ಎರಡನೇ ವರ್ಷದ ಸಂಭ್ರಮದ ಬಿಎಸ್ ವೈ ಭೋಜನ ಕೂಟ ಮುಂದೂಡಿಕೆ!
Team Udayavani, Jul 21, 2021, 1:14 PM IST
ಬೆಂಗಳೂರು: ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆಯ ಕಾರಣದಿಂದ ಬಿಜೆಪಿ ಶಾಸಕರಿಗೆ ಜು.25 ರಂದು ರಾತ್ರಿ ನಿಗದಿಯಾಗಿದ್ದ ಭೋಜನ ಕೂಟವನ್ನು ಮುಂದೂಡಲಾಗಿದೆ.
ಜು.25 ರಾತ್ರಿ ಭೋಜನಕೂಟ ಮುಗಿಸಿ ಜಿಲ್ಲಾ ಉಸ್ತುವಾರಿ ಸಚಿವರುಗಳು ತಮ್ಮ ಜಿಲ್ಲೆಗಳಿಗೆ ತೆರಳಿ ಮರುದಿನ (ಜು.26) ರಂದು ಎರಡು ವರ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಭೋಜನ ಕೂಟವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆ ಶ್ರೀರಾಮುಲುಗೆ ಹೈಕಮಾಂಡ್ ಬುಲಾವ್: ಏನಿದು ಹೊಸ ಟ್ವಿಸ್ಟ್?
ಭೋಜನ ಕೂಟವು ಜುಲೈ 27 ಅಥವಾ ಬೇರೆ ದಿನಾಂಕದಂದು ನಿಗದಿಯಾಗುವ ಸಾಧ್ಯತೆಯಿದೆ.
ಜುಲೈ 26 ರಂದು ಸರ್ಕಾರದ ಎರಡು ವರ್ಷಗಳ ಸಾಧನೆ ಕುರಿತು ಮುಖ್ಯಮಂತ್ರಿಗಳು ಆಯ್ದ 10 ಜಿಲ್ಲೆಗಳ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ವಿಡಿಯೊ ಸಂವಾದ ನಡೆಸಲು ತೀರ್ಮಾನ ಮಾಡಿದ್ದಾರೆ.
ಶಾಸಕಾಂಗ ಸಭೆಯೂ ರದ್ದು: ಜು. 26ಕ್ಕೆ ರಾಜ್ಯ ಸರ್ಕಾರ 2 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಜು.25ರಂದು ಸಿಎಂ ಕರೆದಿದ್ದ ಶಾಸಕಾಂಗ ಪಕ್ಷದ ಸಭೆ ರದ್ದಾಗಿದೆ. ಸರ್ಕಾರ ಎರಡು ವರ್ಷ ಪೂರೈಸಿದ್ದರಿಂದಾಗಿ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಸಿಎಂ ಬಿಎಸ್‌ವೈ ನಿರ್ಧರಿಸಿದ್ದರು. ಈ ಬಗ್ಗೆ ಮಾಧ್ಯಮಗಳಿಗೂ ಅಧಿಕೃತವಾಗಿ ಹೇಳಿದ್ದರು. ಆದರೆ, ಪಕ್ಷದ ಹೈಕಮಾಂಡ್ ಈ ಸಂದರ್ಭದಲ್ಲಿ ಶಾಸಕಾಂಗ ಸಭೆ ನಡೆಸದಂತೆ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ.
ಜು. 25ರ ಬೆಳಿಗ್ಗೆ 11.30ಕ್ಕೆ ಕರೆದಿದ್ದ ಶಾಸಕಾಂಗ ಪಕ್ಷದ ಸಭೆಯನ್ನು ರದ್ದುಪಡಿಸಲಾಗಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಸುನೀಲ್‌ಕುಮಾರ್ ಪಕ್ಷದ ಶಾಸಕರಿಗೆ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಭೋಜನ ಕೂಟವೂ ರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.