ಬಿಎಸ್‌ವೈ ತವರು ಜಿಲ್ಲೆಗೆ ಬಂಪರ್
Team Udayavani, Jul 23, 2021, 6:50 AM IST
ಬೆಂಗಳೂರು: “ಮುಖ್ಯಮಂತ್ರಿ ಬದಲಾವಣೆ’ ಕುರಿತು ಗರಿಗೆದರಿದ ರಾಜ ಕೀಯ ಬೆಳವಣಿಗೆಗಳ ನಡುವೆಯೇ ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ಅವರ ತವರು ಶಿವಮೊಗ್ಗಕ್ಕೆ ಬಂಪರ್ ಕೊಡುಗೆಗಳು ಸೇರಿದಂತೆ ಹಲವು ಮಹತ್ವದ ತೀರ್ಮಾನ ಗಳನ್ನು ಕೈಗೊಳ್ಳಲಾಯಿತು.
“ಬಿ ಕರಾಬು’ 9.32 ಎಕರೆ ಗೋರಕ್ಷಣಾ ನ್ಯಾಕ್ ಸಮಿತಿಗೆ, ಪೆರಿಫೆರಲ್ ಕ್ಯಾನ್ಸರ್ ಆಸ್ಪತ್ರೆ, ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾನಿಲಯ ಒಳಗೊಂಡಂತೆ ಶಿವಮೊಗ್ಗಕ್ಕೆ ಹಲವು ಯೋಜನೆಗಳಿಗೆ ಕೊನೆಕ್ಷಣದಲ್ಲಿ ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಲಾಯಿತು. ಶಿವಮೊಗ್ಗದ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ಬರಲಿದೆ. ಜತೆಗೆ ಉತ್ತರ ಕನ್ನಡದ ಯಲ್ಲಾಪುರದಲ್ಲಿ ಶೈಕ್ಷಣಿಕ ಮತ್ತು ಪುಷ್ಪಕೃಷಿ ಅಭಿವೃದ್ಧಿಗೆ ವಿಶ್ವ ದರ್ಶನ ಎಜುಕೇಶನ್ ಸೊಸೈಟಿಗೆ ಐದು ಎಕರೆ ಸರಕಾರಿ ಜಮೀನು ನೀಡಲು ಮಂಜೂರಾತಿ ನೀಡಲಾಯಿತು.
3 ವರ್ಷಗಳಿಂದ ಯಾವುದೇ ಯೋಜನೆಗಳಡಿ ಒಂದೇ ಒಂದು ಮನೆ ಹಂಚಿಕೆ ಮಾಡಿರಲಿಲ್ಲ. ಈಗ ವಿವಿಧ ವಸತಿ ಯೋಜನೆಗಳಡಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ಪಡೆಯಲಾಯಿತು. ಇದರಲ್ಲಿ ನಾಲ್ಕು ಲಕ್ಷ ಮನೆಗಳು ಗ್ರಾಮೀಣ ಭಾಗದಲ್ಲಿ ಬರಲಿವೆ.
ಸರಕಾರಿ ನೌಕರರಿಗೆ “ಸಂಜೀವಿನಿ’ :
ಇದೇ ಸಂದರ್ಭದಲ್ಲಿ ರಾಜ್ಯ ಸರಕಾರಿ ನೌಕರರಿಗೆ ತುಟ್ಟಿಭತ್ತೆ ಘೋಷಣೆ ಬೆನ್ನಲ್ಲೇ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು ನೀಡಲಾಯಿತು. ಸಚಿವ ಸಂಪುಟದಲ್ಲಿ ಇದಕ್ಕೆ ಅನುಮೋದನೆ ನೀಡಿದ್ದು, ನೌಕರರು ಮತ್ತು ಅವರ ಕುಟುಂಬಗಳ ಸದಸ್ಯರಿಗೆ ಈ ಯೋಜನೆ ಅನ್ವಯ ಆಗಲಿದೆ.
ಹುಬ್ಬಳ್ಳಿಯಲ್ಲಿ ನಿತ್ಯ 200 ಟನ್ ಸಾಮರ್ಥ್ಯದ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಸಂಬಂಧದ ಘಟಕಕ್ಕೆ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್‌ಟಿಪಿಸಿ)ಕ್ಕೆ ಎರಡು ಎಕರೆ ಮಂಜೂರು ಮಾಡಲಾಗಿದೆ. ಮಹದೇವಪುರದಲ್ಲಿ 180 ಕೋ.ರೂ. ವೆಚ್ಚದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಈ ಪೈಕಿ 137 ಕೋಟಿ ರೂ. ಈ ವರ್ಷದಲ್ಲೇ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಸಂಪುಟ ಸಭೆ ನಡೆದ ಸಂದರ್ಭದಲ್ಲೇ ಪೂರಕ ಕಡತಗಳನ್ನು ತರಿಸಿಕೊಂಡು ಹಲವು ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.