ಅಗತ್ಯವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೈ ಕಾರ್ಯಕರ್ತರ ಪ್ರತಿಭಟನೆ

Team Udayavani, Jul 18, 2021, 9:29 AM IST

ಅಗತ್ಯವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೈ ಕಾರ್ಯಕರ್ತರ ಪ್ರತಿಭಟನೆ

ಹುಣಸೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ  ಅಗತ್ಯವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ಕರೆನೀಡಿದ್ದ ಪ್ರತಿಭಟನೆಗೆ  ಹುಣಸೂರಿನಲ್ಲಿ ಕಾಂಗ್ರೆಸ್ ಪಕ್ಷವು ಶಾಸಕ ಎಚ್.ಪಿ.ಮಂಜುನಾಥ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಅಮರ್‌ನಾಥ್, ಜಿಲ್ಲಾ ಅಧ್ಯಕ್ಷ ಡಾ.ವಿಜಯ್‌ಕುಮಾರ್  ನೇತೃತ್ವದಲ್ಲಿ ಬೈಸಿಕಲ್ ಹಾಗೂ ಜೋಡೆತ್ತಿನ ಗಾಡಿ ಹೊಡೆಯುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಕಾಂಗ್ರೆಸ್ ಕಚೇರಿ ಎದುರು ಕಾಂಗ್ರೆಸ್ ಮುಖಂಡರೊಂದಿಗೆ ಬೈಸಿಕಲ್ ಏರಿದ  ಶಾಸಕ ಎಚ್.ಪಿ.ಮಂಜುನಾಥ್ ಮತ್ತಿತರ ಮುಖಂಡರು, ಕಲ್ಪತರು ವೃತ್ತದ ಬಳಿ ಜೋಡೆತ್ತಿನ ಗಾಡಿಯಲ್ಲಿ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ, ತಹಸೀಲ್ದಾರ್ ಬಸವರಾಜುರಿಗೆ ಮನವಿ ಸಲ್ಲಿಸಿದರು. ಮೆರವಣಿಗೆಯಲ್ಲಿ ನೂರಕ್ಕೂ ಹೆಚ್ಚು ಯುವಪಡೆ ಬೈಸಿಕಲ್, ೫೦ಕ್ಕೂ ಹೆಚ್ಚು ಜೋಡೆತ್ತಿನ ಗಾಡಿಗಳಲ್ಲಿ ಮುಖಂಡರು ಸೇರಿದಂತೆ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸಾಗಿಬಂದರು.

ಮೆರವಣಿಗೆಗೂ ಮುನ್ನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಮಾರಂಭ ಉದ್ಘಾಟಿಸಿದ ಶಾಸಕ ಮಂಜುನಾಥ್ ಮಾತನಾಡಿ ಕೋವಿಡ್‌ನಿಂದ ಹುತಾತ್ಮರಾದವರ ಮನೆಗಳಿಗೆ ಕಾರ್ಯಕರ್ತರು ಮುಖಂಡರು ತೆರಳಿ, ಸರಕಾರದ ಸೌಲಭ್ಯ ಪಡೆದುಕೊಳ್ಳಲು ನೆರವಾಗಬೇಕು. ಕೊವಿಡ್‌ನಿಂದ ಗುಣಮುಖರಾದ ನಂತರ ಸಾವನ್ನಪ್ಪಿದ ಕುಟುಂಬಕ್ಕೆ ಪ್ರಮಾಣ ಪತ್ರ ಪಡೆಯಲು ಸಮಸ್ಯೆ ಇದ್ದು, ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಅಂತ ಕುಟುಂಬಗಳನ್ನು ಗುರ್ತಿಸಿ ನೆರವು ನೀಡಬೇಕು. ಇಂತ ಕುಟುಂಬಕ್ಕೆ ಕಾರ್ಯಕರ್ತರು ನೆರವಾಗಬೇಕೆಂದರು.

ಇನ್ನು ಕಾರ್ಮಿಕರಿಗೆ ಪಡಿತರ ವಿಚಾರದಲ್ಲೂ ಹಲವೆಡೆ ಗಲಾಟೆ ಲಾಠಿಚಾರ್ಜ್ ಆಗಿರುವುದನ್ನು ಗಮನಿಸಿದ್ದೇವೆ, ಹುಣಸೂರಲ್ಲಿ ಗೊಂದಲಕ್ಕೆ ಆಸ್ಪದ ನೀಡದೆ ಸಂಕಷ್ಟದಲ್ಲಿರುವವವರ ನೆರವಿಗೆ ಆಡಳಿತದೊಂದಿಗೆ ಕಾರ್ಯಕರ್ತರು ಕೈಜೋಡಿಸಿ ನೆರವು ನೀಡಿದೆ ಎಂದು ನೆರವಾದವರನ್ನು ಸ್ಮರಿಸಿದರು.

ಮಲತಾಯಿ ದೋರಣೆ;

ಎರಡು ಬಾರಿ ಮುಖ್ಯಮಂತ್ರಿಗಳಾಗಿರುವ ಯಡಿಯೂರಪ್ಪನವರು ತಾಲೂಕಿಗೆ ಮಲತಾಯಿ ಧೋರಣೆ ತಳೆದಿದ್ದಾರೆ,ಅರಸರು ತಾಲೂಕಿಗಲ್ಲದೆ ರಾಜ್ಯ-ದೇಶಕ್ಕೆ ಅಪಾರ ಕೊಡುಗೆ ನೀಡಿದ್ದರು, ಹೆಗ್ಗಡೆಯುವರ ಅವಧಿಯಲ್ಲಿ ಚಂದ್ರಪ್ರಭಾಅರಸ್ ಕಟ್ಟೆಕಟ್ಟಿ ಕಾಲರ ಸಾಂಕ್ರಾಮಿಕ ರೋಗ ತೊಲಗಲು ಕಾರಣರಾಗಿದ್ದರು. ಆಸ್ಪತ್ರೆ ನಿರ್ಮಿಸಿದ್ದರು. ಇನ್ನು ಸಿದ್ದರಾಮಯ್ಯನವರ ಅವಧಿಯಲ್ಲಿ ಸಾವಿರಾರು ಕೋಟಿ ರೂಗಳ ಅಭಿವೃದ್ದಿ ಕಾರ್ಯ ನಡೆಯಿತು. ಆದಿನಗಳ ಅವಧಿಯ ಕಾಮಗಾರಿಗಳೇ ಇನ್ನೂ ನಡೆಯುತ್ತಿವೆ, ಯಡಿಯೂರಪ್ಪನವರು ಎರಡು ಮಠಕ್ಕೆ ತಲಾ ೫೦ ಲಕ್ಷ ನೀಡಿದ್ದರೆ, ಸಿದ್ದರಾಮಯ್ಯನವರು ಎರಡೆರಡು ಕೋಟಿ ನೀಡಿದ್ದಾರೆ. ತಾಲೂಕಿಗೆ ಯಾವುದೇ ಹೊಸ ಯೋಜನೆಗಳಿಗೆ ಅನುದಾನ ನೀಡದೆ ಅನ್ಯಾಯ ಮಾಡಿದ್ದಾರೆ.

ಹುಣಸೂರಿನ ಋಣದಿಂದಲೇ ಮುಖ್ಯಮಂತ್ರಿಯಾದ ಯಡಿಯೂರಪ್ಪನವರು ಹುಣಸೂರನ್ನೇ ಮರೆತಿದ್ದಾರೆಂದು ಶಾಸಕ ಎಚ್.ಪಿ.ಮಂಜುನಾಥ್ ಛೇಡಿಸಿದರು.

ಹುಣಸೂರಿನಲ್ಲಿ ಪಕ್ಷದವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಗೂ ಮುನ್ನ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು ಇಲ್ಲಿನ ಮತದಾರರು ಎಚ್‌ವಿಶ್ವನಾಥರ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದ್ದರು. ನಂತರದಲ್ಲಿ ವಿಶ್ವನಾಥರು ಬಿಜೆಪಿಗೆ ಹೋಗಿದ್ದರಿಂದಾಗಿ ನೀವು ಮುಖ್ಯ ಮಂತ್ರಿಯಾಗಿದ್ದೀರಾ ಯಡಿಯೂರಪ್ಪನವರೇ, ಇಲ್ಲಿನ ಜನರಿಗೆ ಬೇಕಾದ ಯೋಜನೆಗಳಿಗೆ ಅನುದಾನ ನೀಡುವ ಮೂಲಕವಾದರೂ ಈ ಜನರ ಋಣ ತೀರಿಸಬೇಕೆಂದರು. ಇನ್ನು ಎಂಎಲ್.ಸಿ.ವಿಶ್ವನಾಥ್ ಸಾಹೇಬರು ಸಹ ಮುಖ್ಯಮಂತ್ರಿ ಆಪ್ತ ಸಹಾಯಕ ಲೋಕೇಶ್‌ರೊಂದಿಗೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯದ ವಿಚಾರವಾಗಿ ತರಾಟೆ ತೆಗೆದುಕೊಂಡಿದ್ದಾರೆ, ಹೀಗಿದ್ದರೂ ಕಿಲುಬು ಕಾಸು ನೀಡಿಲ್ಲ, ಸರಕಾರ ರಚನೆಗೆ ನೆರವಾದವರನ್ನೇ ಕಡೆಗಣಿಸುವುದು ನಾಚಿಕೆಗೇಡೆಂದು ಛೇಡಿಸಿ, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ರನ್ನು ಸಂಪರ್ಕಿಸಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ಮನವಿ ಮಾಡಿದ್ದೇನೆಂದು ಶಾಸಕ ಎಚ್.ಪಿ.ಮಂಜುನಾಥ್ ತಿಳಿಸಿದರು.

ಇನ್ನು ಸಮರ್ಥ ಪ್ರಧಾನಿ ಯಾಗಬೇಕೆಂದಿದ್ದ ಮೋದಿಯವರೇ 7 ವರ್ಷಗಳಿಂದ ಪ್ರಧಾನಿಯಾಗಿದ್ದಾರೆ, ೭೦ ವರ್ಷ ದೇಶವನ್ನು ಹಾಳು ಮಾಡಿದೆ ಎನ್ನುವವವರು ಕೇಂದ್ರದಲ್ಲಿ ಅಧಿಕಾರಕ್ಕೇರಿದ ಕೇವಲ ೭ ವರ್ಷದಲ್ಲೇ ದೇಶವನ್ನು ಅಧೋಗತಿಗಿಳಿಸಿದೆ, ಜಿಡಿಪಿ ದರ ಕುಸಿದಿದೆ, ಪೆಟ್ರೋಟ್ ದರ ೪೦ರೂ ಹೆಚ್ಚಿದೆ ಇದೇನಾ ಅಚ್ಚೆದಿನ್ ಎಂದು ಟೀಕಿಸಿದರು.

ಈ ವೇಳೆ ಡಾ.ಪುಷ್ಪಅಮರ್‌ನಾಥ್, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಡಿಸಿಸಿಯ ಸುರೇಶ್ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಅನುಷಾರಘು, ವೀಕ್ಷಕ ಲೋಕೇಶ್, ಟಿಎಪಿಸಿಎಂ.ಎಸ್ ಅಧ್ಯಕ್ಷ ಅಸ್ವಾಳುಕೆಂಪೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾರಾಯಣ್, ಕಲ್ಕುಣಿಕೆರಮೇಶ್, ದೇವರಾಜ್, ಸ್ವರೂಪ್, ಮುಖಂಡರಾದ ಶಿವನಾಗಪ್ಪ, ಲೋಕೇಶ್, ರಾಜುಶಿವರಾಜೇಗೌಡ, ರಾಘು, ಸೇರಿದಂತೆ ಕಾರ್ಯಕರ್ತರ ಪಡೆ ಇತ್ತು.

ಟಾಪ್ ನ್ಯೂಸ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.