ರಾಜ್ಯಸಭಾ ಸದಸ್ಯ, ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನ
ಆಸ್ಕರ್ ಫರ್ನಾಂಡಿಸ್ ಅವರು ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
Team Udayavani, Sep 13, 2021, 2:31 PM IST
ಮಂಗಳೂರು: ಕಳೆದ ಕೆಲವು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಇಂದು (ಸೆಪ್ಟೆಂಬರ್ 13) ನಿಧನರಾದರು.
ಜು.18ರಂದು ಆಸ್ಕರ್ ಫರ್ನಾಂಡೀಸ್ ಅವರು ಮನೆಯಲ್ಲಿ ಯೋಗ ಮಾಡುತ್ತಿದ್ದ ಸಮಯದಲ್ಲಿ ಜಾರಿ ಬಿದ್ದಿದ್ದರು. ನಂತರ ಮಾಮೂಲಿ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ತೆರೆಳಿದಾಗ ತಲೆಯ ಒಳಭಾಗಕ್ಕೆ ಪೆಟ್ಟಾಗಿದ್ದು ತಿಳಿದುಬಂದಿತ್ತು. ನಂತರ ಅವರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆಸ್ಕರ್ ಫರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾದ ಮಾಹಿತಿ ಪಡೆದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಕುಟುಂಬಿಕರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಎಂ.ಬಿ.ಪಾಟೀಲ್ ಮುಂತಾದವರು ಮಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
ಹಳ್ಳಿಯಿಂದ ದಿಲ್ಲಿಯವರೆಗೆ: 1941 ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್ ಅವರು ದಿಲ್ಲಿಯಲ್ಲಿ ನಂತರ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ ವಲಯದಲ್ಲಿ ಕಾಣಿಸಿಕೊಂಡಿದ್ದರು. 1980ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದ ಆಸ್ಕರ್ ಫರ್ನಾಂಡಿಸ್ ಅವರು ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕೇಂದ್ರ ಸಾರಿಗೆ ಸಚಿವ, ಕಾರ್ಮಿಕ ಸಚಿವರಾಗಿ ಆಸ್ಕರ್ ಫರ್ನಾಂಡಿಸ್ ಕಾರ್ಯ ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.