ಯಡಿಯೂರಪ್ಪ ಮುಂದುವರೆಯಲಿ: ಕುಮಾರಸ್ವಾಮಿ
Team Udayavani, Jul 21, 2021, 6:22 PM IST
ಚಿಕ್ಕಮಗಳೂರು: ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅ ಧಿಕಾರಕ್ಕೆ ತಂದವರು ಸಿಎಂ ಯಡಿಯೂರಪ್ಪ. ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಬೇಕೆಂದು ಕೇಂದ್ರ ಮುಖಂಡರಲ್ಲಿ ಮನವಿ ಮಾಡುತ್ತೇನೆ ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲಿ ಎಂಬ ಅಪೇಕ್ಷೆ ಹೊಂದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬರುವಲ್ಲಿ ಅವರ ಶ್ರಮ ಬಹಳಷ್ಟಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸಿಎಂ ಸ್ಥಾನದಲ್ಲಿ ಮುಂದುವರಿಸುವಂತೆ ಮನವಿ ಮಾಡುತ್ತೇನೆ. ವಿಪಕ್ಷದವರು ಬಿಎಸ್‌ವೈ ಸಿಂಎಂ ಆಗಿ ಮುಂದುವರಿಯಲಿ ಎಂದು ಹೇಳುತ್ತಿದ್ದಾರೆ.
ಇದರಲ್ಲಿ ರಾಜಕೀಯವಿಲ್ಲ, ನಿಜವಾದ ಉದ್ದೇಶವಿದೆ. ಸಾಮೂಹಿಕ ನಾಯಕತ್ವ, ಜನರನ್ನು ಸೆಳೆಯುವ ಶಕ್ತಿಯುಳ್ಳ ಅಂತಹ ನಾಯಕರು ದೊರೆಯುವುದು ಅಪರೂಪ. ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಲಿದೆ. ಈ ಬಗ್ಗೆ ಕೇಂದ್ರ ಮುಖಂಡರು ಸಮೀಕ್ಷೆ ನಡೆಸಲಿ. ಪಕ್ಷದ ಹಿತದೃಷ್ಟಿಯಿಂದ ಮುಂಬರುವ ಚುನಾವಣೆವರೆಗೂ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಬಿಎಸ್‌ವೈ ಉತ್ತಮ ಗುರಿ ಇಟ್ಟುಕೊಂಡು ಮುಖ್ಯಮಂತ್ರಿಯಾದರು.
ಆದರೆ, ಕೋವಿಡ್‌ನಿಂದ ನಿರೀಕ್ಷೆಗಳು ಫಲಿಸಲಿಲ್ಲ. ಸಮರ್ಪಕವಾಗಿ ಎರಡು ಬಜೆಟ್ ಮಂಡಿಸಲು ಸಾಧ್ಯವಾಗಲಿಲ್ಲ. ಮುಂಬರುವ ಚುನಾವಣೆವರೆಗೆ ಅವರನ್ನೇ ಮುಂದುವರಿಸಿದರೆ ಪಕ್ಷ ಇನ್ನಷ್ಟು ಗಟ್ಟಿಯಾಗಲಿದೆ. ಮುಖ್ಯಮಂತ್ರಿ ಖುರ್ಚಿ ಮೇಲೆ ಎಲ್ಲರಿಗೂ ಆಸೆ ಇರುತ್ತದೆ. ಎಲ್ಲರನ್ನೂ ಒಮ್ಮತದಿಂದ ಕೊಂಡೊಯ್ಯವುದು ಕಠಿಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.