ಕೋವಿಡ್‌ನಿಂದ ಪಾಲಕರ ಕಳೆದುಕೊಂಡವರಿಗೆ ಉಚಿತ ಪ್ರವೇಶ
ಈ ಬಾರಿ ಶಾಲೆಯ 200 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಉತ್ತಮ ಫಲಿತಾಂಶದ ನಿರೀಕ್ಷೆ ಇದೆ.
Team Udayavani, Jul 20, 2021, 5:19 PM IST
ಧಾರವಾಡ: ಕೋವಿಡ್ ಸೋಂಕಿನಿಂದ ಮೃತಪಟ್ಟವರ ಮಕ್ಕಳಿಗೆ ದಿ| ಶಂಕರ ಪಾಟೀಲ ಅವರ ಜನ್ಮದಿನದ ಪ್ರಯುಕ್ತ ಪವನ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಉಚಿತ ಪ್ರವೇಶ ನೀಡಲು ನಿರ್ಧರಿಸಲಾಗಿದೆ ಎಂದು ಶಾಲೆಯ ಉಪಾಧ್ಯಕ್ಷೆ ರತ್ನಾ ಶಂಕರ ಪಾಟೀಲ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಕಳಕಳಿ ಹೊಂದಿದ್ದ ಶಾಲೆಯ ಮುಖ್ಯಸ್ಥರಾಗಿದ್ದ ದಿ| ಶಂಕರ ಪಾಟೀಲರು ಅರ್ಹ ಬಡ ಮಕ್ಕಳಿಗೆ ಉಚಿತವಾಗಿ ಪ್ರವೇಶ ನೀಡಿದ್ದರು. ಅನಿರೀಕ್ಷಿತವಾಗಿ ಕೋವಿಡ್‌ಗೆ ಅವರು ಮೃತಪಟ್ಟಿದ್ದು, ಇದೀಗ ಅವರ ಜನ್ಮದಿನದ ನಿಮಿತ್ತ ಕೋವಿಡ್‌ನಿಂದ ಮೃತಪಟ್ಟವರ 20 ಮಕ್ಕಳಿಗೆ ಉಚಿತ ಪ್ರವೇಶ ನೀಡಲು ತೀರ್ಮಾನಿಸಲಾಗಿದೆ. ಯಾವುದೇ ವರ್ಗದಲ್ಲೂ ಪ್ರವೇಶ ಪಡೆಯಲಿದ್ದು, ಶಾಲೆಯಲ್ಲಿ 10ನೇ ತರಗತಿವರೆಗೂ ಅವರಿಗೆ ಪ್ರವೇಶ ಶುಲ್ಕ ಆಕರಣೆ ಇಲ್ಲ. ಪ್ರವೇಶ ಮಾತ್ರವಲ್ಲದೇ ಪುಸ್ತಕದ ವ್ಯವಸ್ಥೆ ಮಾಡಲಿದ್ದೇವೆ ಎಂದು ತಿಳಿಸಿದರು.
ಶಾಲೆಯ ಕಾರ್ಯದರ್ಶಿ ಮಹೇಶ ಪಾಟೀಲ ಹಾಗೂ ಅಕ್ಷತಾ ಪಾಟೀಲ ಮಾತನಾಡಿ, ಧಾರವಾಡದಲ್ಲಿ ಪವನ ಶಾಲೆಗೆ ಉತ್ತಮ ಹೆಸರಿದೆ. ಶಾಲೆಯ ಶ್ರೇಯೋಭಿವೃದ್ಧಿಗೆ ತಂದೆಯವರಾದ ಶಂಕರ ಪಾಟೀಲರು ತುಂಬ ಶ್ರಮಿಸಿದ್ದಾರೆ. ಹೀಗಾಗಿ ಅವರ ಹೆಸರಿನಲ್ಲಿ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡುವ ಉದ್ದೇಶವಿದೆ. ಆದರೆ, ಕೋವಿಡ್ ಸೋಂಕು ನಮ್ಮನ್ನು ಕಟ್ಟಿ ಹಾಕಿದೆ. ಸದ್ಯಕ್ಕೆ ತಂದೆಯವರ ಜನ್ಮದಿನದ ನಿಮಿತ್ತ 20 ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುತ್ತಿದೆ ಎಂದರು.
ಈ ಬಾರಿ ಶಾಲೆಯ 200 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಉತ್ತಮ ಫಲಿತಾಂಶದ ನಿರೀಕ್ಷೆ ಇದೆ. ವಿದ್ಯಾರ್ಥಿಗಳು ಬರೀ ಸ್ಥಳೀಯವಾಗಿರದೇ ಜಾಗತಿಕವಾಗಿ ಶೈಕ್ಷಣಿಕ, ಔದ್ಯೋಗಿಕ ಅವಕಾಶಗಳನ್ನು ಪಡೆಯಲೆಂದು ಸ್ಕೂಲ್ ಐಕಾನ್ ಆನ್‌ಲೈನ್ ವೇದಿಕೆಯೊಂದನ್ನು ರಚಿಸಿದ್ದು ಯಶಸ್ವಿಯಾಗಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಕರಾದ ಅಶ್ವಿನಿ ಕುಂಬಾರಗೌಡರ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.