ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರಿ ಹೆಚ್ಚಳ; ಮತ್ತೆ ಮಹಾ ಪ್ರವಾಹದ ಭೀತಿ !
ಹಿಪ್ಪರಗಿ ಜಲಾಶಯಕ್ಕೆ ೨ ಲಕ್ಷ ೮೪ ಸಾವಿರ ಕ್ಯೂಸೆಕ್ ನೀರು
Team Udayavani, Jul 24, 2021, 7:24 PM IST
ಬನಹಟ್ಟಿ : ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಿನ ಸುಮಾರು ೨೦ ಜಲಾಶಯಗಳ ಒಳ ಹರಿವು ಹೆಚ್ಚಾಗುತ್ತಿದ್ದು ಇದರಿಂದ ರಬಕವಿ-ಬನಹಟ್ಟಿ ತಾಲೂಕಿನ ನದಿ ಪಾತ್ರದ ಹಳ್ಳಿಗಳಲ್ಲಿ ಮಹಾಪ್ರವಾಹದ ಭೀತಿ ಮತ್ತೋಮ್ಮೆ ಆವರಿಸತೊಡಗಿದೆ.
ಶನಿವಾರ 6 ಟಿಎಂಸಿ ಸಾಮರ್ಥ್ಯದ ಹಿಪ್ಪರಗಿ ಜಲಾಶಯಕ್ಕೆ ೨ ಲಕ್ಷ ೮೪ ಸಾವಿರ ಕ್ಯೂಸೆಕ್‌ನಷ್ಟು ನೀರು ಹರಿದು ಬರುತ್ತಿದು, ೨ ಲಕ್ಷ ೮೩ ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬೀಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ ೫೨೪.೮೫ ಮೀ ನಷ್ಟಾಗಿದೆ. ಎಂದು ತಹಶೀಲ್ದಾರ ಸಂಜಯ ಇಂಗಳೆ ತಿಳಿಸಿದ್ದಾರೆ.
ಮಹಾರಾಷ್ಟ್ರದ ಮಹಾಬಳೇಶ್ವರನಲ್ಲಿ ೨೮೭ ಮಿ. ಮೀ, ನೌಜಾ ೨೦೭ ಮಿ. ಮೀ, ಕರಾಡ ೧೨೪ ಮಿ. ಮೀ, ಸಾಂಗಲಿ ೫೬ ಮಿ. ಮೀ, ಕೊಲ್ಲಾಪುರ ೨೦೯ ಮಿ. ಮೀ ನಷ್ಟು ಮಳೆಯಾದ ವರದಿಯಾಗಿದೆ.
ಪ್ರವಾಹ ಮುನ್ನೆಚ್ಚರಿಕೆ ಪರಿಣಾಮವಾಗಿ ಆಯಾ ಪ್ರದೇಶಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು. ನದಿ ಪಾತ್ರದ ಜನರು ನದಿಯ ಸಮೀಪ ಬಟ್ಟೆ, ಹಾಗೂ ಜಾನುವಾರುಗಳನ್ನು ತೆಗೆದುಕೊಂಡು ಹೋಗುವುದು ಮಾಡಬಾರದು. ಗ್ರಾಮಸ್ಥರು ಯಾವುದೇ ಕಾರಣಕ್ಕೂ ಹೆದರುವ ಅಗತ್ಯವಿಲ್ಲ. ತಾಲೂಕು ಆಡಳಿತ ಈಗಾಗಲೇ ಕಾಳಜಿ ಕೇಂದ್ರ ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಜ್ಜಾಗಿದೆ. ಹಾಗೂ ನೀರಿನಿಂದ ಬಾದಿತವಾಗುವ ಎಲ್ಲ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ತಾಲುಕೂ ಆಡಳಿತದ ಜೊತೆ ಸಹಕಾರವಿರಲಿ ಎಂದು ತಹಶೀಲ್ದಾರ ಸಂಜಯ ಇಂಗಳೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.