ಅಪಪ್ರಚಾರದ ಹಿಂದೆ ವ್ಯವಸ್ಥಿತ ಷಡ್ಯಂತ್ರ : ಭ್ರಷ್ಟಾಚಾರ ಆರೋಪಕ್ಕೆ ಸಚಿವೆ ಜೊಲ್ಲೆ ಸ್ಪಷ್ಟನೆ

Team Udayavani, Jul 24, 2021, 1:53 PM IST

gerew

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಖಾಸಗಿ ಸುದ್ದಿ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ವಯಕ್ತಿಕವಾಗಿ ನನ್ನ ತೇಜೋವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ.

ಇಂದು ಮಾಧ್ಯಮ ಪ್ರಕಟನೆ ಹೊರಡಿಸಿರುವ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವೆಯಾಗಿ ಮಹಿಳೆಯರು, ಮಕ್ಕಳು, ವೃದ್ಧರು, ವಿಕಲಚೇತನರ ಏಳಿಗೆಗಾಗಿ ನಿರಂತರ ಶ್ರಮಿಸುತ್ತಿದ್ದೇನೆ.

ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲೆ ಉಂಟಾದ ಸಮಸ್ಯೆ ಪರಿಹಾರಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ  ಇಲಾಖೆ ವತಿಯಿಂದ ಅಗತ್ಯ ಸೌಲಭ್ಯ ಒದಗಿಸುವ ಪ್ರಯತ್ನ ಮಾಡಿದ್ದೇನೆ. ಅಲ್ಲದೆ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ ಎಂಬ ತಜ್ಞರ ವರದಿ ಹಿನ್ನೆಲೆ ರಾಜ್ಯದ ಎಲ್ಲ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ವಾರ್ಡ್ ತೆರೆಯಲು ಕ್ರಮ ವಹಿಸಲಾಗಿದೆ.

ಒಬ್ಬ ಮಹಿಳೆಯಾಗಿ ನನಗೆ ಪಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿರುವ ಅವಕಾಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಏಳಿಗೆಗಾಗಿ ಶಕ್ತಿ ಮೀರಿ ಶ್ರಮಿಸುತ್ತಿದ್ದೇನೆ. ಇಂತಹ ಸಂದರ್ಭದಲ್ಲಿ ಖಾಸಗಿ ವಾಹಿನಿಯ ಮೂಲಕ ರಹಸ್ಯ ಕಾರ್ಯಾಚರಣೆ ನಡೆಸಿ ನನ್ನನ್ನು ಆರೋಪಿತಳನ್ನಾಗಿ ಮಾಡುವ ಪ್ರಯತ್ನ ನಡೆಸುತ್ತಿರುವುದು ದುರದೃಷ್ಟಕರ. ಖಾಸಗಿ ವಾಹಿನಿಯಲ್ಲಿ ಹೇಳುತ್ತಿರುವ ಹಾಗೆ ಮೊಟ್ಟೆ ಖರೀದಿಗೆ ಇದುವರೆಗೂ ಯಾವದೇ ಟೆಂಡರ್ ಕರೆದಿಲ್ಲ. ಅಲ್ಲದೇ ಟೆಂಡರ್ ನೀಡಲು ನಾನು ವಯಕ್ತಿಕವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ

ನಮ್ಮ ಬಿಜೆಪಿ ಪಕ್ಷದ ಶಾಸಕರಾದ ಪರಣ್ಣ ಮುನವಳ್ಳಿಯವರು ತಮ್ಮ ಸಂಬಂಧಿಕರು ಎಂದು ಕರೆದುಕೊಂಡು ಬಂದಾಗ ಕಾನೂನು ಪ್ರಕಾರ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದೇನೆ. ಇದರಲ್ಲಿ ಯಾವುದೇ ಹಣಕಾಸಿನ ವ್ಯವಹಾರದ ಕುರಿತು ನಾನು ಮಾತನಾಡಿಲ್ಲ.

ಆದರೆ, ಒಬ್ಬ ಮಹಿಳೆಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ರಾಜಕೀಯದಲ್ಲಿ  ನನ್ನದೇ ಆದ ತತ್ವ ಸಿದ್ದಾಂತ ನಂಬಿಕೊಂಡು ಕೆಲಸ ಮಾಡುತ್ತಿರುವ ನನ್ನ ಏಳಿಗೆಯನ್ನು ಸಹಿಸದವರು, ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿದ್ದಾರೆ.  ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ.

ಖಾಸಗಿ ಸುದ್ದಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಾಹಿತಿ ಪ್ರಕಾರ 2021 ರ ಫೆಬ್ರವರಿ ತಿಂಗಳಲ್ಲಿಯೇ ರಹಸ್ಯ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳುತ್ತಿದ್ದು, ಆದರೆ, ರಹಸ್ಯ ಕಾರ್ಯಾಚರಣೆ ಮಾಡಿದವರು ಆರು ತಿಂಗಳಿನಿಂದ ಮಾಧ್ಯಮದವರ ಮುಂದೆ ಬಿಡುಗಡೆ ಮಾಡದೇ ಇಟ್ಟುಕೊಂಡಿರುವ ಉದ್ದೇಶದ ಬಗ್ಗೆ ಅನುಮಾನ ಮೂಡಿಸುತ್ತದೆ. ಇದರ ಹಿಂದೆ ವ್ಯವಸ್ಥಿತ ರಾಜಕೀಯ ಪಿತೂರಿ ಇರುವುದು ಎದ್ದು ಕಾಣಿಸುತ್ತದೆ.

ಆದರೆ, ನಾನು ಈ ರೀತಿಯ ಷಡ್ಯಂತ್ರಕ್ಕೆ ಬಲಿಯಾಗದೆ, ಪಕ್ಷ ಹಾಗೂ ಪಕ್ಷದ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆ, ನಂಬಿಕೆಯನ್ನು ಉಳಿಸಿಕೊಂಡು ಪ್ರಾಮಾಣಿಕವಾಗಿ ರಾಜ್ಯದ ಜನರ ಸೇವೆ ಮಾಡುತ್ತೇನೆ. ಅಲ್ಲದೇ ನನ್ನ ವಿರುದ್ಧ ಆಧಾರರಹಿತವಾಗಿ ಷಡ್ಯಂತ್ರ ನಡೆಸುತ್ತಿರುವವರ ವಿರುದ್ಧ ಕಾನೂನು ಹೋರಾಟವನ್ನೂ ಮಾಡಲು ಚಿಂತನೆ ನಡೆಸುತ್ತಿದ್ದೇನೆ ಎಂದಿದ್ದಾರೆ.

ಟಾಪ್ ನ್ಯೂಸ್

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ

Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

5

Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

South Africa vs Pakistan 2nd Test: ಬಾಶ್‌ ದಾಖಲೆ: ದ. ಆಫ್ರಿಕಾ ಮುನ್ನಡೆ

South Africa vs Pakistan 2nd Test: ಬಾಶ್‌ ದಾಖಲೆ: ದ. ಆಫ್ರಿಕಾ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.