ಯಡಿಯೂರಪ್ಪ ಬೆನ್ನಿಗೆ ಶ್ರೀಶೈಲ ಜಗದ್ಗುರು ಪೀಠವಿದೆ : ಚನ್ನಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ

Team Udayavani, Jul 20, 2021, 6:48 PM IST

ryuouoiyt

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆನ್ನಿಗೆ ಶ್ರೀಶೈಲ ಜಗದ್ಗುರು ಪೀಠವಿದೆ. ವೀರಶೈವ ಮಹಾಸಭೆ, ಪಂಚಪೀಠಗಳು ಸೇರಿದಂತೆ ಎಲ್ಲರೂ ಯಡಿಯೂರಪ್ಪ ಅವರ ಪರ ಇವೆ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಶೈಲ ಪೀಠ ಮಾತ್ರವಲ್ಲ ಎಲ್ಲ ಪೀಠಗಳು, ಅವರ ಬೆನ್ನಿಗೆ, ಪರವಾಗಿ ನಿಲ್ಲುತ್ತವೆ. ಶಾಮನೂರು ಶಿವಶಂಕರಪ್ಪ ಅವರು ಬೇರೆ ಪಕ್ಷದ ಶಾಸಕರಾಗಿದ್ದರೂ ಸಮಾಜದವರು, ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಬೆಂಬಲ ವ್ಯಕ್ತಪಡಿಸಿರುವುದ ಕಾಣಬಹುದು ಎಂದರು.

ಯಡಿಯೂರಪ್ಪ ಅವರು ರಾಜ್ಯದಲ್ಲಿ ಪಕ್ಷವನ್ನ ಕಟ್ಟಿ ಬೆಳೆಸಿದವರು. ರಾಜ್ಯದ ಜನರು ಅವರನ್ನು ಪ್ರಶ್ನಾತೀತ ನಾಯಕ ಎಂದು ವಿಶ್ವಾಸ ವ್ಯಕ್ತಪಡಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರು ಮುಖ್ಯಮಂತ್ರಿಗಳಾದ ನಂತರ ಚುನಾವಣೆಗಳ ಫಲಿತಾಂಶಗಳೇ ಅದಕ್ಕೆ ಸಾಕ್ಷಿ. ರಾಜ್ಯದ ಜನತೆ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಲಾಗುತ್ತಿದೆ. ತೆರೆಮರೆಯಲ್ಲಿ ಏನು ನಡೆಯುತ್ತಿದೆ. ಏನೆಲ್ಲ ಆಗುತ್ತಿದೆ ಎಂಬುದರ ಬಗ್ಗೆ ತಮಗೆ ಸಂಪೂರ್ಣ ಮಾಹಿತಿ ಇಲ್ಲವಾದರೂ ಯಡಿಯೂರಪ್ಪ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಆಗಿ ಮುಂದುವರೆಯುವುದು ಸೂಕ್ತ. ಅವರೇನಾದರೂ ಹಿಂದೆ ಸರಿಯುವಂತೆ ಮಾಡಿದರೆ ಪಕ್ಷಕ್ಕೆ ತೊಂದರೆ ಆಗುವ ಎಲ್ಲ ಸಾಧ್ಯತೆಗಳು ಇವೆ ಎಂದು ಸ್ವಾಮೀಜಿ ತಿಳಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿವೆ. ತೆರೆಮರೆಯಲ್ಲಿ ಕೆಲ ಚಟುವಟಿಕೆ ಗಳು ನಡೆಯುತ್ತಿವೆ.ಇದರ ಬಗ್ಗೆ ಇನ್ನಷ್ಟು ದಿನ ಕಾದು ಸಮ ಪೀಠಾಽಪತಿಗಳೊಂದಿಗೆ ಸಮಾಲೋಚನೆ ನಡೆಸಿ ಪ್ರತಿಕ್ರಿಯೆ ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ರಾಜ್ಯ ಅಧ್ಯಕ್ಷರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಅದು ತಮ್ಮದಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಸತ್ಯಾಸತ್ಯತೆ ಏನಿದೆ. ಏನೇನು ನಡೆಯುತ್ತಿದೆ ಎಂಬುದು ಅಸ್ಪಷ್ಟವಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಬೆನ್ನಿಗೆ ಶ್ರೀಶೈಲ ಪೀಠ ಇರಲಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಅತ್ಯಂತ ಸ್ಪಷ್ಟವಾಗಿ ಪೀಠ ಅವರ ಬೆನ್ನಿಗೆ ನಿಲ್ಲಲಿದೆ ಎಂದು ತಿಳಿಸಿದರು.

ಯಡಿಯೂರಪ್ಪ ಅವರು ಒಂದು ಧರ್ಮ, ಪೀಠ ಮಾತ್ರವಲ್ಲ ಎಲ್ಲ ಜನಾಂಗಕ್ಕೆ ನ್ಯಾಯ ಒದಗಿಸಿದ ಕೀರ್ತಿಗೆ ಪಾತ್ರರಾದವರು. ಹಾಗಾಗಿ ಎಲ್ಲರೂ ಅವರ ಬೆನ್ನಿಗೆ, ಪರವಾಗಿ ನಿಲ್ಲುತ್ತಾರೆ ಎಂದು ತಿಳಿಸಿದರು.

ವೀರಶೈವ ಮಹಾಸಭೆ, ಪಂಚಪೀಠಗಳು ಸೇರಿದಂತೆ ಎಲ್ಲರೂ ಯಡಿಯೂರಪ್ಪ ಅವರ ಪರ ಇವೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಗುರುಪೂರ್ಣಿಮೆ ಪ್ರಯುಕ್ತ ನಾಳೆ(ಬುಧವಾರ) ಬೆಂಗಳೂರಿಗೆ ಹೋಗುತ್ತಿದ್ದೇವೆ. ಅಗತ್ಯ ಬಿದ್ದರೆ ಯಡಿಯೂರಪ್ಪ ಅವರನ್ನ ಭೇಟಿ ಮಾಡಲಾಗುವುದು ಎಂದು ಸ್ವಾಮೀಜಿ ತಿಳಿಸಿದರು.

ಕೇಂದ್ರ ಸರ್ಕಾರ, ಪಕ್ಷದ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಚೆನ್ನಾಗಿ ನಡೆಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅವರನ್ನು ಅಗೌರವಯುತವಾಗಿ ನಡೆಸಿಕೊಳ್ಳಬಾರದು. ಅವರೇನಾದರೂ ಹಿಂದೆ ಸರಿಯುವಂತೆ ಮಾಡಿದರೆ ಪಕ್ಷಕ್ಕೆ ತೊಂದರೆ ಆಗುವ ಎಲ್ಲ ಸಾಧ್ಯತೆಗಳು ಇವೆ ಎನ್ನುವ ಮೂಲಕ ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ ಪರೋಕ್ಷ ಎಚ್ಚರಿಕೆ ಸಂದೇಶ ನೀಡಿದರು.

ಟಾಪ್ ನ್ಯೂಸ್

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.