ಮೂರನೇ ಅಲೆ: ನಿರ್ಲಕ್ಷ್ಯ ಬೇಡ; ಎಚ್ಚರಿಕೆ ಇರಲಿ
Team Udayavani, Jul 17, 2021, 6:45 AM IST
ದೇಶದಲ್ಲಿ ಇನ್ನೂ ಕೊರೊನಾ ಅಟ್ಟಹಾಸ ಮುಗಿದಿಲ್ಲ. ಪ್ರವಾಸಿ ಕ್ಷೇತ್ರಗಳಲ್ಲಿ, ಮಾರುಕಟ್ಟೆಗಳಲ್ಲಿ ಜನ ಸೇರುವುದು ಹೆಚ್ಚಾಗುತ್ತಲೇ ಇದೆ. ಇದರ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಮೂರ್ನಾಲ್ಕು ದಿನಗಳಿಂದ ಕೊರೊನಾ ಹೆಚ್ಚಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ, ನಿಯಂತ್ರಣಕ್ಕಾಗಿ ಸಲಹೆ, ಸೂಚನೆ ನೀಡಿದ್ದಾರೆ.
ಇದರ ಮಧ್ಯೆಯೇ ಕೇಂದ್ರ ಸರಕಾರ ನೇಮಕ ಮಾಡಿದ್ದ ಕೊರೊನಾ ಕಾರ್ಯಪಡೆ ಮುಂದಿನ 125 ದಿನಗಳು ನಿರ್ಣಾಯಕ ಎಂದಿದೆ. ಇನ್ನೂ ಜನರಲ್ಲಿ ಕೊರೊನಾ ಪ್ರತಿರೋಧಕ ಶಕ್ತಿ ಬೆಳೆದಿಲ್ಲ ಎಂದು ನೀತಿ ಆಯೋಗದ ಸದಸ್ಯ ಡಾ|ವಿ.ಕೆ.ಪೌಲ್ ಎಚ್ಚರಿಕೆ ನೀಡಿದ್ದಾರೆ. ಇನ್ನು ದೇಶದಲ್ಲಿ ಕೊರೊನಾ ಇಳಿಮುಖವಾಗುತ್ತಿರುವ ಪ್ರಮಾಣ ತೀರಾ ನಿಧಾನಗತಿಯಲ್ಲಿದೆ. ಇದು ಆತಂಕಕಾರಿ. ಜತೆಗೆ ಮುಂದಿನ ನಾಲ್ಕು ತಿಂಗಳು ಜನರು ಹೇಗೆ ವರ್ತಿಸುತ್ತಾರೆ ಎಂಬುದರ ಮೇಲೆ ಮೂರನೇ ಅಲೆಯ ಭವಿಷ್ಯ ನಿಂತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಮ್ಯಾನ್ಮಾರ್, ಇಂಡೋನೇಷ್ಯಾ, ಮಲೇಷ್ಯಾ, ಬಾಂಗ್ಲಾದೇಶ ಸೇರಿದಂತೆ ಹಲವಾರು ದೇಶಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಇದು ಕಳವಳಕಾರಿ ಎಂದು ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ಹೇಳಿದ್ದಾರೆ.
ಹಾಗೆಯೇ ದೇಶದಲ್ಲಿ ಇನ್ನೂ 73 ಜಿಲ್ಲೆಗಳಲ್ಲಿ ಪ್ರತೀ ದಿನ 100ಕ್ಕೂ ಹೆಚ್ಚು ಕೇಸುಗಳು ಪತ್ತೆಯಾಗುತ್ತಿವೆ. 47 ಜಿಲ್ಲೆಗಳಲ್ಲಿ ಶೇ.10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಇವೆಲ್ಲದರ ನಡುವೆ ಶುಕ್ರವಾರ ಕರ್ನಾಟಕವೂ ಸೇರಿದಂತೆ ಆರು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಚರ್ಚೆ ನಡೆಸಿದ್ದು, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಪ್ರಸ್ತಾವಿಸಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದ್ದು, ಸಾಧ್ಯವಾದಷ್ಟು ನಿಯಂತ್ರಣಕ್ಕೆ ಆಯಾ ಜಿಲ್ಲಾಡಳಿತಗಳು ಕ್ರಮ ವಹಿಸಬೇಕು ಎಂಬ ಸೂಚನೆಯನ್ನೂ ನೀಡಿದ್ದಾರೆ. ಪರೀಕ್ಷೆ, ಪತ್ತೆ, ಚಿಕಿತ್ಸೆ ಮತ್ತು ಲಸಿಕೆ ನೀಡುವುದನ್ನು ಮುಂದುವರಿಸಬೇಕು ಎಂದೂ ಹೇಳಿದ್ದಾರೆ. ಅಲ್ಲದೆ ಮೂರನೇ ಅಲೆ ಬರಲಿದೆ ಎಂದು ಹೇಳುವುದಕ್ಕಿಂತ ಇದನ್ನು ತಪ್ಪಿಸಲು ಕ್ರಮ ತೆಗೆದುಕೊಳ್ಳಬೇಕು. ಸದ್ಯಕ್ಕಂತೂ ನಾವು ಮೂರನೇ ಅಲೆ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ. ಅಲ್ಲದೆ, ಕಳೆದ ಕೆಲವು ದಿನಗಳಿಂದ ಶೇ.80ರಷ್ಟು ಕೇಸುಗಳು ಕೇವಲ 6 ರಾಜ್ಯಗಳಿಂದಲೇ ಬರುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಎಂದೂ ಮೋದಿ ಅವರು ಎಚ್ಚರಿಕೆ ನೀಡಿದ್ದಾರೆ.
ಪ್ರಧಾನಿ ಅವರು ಹೇಳಿದಂತೆ ಕೊರೊನಾ ಹೆಚ್ಚಿರುವ ರಾಜ್ಯಗಳ ಜತೆಗೆ, ಸೋಂಕು ಕಡಿಮೆ ಇರುವ ರಾಜ್ಯಗಳಲ್ಲೂ ಸರಕಾರಗಳು ಸೋಂಕಿನ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲೇಬೇಕು. ಸೋಂಕು ಹೆಚ್ಚಳವಾಗುವುದು ಅಥವಾ ಕಡಿಮೆಯಾಗುವುದು ಎರಡೂ ಜನರ ಕೈಯಲ್ಲೇ ಇದೆ. ಸಾಧ್ಯವಾದಷ್ಟು ಸರಕಾರಗಳು ಹೇಳಿರುವ ಕೊರೊನಾ ನಿಯಮಾವಳಿಗಳನ್ನು ಪಾಲಿಸಬೇಕು. ಸಾರ್ವಜನಿಕವಾಗಿ ಗುಂಪು ಸೇರದೇ ಇರಬೇಕು, ಕಡ್ಡಾಯವಾಗಿ ಮಾಸ್ಕ್ ಬಳಸಿ, ಪ್ರವಾಸಗಳನ್ನು ಮುಂದೂಡಬೇಕು. ಇದರ ಜತೆಗೆ ಜನರೂ ಬೇಗನೇ ಲಸಿಕೆ ಪಡೆದು ಸುರಕ್ಷಿತರಾಗಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.