ಆಮಿಷ, ಬೆದರಿಕೆ ಮತ್ತು ಸುಳ್ಳುಗಳೇ ಆಪರೇಷನ್ ಕಮಲ ಎಂಬ ಪಾತಕದ ಅಸ್ತ್ರಗಳು: ಸಿದ್ದರಾಮಯ್ಯ
Team Udayavani, Jul 21, 2021, 8:36 AM IST
ಬೆಂಗಳೂರು: ಆಮಿಷ, ಬೆದರಿಕೆ ಮತ್ತು ಸುಳ್ಳುಗಳೇ ಆಪರೇಷನ್ ಕಮಲ ಎಂಬ ಪಾತಕದ ಅಸ್ತ್ರಗಳು. ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಕುಕೃತ್ಯಗಳು ಒಂದೊಂದಾಗಿ ಬಯಲಾಗುತ್ತಿದೆ, ಬಿಜೆಪಿ ನಾಯಕರು ಜನರ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಭಾಗಿಯಾಗಿರುವ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಉನ್ನತ ಮಟ್ಟದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.
ಇದು ಬಿಜೆಪಿಯವರ “ಡರ್ಟಿ ಗೇಮ್”. ಕೇಂದ್ರ ಸರ್ಕಾರವೇ ನಡೆಸಿರುವ ಈ ಕಾನೂನು ಬಾಹಿರ ಕೃತ್ಯವನ್ನು ಮೇಲ್ಮನೆಯ ಎರಡೂ ಸದನಗಳಲ್ಲಿ ಪ್ರಸ್ತಾಪಿಸಬೇಕು ಎಂದು ಅಧೀರ್ ರಂಜನ್ ಚೌಧರಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕೋರುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:ರಾಜ್ ಕುಂದ್ರಾ ಪ್ರಕರಣದಲ್ಲಿ “ಹಾಟ್ ಶಾಟ್ಸ್” ಹೆಸರು ಮುಂಚೂಣಿ: ಈ ಆ್ಯಪ್ ನ ಹಿನ್ನೆಲೆಯೇನು ?
ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ಕಾಲದಲ್ಲಿ ನನ್ನ ಆಪ್ತಸಹಾಯಕನ ಪೋನ್ ಕರೆಗಳನ್ನು ಕೇಂದ್ರ ಸರ್ಕಾರ ಟ್ಯಾಪ್ ಮಾಡಿದೆ ಎನ್ನುವುದು ಅಚ್ಚರಿಯ ಸುದ್ದಿ ಅಲ್ಲ. ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯಲು ಹೇಸದವರು ಎನ್ನುವುದು ನಮಗೆ ಗೊತ್ತಿದೆ. ಪೋನ್ ಕದ್ದಾಲಿಕೆ ಬಗ್ಗೆ ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿಕೊಂಡಿರುವ ಬಿಜೆಪಿ ನಾಯಕರಿಗೆ ಇರುವ ಭಯ ನನಗಿಲ್ಲ. ನುಡಿದಂತೆ ನಡೆಯುವ ಸತ್ಯದ ಹಾದಿ ನನ್ನದು. ಆದರೆ ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ ಮಾತ್ರ ಅಲ್ಲ, ಸಭ್ಯತೆಯ ಸಂಸ್ಕೃತಿಯೂ ಅಲ್ಲ ಎಂದು ಕಿಡಿಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ಅಮಾಯಕ ಪ್ರಜೆಗಳ ಪೋನ್ ಕದ್ದಾಲಿಕೆ ಮಾಡಿ ಕುಖ್ಯಾತಿ ಪಡೆದವರು. ಹುಟ್ಟುಗುಣ ಸುಲಭದಲ್ಲಿ ಬಿಟ್ಟು ಹೋಗುವುದಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.