ಕಾನೂನು ದುರ್ಬಳಕೆ ವಿರೋಧಿಸಿ ಹೋರಾಟ
Team Udayavani, Jul 18, 2021, 8:49 PM IST
ದಾವಣಗೆರೆ: ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ ಮತ್ತು ದೇಶದ್ರೋಹ ಕಾನೂನು ದುರ್ಬಳಕೆ ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ ಆಗಸ್ಟ್ ತಿಂಗಳು ಪೂರ್ತಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದರು.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ ರದ್ದತಿ ಮತ್ತು ದೇಶದ್ರೋಹ ಕಾನೂನು ದುರ್ಬಳಕೆ ವಿರೋಧಿಸಿ ರಾಜ್ಯದ ಬೀದರ್‌ನಿಂದ ಹಿಡಿದು ಚಾಮರಾಜನಗರದವರೆಗೂ ಜಾಥಾ, ಪ್ರತಿಭಟನೆ, ಜನಾಂದೋಲನ, ವಿಚಾರಸಂಕಿರಣ ಆಯೋಜಿಸಿ ಹೋರಾಟ ನಡೆಸಲಾಗುವುದು ಎಂದರು.
ಕೇಂದ್ರದಲ್ಲಿ ಆಡಳಿತಕ್ಕೆ ಬಂದ ಬಿಜೆಪಿ ಸರ್ಕಾರ, ಪ್ರಗತಿಪರರ ಧ್ವನಿ ಹತ್ತಿಕ್ಕಲು ಕರಾಳ ಕಾನೂನು ಬಳಸಿಕೊಂಡು ದೇಶದಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ 5229 ಪ್ರಕರಣಗಳನ್ನು ದಾಖಲಿಸಿದೆ. ಬಡವರ, ಶೋಷಿತರ ಪರ ಹೋರಾಟ ಮಾಡುವಂತಹ ಪ್ರಗತಿಪರರ ವಿರುದ್ಧ ಈ ಕಾನೂನಿನಡಿ ಪ್ರಕರಣ ದಾಖಲಿಸಿ ಅವರನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ.
ಈ ಎರಡು ಕಾನೂನುಗಳ ಮೂಲಕ ಸರ್ಕಾರಗಳು ಪ್ರಗತಿಪರರ ವಿರುದ್ಧ ಪ್ರಕರಣ ದಾಖಲಿಸಿ ಅವರ ಧ್ವನಿ ಹತ್ತಿಕ್ಕುವ ಕೆಲಸ ನಡೆದಿದೆ. ಕಾಯ್ದೆ ರದ್ದು ಮಾಡುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದರು. ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು, ಸಹ ಕಾರ್ಯದರ್ಶಿ ಎಚ್.ಜಿ. ಉಮೇಶ್, ಆವರಗೆರೆ ವಾಸು, ಆನಂದರಾಜ್, ನಾಗರಾಜ್ ಟಿ.ಎಸ್. ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.