ಸಚಿವೆ ಶಶಿಕಲಾ ಜೊಲ್ಲೆ ಭ್ರಷ್ಟಾಚಾರದ ವಿರುದ್ಧ ವೆರೋನಿಕಾ ಕರ್ನೆಲಿಯೋ ಆಕ್ರೋಶ
Team Udayavani, Jul 24, 2021, 8:28 PM IST
ಉಡುಪಿ: ಅಂಗನವಾಡಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಲ್ಲಿ ಪೌಷ್ಠಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರದಿಂದ ಕೊಡಮಾಡುವ ಮೊಟ್ಟೆ ಸರಬರಾಜು ಟೆಂಡರ್ ಪ್ರಕ್ರಿಯೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಲಂಚಕ್ಕೆ ಬೇಡಿಕೆ ಇಟ್ಟಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ.
ಮೊಟ್ಟೆ ಸರಬರಾಜು ಟೆಂಡರ್ ಪ್ರಕ್ರಿಯೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹಸ್ತಕ್ಷೇಪ ನಡೆಸಲು ಒಪ್ಪಿಕೊಂಡು, ಮಾಸಿಕ ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ಟಿವಿ ಮಾಧ್ಯಮವೊಂದರ ಕುಟುಕು ಕಾರ್ಯಾಚರಣೆಯಲ್ಲಿ ಬಹಿರಂಗ ಗೊಂಡಿದ್ದು,ಆ ನೆಲೆಯಲ್ಲಿ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸೂಕ್ತ ತನಿಕೆಗೆ ಅವಕಾಶ ಮಾಡಿಕೊಡ ಬೇಕು̤.
ಒರ್ವ ಮಹಿಳಾ ಸಚಿವೆಯಾಗಿ ಬಡ ಗರ್ಭಿಣಿ ಮಹಿಳೆಯರಿಗಾಗಿ ಸರ್ಕಾರ ನೀಡುವ ಮೊಟ್ಟೆಯಲ್ಲಿ ಕೂಡ ಸಚಿವೆ ಕಮಿಷನ್ ಪಡೆಯುತ್ತಿರುವುದು ನಾಚಿಕೆಗೇಡು. ದಿನಕ್ಕೊಂದು ಹಗರಣಗಳಲ್ಲಿ ತೊಡಗಿರುವ ಬಿಜೆಪಿ ನೇತೃತ್ವದ ರಾಜ್ಯ ಸರಕಾರದಿಂದ ಇನ್ನೊಂದು ಹಗರಣ ಬಯಲಾಗಿದೆ. ಮಾಜಿ ಮುಖ್ಯ ಮಂತ್ರಿ ಸಿದ್ಧರಾಮಯ್ಯನವರ ಆಡಳಿತದ ಅವಧಿಯಲ್ಲಿ ಜಾರಿಗೆ ಬಂದಿದ್ದ ಈ ಜನಪರ ಯೋಜನೆಯಡಿಯಲ್ಲಿ ಅಂಗನವಾಡಿಗಳ ಮೂಲಕ ಹಾಲಿನೊಂದಿಗೆ ಮೊಟ್ಟೆಯನ್ನು ನೀಡಲಾಗುತ್ತಿತ್ತು. ಅಂದು ವಿರೋಧ ಪಕ್ಷವಾಗಿದ್ದ ಬಿಜೆಪಿ ಧರ್ಮದ ನೆಲೆಗಟ್ಟಿನಲ್ಲಿ ಇದನ್ನು ವಿರೋಧಿಸುತ್ತ ಬಂದಿತ್ತು. ಇಂದು ಅದೇ ಪಕ್ಷದ ಸಚಿವೆಯೊಬ್ಬರು ಅದೇ ಮೊಟ್ಟೆಯಲ್ಲಿ ಹಣ ದೋಚಲು ನೋಡಿ, ಭ್ರಷ್ಠಾಚಾರಕ್ಕೆ ಕೈ ಚಾಚಿ, ಯೋಜನೆ ಯನ್ನು ಕುಲಗೆಡಿಸುತ್ತಿರುವುದು, ಸರಕಾರದ ಜನಪರ ಚಿಂತನೆಯ ಆಡಳಿತಾತ್ಮಕ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.