ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 41.99 ಕೋಟಿ ಲಸಿಕಾ ಡೋಸ್ ಗಳ ಪೂರೈಕೆ : ಕೇಂದ್ರ
Team Udayavani, Jul 18, 2021, 2:21 PM IST
ನವ ದೆಹಲಿ : ಕೋವಿಡ್ ಸೋಂಕಿನ ಎರಡನೇ ಅಲೆ ಸುಧಾರಸಿಕೊಳ್ಳುತ್ತಿದ್ದಂತೆ ದೇಶದಾದ್ಯಂತ ಲಸಿಕಾ ಅಭಿಯಾನಕ್ಕೆ ಕೇಂದ್ರ ಸರ್ಕಾರ ವೇಗ ನೀಡುತ್ತಿದೆ.
ಈಗಾಗಲೇ ದೇಶದ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 41.99 ಕೋಟಿ ಲಸಿಕೆಗಳ ಡೋಸ್ ಗಳನ್ನು ಕೇಂದ್ರ ಸರ್ಕಾರದಿಂದ ಪೂರೈಸಲಾಗಿದೆ ಹಾಗೂ 2.56 ಕೋಟಿ ಲಸಿಕೆಗಳ ಡೋಸ್ ಗಳು ಈಗಾಗಲೇ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ : ವಿಡಿಯೋ: ಗಾಯಗೊಂಡ ಆಟಗಾರನನ್ನು ಔಟ್ ಮಾಡದೆ ಕ್ರೀಡಾ ಸ್ಪೂರ್ತಿ ಮೆರೆದ ಜೋ ರೂಟ್ ಪಡೆ
15, 75, 140 ಲಸಿಕೆಗಳ ಡೋಸ್ ಗಳು ದೇಶದ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಪೂರೈಸುವುದಕ್ಕೆ ಸಿದ್ಧವಾಗಿದೆ ಎಂದು ಕೂಡ ಮಾಹಿತಿ ನೀಡಿದೆ.
ಲಸಿಕೆಯನ್ನು ನೀಡಿದ್ದು ಹಾಗೂ ವ್ಯರ್ಥವಾದ ಲಸಿಕೆಗಳನ್ನು ಒಳಗೊಂಡು ಒಟ್ಟು 39,42,97,344 ಲಸಿಕೆಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗಿದೆ ಎಂದು ಭಾನುವಾರ ಬೆಳಿಗ್ಗೆ 8 ಗಂಟೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ ಸಚಿವಾಲಯ ತಿಳಿಸಿದೆ.
ಕೋವಿಡ್ 19 ಲಸಿಕಾ ಅಭಿಯಾನ ಕಾರ್ಯಕ್ರಮದ ಸಾರ್ವತ್ರಿಕೀಕರಣದ ಹೊಸ ಹಂತವು ಜೂನ್ 21 ರಿಂದ ಪ್ರಾರಂಭವಾಯಿತು.
ಕಾರ್ಯಕ್ರಮದಡಿಯಲ್ಲಿ ಕೇಂದ್ರ ಸರ್ಕಾರವು ಎಲ್ಲಾ ವಯಸ್ಕರಿಗೆ ಉಚಿತವಾಗಿ ಇನಾಕ್ಯುಲೇಷನ್ ಮಾಡಿತು. 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆಗಳು ಉಚಿತವಾಗಿದ್ದವು.
ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದ ಅಡಿಯಲ್ಲಿ, ಭಾರತ ಸರ್ಕಾರವು ಲಸಿಕೆಗಳನ್ನು ನೀಡುವ ಮೂಲಕ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಬೆಂಬಲ ನೀಡುತ್ತಿದೆ ಎಂದು ಸಚಿವಾಲಯ ತಿಳಿಸಿದೆ.
ಕೇಂದ್ರ ಸರ್ಕಾರವು ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುವ ಲಸಿಕೆಗಳಲ್ಲಿ ಶೇಕಡಾ 75 ರಷ್ಟು ರಾಜ್ಯಗಳಿಗೆ / ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಸುತಯ್ತಿದೆ ಎಂದು ಮಾಹಿತಿ ನೀಡಿದೆ.
ಇದನ್ನೂ ಓದಿ : ವಿಡಿಯೋ: ಗಾಯಗೊಂಡ ಆಟಗಾರನನ್ನು ಔಟ್ ಮಾಡದೆ ಕ್ರೀಡಾ ಸ್ಪೂರ್ತಿ ಮೆರೆದ ಜೋ ರೂಟ್ ಪಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.