ಸೂರಿಗಾಗಿ ನಟ ಸೋನು ಸೂದ್‌ ಮೊರೆ ಹೋದ ಸುಡುಗಾಡು ಸಿದ್ಧರ ಕುಟುಂಬಸ್ಥರು

Team Udayavani, Jul 17, 2021, 5:15 PM IST

16hvr9

ಹಾವೇರಿ: ಕೋವಿಡ್‌ ಸಂದರ್ಭದಲ್ಲಿ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿ ತಮ್ಮ ಸಹಾಯಹಸ್ತ ಚಾಚಿದ್ದ ಖ್ಯಾತ ನಟ ಸೋನು ಸೂದ್‌ ಅವರನ್ನು ಇಲ್ಲಿಯ ಸುಡುಗಾಡು ಸಿದ್ಧರ ಕುಟುಂಬದ ಯುವಕರು ಭೇಟಿಯಾಗಿ ಶಾಶ್ವತ ಸೂರಿಗಾಗಿ ಮೊರೆಯಿಟ್ಟಿದ್ದಾರೆ.

ಅಲೆಮಾರಿಗಳ ಸಂಕಷ್ಟ ಆಲಿಸಿದ ಸೋನು ಸೂದ್‌ ತಮ್ಮ ಕೈಲಾದ ನೆರವು ನೀಡುವುದಾಗಿ ಭರವಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಇಲ್ಲಿಯ ಹೊರವಲಯದಲ್ಲಿರುವ ಶಾಂತಿನಗರದ ಬಳಿ ನಗರಸಭೆಯ ನಿವೇಶನದಲ್ಲಿ ತಾತ್ಕಾಲಿಕ ಟೆಂಟ್‌ ಗಳಲ್ಲಿ ವಾಸವಾಗಿರುವ ಸುಡುಗಾಡು ಸಿದ್ಧರ ಕುಟುಂಬಗಳ ಯುವಕರು ತಮ್ಮ ಜನಾಂಗದ ಸುಮಾರು 40 ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಿಕೊಳ್ಳುವುದಕ್ಕಾಗಿ ಬಹುಭಾಷಾ ನಟ ಸೋನು ಸೂದ್‌ ಅವರನ್ನು ಶುಕ್ರವಾರ ಮುಂಬೈನ ಅವರ ನಿವಾಸದಲ್ಲಿ ಭೇಟಿಯಾಗಿ ಅಳಲು ತೋಡಿಕೊಂಡರು.

ಗುರುವಾರ ರಾತ್ರಿ ಹಾವೇರಿಯಿಂದ ದಾದರ್‌ ಎಕ್ಸ್‌ಪ್ರೆಸ್‌ ರೈಲಿನ ಮೂಲಕ ಅಲೆಮಾರಿ ಸುಡುಗಾಡು ಸಿದ್ಧರ ಕುಟುಂಬದ ಆರು ಜನ ಯುವಕರಾದ ಶೆಟ್ಟಿ ವಿಭೂತಿ, ಗಂಗಾಧರ ಬಾದಗಿ, ಹುಸೇನಪ್ಪ ಬಾದಗಿ, ರವಿ ಬಾದಗಿ, ಆನಂದ ಕೋಮಾರಿ, ರಮೇಶ ಉಕ್ಕುಂದ ಶುಕ್ರವಾರ ಬೆಳಗ್ಗೆ ಮುಂಬೈ ತಲುಪಿದ್ದಾರೆ.

ಮುಂಬೈ ಮಹಾನಗರದಲ್ಲಿ ಸೋನು ಸೂದ್‌ ಮನೆ ಹುಡುಕಲು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12ರವರೆಗೂ ಅಲೆದಾಡಿದ್ದಾರೆ. ಅವರಿವರನ್ನು ಕೇಳುತ್ತ ಅಂತೂ ಸೂದ್‌ ಅವರ ಮನೆ ಹುಡುಕವಲ್ಲಿ ಯಶಸ್ವಿಯಾಗಿದ್ದಾರೆ. ಇಷ್ಟು ದೂರದಿಂದ ತಮ್ಮ ಭೇಟಿಗೆ ಬಂದ ವಿಷಯ ತಿಳಿದ ನಟ ಸೋನು ಸೂದ್‌ 12.30ಕ್ಕೆ ಅಲೆಮಾರಿ ಯುವಕರನ್ನು ಭೇಟಿಯಾಗಿದ್ದಾರೆ. ಅಲೆಮಾರಿಗಳಾದ ನಾವು ತಾತ್ಕಾಲಿಕ ಶೆಡ್‌ನ‌ಲ್ಲಿ ವಾಸವಾಗಿದ್ದೇವೆ. ಸ್ಥಳೀಯ ಆಡಳಿತದಿಂದ ನಮಗೆ ಸೂರು ಸಿಗುತ್ತಿಲ್ಲ. ತಾವು ನಮ್ಮ ನೆರವಿಗೆ ಬರಬೇಕೆಂದು ಯುವಕರು ಮೊರೆ ಇಟ್ಟರು.

ಯುವಕರ ಸಮಸ್ಯೆ ಶಾಂತಚಿತ್ತರಾಗಿ ಆಲಿಸಿದ ಸೋನು ಸೂದ್‌, ಸದ್ಯ ದೇಶಾದ್ಯಂತ ಜನರು ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಿ ಶಾಶ್ವತ ಸೂರು ಕಲ್ಪಿಸುವುದು ಕಷ್ಟ. ಆದರೆ, ನಿಮ್ಮ ಸಮುದಾಯಕ್ಕೆ ಅಗತ್ಯವಿರುವ ರೇಶನ್‌, ಔಷಧ, ಆಸ್ಪತ್ರೆಯಲ್ಲಿ ಚಿಕಿತ್ಸೆ ಅಗತ್ಯವಿದ್ದರೆ ಅದಕ್ಕೆ ನೆರವು, ಮಕ್ಕಳಿಗೆ ಶೈಕ್ಷ‌ಣಿಕ ನೆರವು ನೀಡುತ್ತೇನೆ ಎಂದು ಭರವಸೆ ನೀಡಿದರು.

ಬಹುಭಾಷಾ ಚಿತ್ರನಟ ನಮ್ಮನ್ನು ಭೇಟಿಯಾಗಿ ಅರ್ಧ ತಾಸು ನಮ್ಮೊಂದಿಗಿದ್ದು ಸಮಸ್ಯೆ ಅಲಿಸಿದರು. ಕೈಲಾದ ಸಹಾಯ ನೀಡುವುದಾಗಿ ಭರವಸೆ ನೀಡಿದರು. ಇದು ನಮಗೆ ಖುಷಿ ನೀಡಿತು ಎಂದು ಸೋನು ಸೂದ್‌ರನ್ನು ಭೇಟಿಯಾದ ಯುವಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

BPL-CARD

Food Department Operation: ಬಿಪಿಎಲ್‌ ಚೀಟಿದಾರರಿಗೆ ಎಪಿಎಲ್‌ ಕಾವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.