ಮೂರನೇ ಅಲೆ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆ


Team Udayavani, Jul 19, 2021, 6:35 PM IST

19-20

ಚಿತ್ರದುರ್ಗ: ಕೋವಿಡ್‌ ಮೂರನೇ ಅಲೆ ಮಕ್ಕಳಿಗೆ ಅಪಾಯ ತಂದೊಡ್ಡಲಿದೆ ಎಂಬ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು. ಜಿಲ್ಲಾಸ್ಪತ್ರೆಯ ಬಿ.ಸಿ. ರಾಯ್‌ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1.20 ಕೋಟಿ ರೂ. ವೆಚ್ಚದಲ್ಲಿ 230 ಹಾಸಿಗೆಗಳಿಗೆ ಆಕ್ಸಿಜನ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಕೋವಿಡ್‌ ರೋಗಿಗಳ ಜೀವ ಉಳಿಸಲು ಈ ಹಿಂದೆ 170 ಬೆಡ್‌ಗಳಿಗೆ ಆಕ್ಸಿಜನ್‌ ವ್ಯವಸ್ಥೆ ಇತ್ತು. ಆದರೆ ಇದು ಸಾಕಾಗಾದ ಕಾರಣ ಈಗ ಹೆಚ್ಚುವರಿಯಾಗಿ 230 ಬೆಡ್‌ಗಳಿಗೆ ಆಕ್ಸಿಜನ್‌ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ 41 ಬೆಡ್‌, ಆಸ್ಪತ್ರೆಯ ಮುಖ್ಯ ಕಟ್ಟಡದಲ್ಲಿ 104 ಬೆಡ್‌ಗಳಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾಸ್ಪತ್ರೆ ಆವರಣದಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ 50 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 100 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸುವ ಕಾಮಗಾರಿಗೂ ಅನುಮೋದನೆ ದೊರೆತಿದೆ. 10 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡದ ಮೇಲ್ಭಾಗದ ಎರಡನೇ ಮಹಡಿಯಲ್ಲಿ 32 ಹಾಸಿಗೆಗಳ ವಾರ್ಡ್‌ ವಿಭಾಗ, 7 ಹಾಸಿಗೆಗಳ ಎನ್‌ಐಸಿಯು, 2 ವಿಶೇಷ ವಾರ್ಡ್‌, ಗ್ರಂಥಾಲಯ, ಕಾನ್ಫರೆನ್ಸ್‌ ಹಾಲ್‌, ಬೇಬಿ ಯುನಿಟ್‌ ನಿರ್ಮಾಣವಾಗಲಿದೆ. ಮೂರನೇ ಮಹಡಿಯಲ್ಲಿ 32 ಹಾಸಿಗೆಗಳ ವಾರ್ಡ್‌, 9 ಹಾಸಿಗೆಗಳ ಎನ್‌ಐಸಿಯು, 2 ವಿಶೇಷ ವಾರ್ಡ್‌, ಸೆಮಿನಾರ್‌ ಹಾಲ್‌, 100 ಕೆವಿ ಸಾಮರ್ಥ್ಯದ ಡಿಜೆ ಸೆಟ್‌, ಎರಡು ಲಿಫ್ಟ್‌ ಕಾಮಗಾರಿಯನ್ನು 18 ತಿಂಗಳಲ್ಲಿ ಪೂರ್ಣಗೊಳಿಸಲು ಕಾಲಾವಕಾಶ ನೀಡಲಾಗಿದೆ.

ಜಿಲ್ಲೆಯ ವಿವಿಧ ತಾಲೂಕುಗಳಿಂದ ನಗರ ಕೇಂದ್ರಕ್ಕೆ ಹೆಚ್ಚು ಜನ ಹೆರಿಗೆಗೆ ಬರುತ್ತಿದ್ದಾರೆ. ಹಾಲಿ ಇರುವ ಆಸ್ಪತ್ರೆಯಲ್ಲಿ ಜಾಗ ಸಾಕಾಗುತ್ತಿಲ್ಲ. ಈ ನಿಟ್ಟಿನಲ್ಲಿ ಈ ಕಾಮಗಾರಿಗಳು ಆರಂಭವಾಗಲಿವೆ ಎಂದರು. ಡಿಎಚ್‌ಒ ಡಾ| ರಂಗನಾಥ್‌ ಮಾತನಾಡಿ, ಕೋವಿಡ್‌ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಣೆ ಮಾಡುವ ದೃಷ್ಟಿಯಿಂದ ಮಕ್ಕಳ ಐಸಿಯು ಘಟಕ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು. ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮೂರು ಆಕ್ಸಿಜನ್‌ ಘಟಕ ಕಾರ್ಯಾರಂಭ ಮಾಡಲಿದ್ದು, ದಾವಣಗೆರೆ ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಅವರು ನೀಡಿರುವ ಘಟಕದ ಕಾಮಗಾರಿ ಮುಗಿದಿದೆ. ಇನ್ನೂ ಎರಡು ಘಟಕಗಳ ಕೆಲಸ ಎರಡು ತಿಂಗಳಲ್ಲಿ ಮುಗಿಯಲಿದೆ. ಹೊಸದುರ್ಗ ಹಾಗೂ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಗಳ ಆವರಣದಲ್ಲಿ ಕೂಡ ಆಕ್ಸಿಜನ್‌ ಘಟಕಗಳ ಕೆಲಸ ನಡೆಯುತ್ತಿದೆ ಎಂದರು.

ಮಕ್ಕಳ ಚಿಕಿತ್ಸೆಗಾಗಿ 100 ಜನ ಸ್ಟಾಫ್‌ ನರ್ಸ್‌ಗಳಿಗೆ ತರಬೇತಿ ಕೊಡಿಸಲಾಗಿದೆ. ಜಿಲ್ಲೆಯಲ್ಲಿರುವ 27 ಕೋವಿಡ್‌ ಕೇರ್‌ ಸೆಂಟರ್‌ಗಳ ಪೈಕಿ 6 ಸೆಂಟರ್‌ ಗಳನ್ನು ಮಕ್ಕಳಿಗೆ ಮೀಸಲಿಟ್ಟು, 600 ಬೆಡ್‌ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸವರಾಜಪ್ಪ ಸೇರಿದಂತೆ ಜಿಲ್ಲಾಸ್ಪತ್ರೆಯ ವೈದ್ಯರು ಇದ್ದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.