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ನೀರನ್ನು ಹರಿಸಲಾಗುತ್ತಿದೆ ಎಂದರು. ತ್ಯಾವಣಿಗಿ ಉಪವಿಭಾಗದ ಸದಸ್ಯರಾದ ತೇಜಸ್ವಿ ಪಟೇಲ್ ಮಾತನಾಡಿ, ಯಾವುದೇ ಯೋಜನೆಗಳಿಗೆ ನೀರು ಹರಿಸಲು ಸಮಿತಿ ತೀರ್ಮಾನವೇ ಅಂತಿಮ.
ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಹರಿಸುವ ಮುನ್ನ ಭದ್ರಾ ಅಚ್ಚುಕಟ್ಟು ಪ್ರದೇಶ ನಿರ್ವಹಣೆಗೆ ಬೇಕಾದ ನೀರಿನ ಪ್ರಮಾಣ ಎಷ್ಟು ಎಂಬ ಆಧಾರದಲ್ಲಿ ಚರ್ಚೆ ಆಗಬೇಕು. ನೀರು ಉಳಿದರೆ ಮೇಲ್ದಂಡೆ ಯೋಜನೆಗೆ ಹರಿಸಬಹುದು ಎಂದು ಸಲಹೆ ನೀಡಿದರು.
ಸಭೆಯಲ್ಲಿ ನೀರಾವರಿ ಸಲಹಾ ಸಮಿತಿ ಸದಸ್ಯರಾದ ರುದ್ರಮೂರ್ತಿ, ಸದಾಶಿವಪ್ಪಗೌಡ, ರಾಜಪ್ಪ, ಹನುಮಂತಪ್ಪ, ದ್ಯಾಮಪ್ಪ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಮುಖ್ಯ ಇಂಜಿನಿಯರ್ ಯತೀಶ್ಚಂದ್ರ, ಮುಖ್ಯ ಆಡಳಿತಾಧಿ ಕಾರಿ ಕೃಷ್ಣಮೂರ್ತಿ ಬಿ. ಕುಲಕರ್ಣಿ, ಭದ್ರಾ ಯೋಜನಾ ವೃತ್ತ ಅಧಿಧೀಕ್ಷಕ ಅಭಿಯಂತರ ಚಂದ್ರಹಾಸ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.