ಮೃತಪಟ್ಟ ವಾರಿಯರ್ ಕುಟುಂಬಕ್ಕೆ ನೀಡಿಲ್ಲ ಪರಿಹಾರ
Team Udayavani, Jul 22, 2021, 6:04 PM IST
ಹರಪನಹಳ್ಳಿ: ಕೊರಾನಾದಿಂದ ಮೃತಪಟ್ಟ ಕುಟುಂಬಕ್ಕೆ ಇದುವರೆಗೂ ಪರಿಹಾರ ನೀಡಲಾಗದ ಆಡಳಿತರೂಢ ಬಿಜೆಪಿ ಸರ್ಕಾರ ಬರೀ ಸುಳ್ಳು ಪ್ರಚಾರ ಮಾಡುತ್ತ ಕಾಲಹರಣ ಮಾಡುತ್ತಿದೆ ಎಂದು ಮಾಜಿ ಸಚಿವ ಸಂತೋಷ್ ಲಾಡ್ ವಾಗ್ಧಾಳಿ ನಡೆಸಿದರು. ಪಟ್ಟಣದ ಹಳೇ ಬಸ್ ನಿಲ್ದಾಣದ ಸಮೀಪದ ಗರಡಿಮನೆ ಆವರಣದಲ್ಲಿ ದೈನಂದಿನ ಉಚಿತ ಊಟ ಸೇವಾ ಕೇಂದ್ರ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ದೇಶದ ಆರ್ಥಿಕ ವ್ಯವಸ್ಥೆ ಚೇತರಿಸಿಕೊಳ್ಳಲಾಗದಷ್ಟು ಕುಸಿತ ಕಂಡಿದೆ. ದುಡಿಯುವ ಕೈಗಳಿಗೆ ಕೆಲಸ ಇಲ್ಲದೆ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಗತ್ಯವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡ ಹಾಗೂ ಮಧ್ಯಮವರ್ಗದ ಕುಟುಂಬಗಳ ಬದುಕು ಆಯೋಮಯವಾಗಿದೆ. ರೂಪಾಯಿ ಮೌಲ್ಯ ಕುಸಿತವಾದರೂ, ಡಾಲರ್ ಮೌಲ್ಯ ಹೆಚ್ಚಳಕ್ಕೆ ಪ್ರಧಾನಿ ಮೋದಿಯವರೇ ಕಾರಣ, ರಾವಣರಾಜ್ಯ ಶ್ರೀಲಂಕಾ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 55 ಇದ್ದರೆ, ಸೀತೆಯ ನಾಡು ನೇಪಾಳದಲ್ಲಿ ರೂ. 60 ಇದೆ. ಆದರೆ ರಾಮರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಶತಕ ಬಾರಿಸಿವೆ.
ಜಿಡಿಪಿ ಬೆಳೆಸುವ ಮೂಲಕ ಆರ್ಥವ್ಯವಸ್ಥೆಯನ್ನು ಸರಿದಾರಿಗೆ ತರಬೇಕಾದ ಪ್ರಧಾನಮಂತ್ರಿಯವರು ತಮ್ಮ ಗಡ್ಡ ನೆವರಿಸಿಕೊಳ್ಳುವ ಮೂಲಕ ಶೋಕಿಗೆ ಇಳಿದಿದ್ದಾರೆ ಎಂದು ಕುಟುಕಿದರು. ಸಂಡೂರು ಕ್ಷೇತ್ರದ ಶಾಸಕ ಈ. ತುಕಾರಾಂ, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ಶಿವಯೋಗಿ, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಟಿ. ಸುಭಾಷ್ ಚಂದ್ರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಆಶಾಲತಾ, ಮುಖಂಡರಾದ ಸೋಮಪ್ಪ, ಮುಂಡರಗಿ ನಾಗರಾಜ್, ಇಮಾಮ್ ಹೊಸಪೇಟೆ, ಇರ್ಫಾನ್ ಮುದಗಲ್, ಸಿದ್ದು ಹಳ್ಳೇಗೌಡ, ತೆಲಿಗಿ ಉಮಾಕಾಂತ್, ಪುಷ್ಪಾ ದಿವಾಕರ್, ಶಿವುಕುಮಾರ್ ನಾಯ್ಕ, ಶ್ರೀಕಾಂತ್, ಜಿಷಾನ್‌ಅಲಿ, ವಿಜಯ್ ದಿವಾಕರ್, ಮತ್ತೂರು ಬಸವರಾಜ್, ಶಿವರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.