‘ನಾನು ಸನ್ಯಾಸಿಯಾಗಿಲ್ಲ’ : ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕೊಟೂರ್ ಸ್ಪಷ್ಟನೆ
Team Udayavani, Jul 23, 2021, 4:34 PM IST
ಕನ್ನಡ ಚಲನಚಿತ್ರ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕೊಟೂರ್ ಮದುವೆ ಮುರಿದ ಬಿದ್ದ ನಂತರ ಆಧ್ಯಾತ್ಮ ಕಡೆಗೆ ವಾಲಿದ್ದಾರೆ. ತಮ್ಮ ಹೆಸರನ್ನು ಬದಲಿಸಿಕೊಂಡು ಸನ್ಯಾಸ ಸ್ವೀಕರಿಸಿದ್ದಾರೆ ಎನ್ನುವ ಗುಲ್ಲು ಕೇಳಿ ಬಂದಿತ್ತು. ಅದಕ್ಕೆ ಕಾರಣ ಸ್ವತಃ ಚೈತ್ರಾ ಫೇಸ್ ಬುಕ್ ನಲ್ಲಿ ಹಾಕಿಕೊಂಡಿದ್ದ ಕೆಲವು ಪೋಸ್ಟ್ ಗಳು. ಆದರೆ, ಇದೀಗ ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದು ನಾನು ಸನ್ಯಾಸಿಯಾಗಿಲ್ಲ ಎಂದಿದ್ದಾರೆ.
ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಚೈತ್ರಾ, ‘ಓಶೋ ಸನ್ಯಾಸ ದೀಕ್ಷೆ ಅಂದರೆ, ಎಲ್ಲವನ್ನೂ ತ್ಯಜಿಸುವುದಲ್ಲ! ಮಠವಂತೂ ಅಲ್ಲವೇ ಅಲ್ಲ! ಎಲ್ಲದರೊಳಗೇ ಇದ್ದುಕೊಂಡು ಬದುಕನ್ನು ಹೆಚ್ಚು ಸಂತೋಷಮಯವಾಗಿ, ಅರ್ಥಪೂರ್ಣವಾಗಿ ಬದುಕುವುದು’ ಎಂದಿದ್ದಾರೆ.
ಇನ್ನು ಏಪ್ರಿಲ್ ತಿಂಗಳಲ್ಲಿ ಚೈತ್ರಾ ಕೊಟೂರು, ನಾಗಾರ್ಜುನ ಎಂಬುವರೊಟ್ಟಿಗೆ ದೇವಸ್ಥಾನದಲ್ಲಿ ವಿವಾಹವಾಗಿದ್ದರು. ಆದರೆ ವಿವಾಹವಾದ ದಿನವೇ ಪೊಲೀಸ್ ಠಾಣೆ ಮೆಟ್ಟಿಲು ಏರಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಬಲವಂತದಿಂದ ಮದುವೆ ಮಾಡಲಾಗಿದೆ ಎಂದು ನಾಗಾರ್ಜುನ ದೂರು ನೀಡಿದ್ದರು. ಇದಾದ ಬಳಿಕ ಚೈತ್ರಾ ಕೊಟೂರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದೆಲ್ಲ ವಿವಾದಗಳ ಬಳಿಕ ಈಗ ಅಧ್ಯಾತ್ಮದ ಕಡೆಗೆ ವಾಲಿಕೊಂಡಿದ್ದಾರೆ ಚೈತ್ರಾ.
ಚೈತ್ರಾ ಓಶೋ ಧ್ಯಾನ ಶಿಬಿರ ಸೇರಿಕೊಂಡಿದ್ದಾರೆ. ಅಧ್ಯಾತ್ಮಕ್ಕೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸುತ್ತಿದ್ದಾರೆ. ಆ ಕ್ಷಣಗಳ ಹಲವು ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ತಮ್ಮ ಹೆಸರನ್ನು ಮಾ ಪ್ರಗ್ಯಾ ಭಾರತಿ ಎಂದು ಬದಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.