ಪೆಗಾಸಸ್ ಪ್ರಕರಣದ ಬಗ್ಗೆ ಕೋರ್ಟ್ ತನಿಖೆ ನಡೆಸಲಿ; ರಾಹುಲ್ ಬೇಡಿಕೆ ತಿರಸ್ಕರಿಸಿದ ಕೇಂದ್ರ
ಅಷ್ಟೇ ಅಲ್ಲ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು.
Team Udayavani, Jul 23, 2021, 1:14 PM IST
ನವದೆಹಲಿ:ಇಸ್ರೇಲ್ ಮೂಲದ ಪೆಗಾಸಸ್ ಸ್ಪೈವೇರ್ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯ ಬೇಡಿಕೆಯನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ.
ಇದನ್ನೂ ಓದಿ:ಮಳೆಗೂ ಜಗ್ಗದ ಚಾರುಲತಾ; ಬಾಂಗ್ಲಾದ ಪ್ರಗತಿಪರ ರೈತನಿಂದ ಭತ್ತದ ಹೊಸ ತಳಿ
ಪೆಗಾಸಸ್ ಸ್ಪೈವೇರ್ ಮೂಲಕ ತಮ್ಮ ಫೋನ್ ಅನ್ನು ಕದ್ದಾಲಿಸಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಸ್ಪೈವೇರ್ ಪ್ರಕರಣದ ಕುರಿತು ನಾವು ಈಗಾಗಲೇ ಸ್ಪಷ್ಟನೆ ನೀಡಿದ್ದೇವೆ. ಈ ಬಗ್ಗೆ ಯಾವುದೇ ತನಿಖೆಯ ಅಗತ್ಯವಿಲ್ಲ. ರಾಜಕೀಯ ದುರುದ್ದೇಶದಿಂದ ಆರೋಪಿಸುತ್ತಿದ್ದಾರೆ ವಿನಃ ಇದರಲ್ಲಿ ಬೇರೆ ಯಾವುದೇ ವಿಚಾರಗಳಿಲ್ಲ ಎಂದು ಗೃಹಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಎನ್ ಡಿಟಿವಿಗೆ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಭಾರತದ ವಿರುದ್ಧ ಪೆಗಾಸಸ್ ಸ್ಪೈವೇರ್ ಅನ್ನು ಬಳಕೆ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಇದೊಂದು ದೇಶದ್ರೋಹದ ಕಾರ್ಯ ಎಂದು ದೂರಿರುವ ರಾಹುಲ್ ಈ ಬಗ್ಗೆ ಸುಪ್ರೀಂಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದರು. ಅಷ್ಟೇ ಅಲ್ಲ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.