ಬಕ್ರೀದ್ ಹಬ್ಬಕ್ಕೆ ಗೋವುಗಳ ಬಲಿ ಬೇಡ: ಸಚಿವ ಪ್ರಭು ಚವ್ಹಾಣ್
Team Udayavani, Jul 19, 2021, 2:22 PM IST
ಬೆಂಗಳೂರು: ಬಕ್ರೀದ್ ಹಬ್ಬ ಎದುರಾಗುತ್ತಿದೆ ತ್ಯಾಗ ಮತ್ತು ಬಲಿದಾನದ ಹಬ್ಬ ಎಂದೇ ಕರೆಯುವ ಬಕ್ರೀದ್ ಹಬ್ಬದ ಸಮಯದಲ್ಲಿ ಸಹಜವಾಗಿಯೇ ಪ್ರಾಣಿಗಳ ಬಲಿ ನೀಡಲಾಗುತ್ತದೆ ಆದರೆ ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ರಾಜ್ಯದಿಂದ ಹೊರಗಡೆ ಅಥವಾ ಹೊರ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಯಾವುದೇ ಮಾರ್ಗದಿಂದ ಅಕ್ರಮ ಗೋವುಗಳು ಮತ್ತು ಗೋಮಾಂಸ ಸಾಗಿಸುವುದರ ಮೇಲೆ ಇಲಾಖೆಯ ಅಧಿಕಾರಿಗಳು ಹದ್ದಿನ ಕಣ್ಣಿಡಲು ಸಚಿವ ಪ್ರಭು ಚೌಹಾಣ್ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಾಮಾನ್ಯವಾಗಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಬಲಿಕೊಡುವ ಸಂಪ್ರದಾಯವಿದ್ದು ಇದಕ್ಕಾಗಿ ಗೋವುಗಳನ್ನು ಸಹ ಬಳಕೆಮಾಡಲಾಗುತ್ತದೆ ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಗೋಹತ್ಯೆ ನಿಷೇಧ ಅನುಷ್ಠಾನ ಆಗಿರುವುದರಿಂದ ಗೋವುಗಳ ಹತ್ಯೆ ಯಾವುದೇ ಕಾರಣಕ್ಕೂ ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ.
ರಾಜ್ಯದ ಎಲ್ಲ ಗಡಿಭಾಗಗಳಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಲು ತಿಳಿಸಲಾಗಿದ್ದು ಗೋಹತ್ಯೆ ನಿಷೇಧ ಕಾಯ್ದೆಯ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ.
ಒಂದು ವೇಳೆ ಎಲ್ಲಾದರೂ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವುದು ಕಂಡುಬಂದಲ್ಲಿ ಗೋಪಾಲಕರು ಗೋರಕ್ಷಕರು ಹಾಗೂ ಸಾರ್ವಜನಿಕರು ಪಶುಸಂಗೋಪನೆ ಇಲಾಖೆಯ ಪ್ರಾಣಿ ಕಲ್ಯಾಣ ಸಹಾಯವಾಣಿಗೆ ತಿಳಿಸಿ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಆದರೆ ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳುವುದು ಬೇಡ ಎಂದು ಸಚಿವರು ಮನವಿ ಮಾಡಿದ್ದಾರೆ.
ಸಮನ್ವಯತೆಯಿಂದ ಕಾರ್ಯನಿರ್ವಹಿಸಿ:
ಈಗಾಗಲೇ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈ ಕುರಿತಾಗಿ ಸಭೆಗಳು ನಡೆದಿದ್ದು ಗಡಿಭಾಗದಲ್ಲಿ ಪೊಲೀಸ್ ಇಲಾಖೆಯ ಜೊತೆಗೆ ಸೇರಿ ಕಟ್ಟುನಿಟ್ಟಿನ ನಿಗಾ ಇಡಲು ತಿಳಿಸಿದ್ದಾರೆ.
ಪ್ರಾಣಿ ಕಲ್ಯಾಣ ಮಂಡಳಿಗೆ ಸದಸ್ಯರಿಗೆ ವಲಯವಾರು ಜವಾಬ್ದಾರಿ ಹಂಚಿಕೆ ಮಾಡಲಾಗಿದ್ದು ಜಿಲ್ಲಾ ಎಸ್.ಪಿ ಸಿ.ಎ ಜೊತೆಗೆ ಸಮನ್ವಯ ಸಾಧಿಸಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಅಕ್ರಮ ಗೋವುಗಳ ಸಾಗಣೆ ಆಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ.
ಗೋಹತ್ಯೆ ಕಂಡುಬಂದರೆ ಶಿಸ್ತುಕ್ರಮ:
ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾವಾರು ಜವಾಬ್ದಾರಿ ನೀಡಲಾಗಿದ್ದು ಅವರಿಗೆ ಸಂಬಂಧಪಟ್ಟ ಪ್ರದೇಶದಲ್ಲಿ ಗೋಹತ್ಯೆ ನಡೆದಿದ್ದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
ವದಂತಿಗಳಿಗೆ ಕಿವಿ ಕೊಡಬೇಡಿ:
ಸಮಾಜದಲ್ಲಿ ಸಾಮಾಜಿಕ ಸಾಮರಸ್ಯ ಕದಡಲು ಅನೇಕರು ಸಾಮಾಜಿಕ ಜಾಲತಾಣವನ್ನು ಮಾಧ್ಯಮವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಾರೆ ಗೋಹತ್ಯೆ ಕುರಿತಾಗಿ ಯಾವುದೇ ಸುಳ್ಳು ಸುದ್ದಿ ಅಥವಾ ಸಂದೇಶಗಳನ್ನು ಹರಿಬಿಡುವುದು ಸಮಾಜದಲ್ಲಿ ಅಶಾಂತಿ ನಿರ್ಮಿಸಲು ಪ್ರಯತ್ನಿಸುವುದು ಕಂಡುಬಂದಲ್ಲಿ ಪೊಲೀಸ್ ಇಲಾಖೆ ಅಂಥವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.