ಸಾಧನೆಗೆ ಪ್ರತಿಭೆ ಮುಖ್ಯ

Team Udayavani, Jul 25, 2021, 10:00 AM IST

ಸಾಧನೆಗೆ ಪ್ರತಿಭೆ ಮುಖ್ಯ

“ವಿದ್ಯಾಹೀನಂ ಪಶು ಸಮಾನಂ’ಎಂಬ ಮಾತಿದೆ. ಅಂದರೆ ವಿದ್ಯೆಯಿಲ್ಲದವನು ಪಶುವಿಗೆ ಸಮಾನ ಎಂಬುದು ಈ ಮಾತಿನ ತಾತ್ಪರ್ಯ. ಅದೇ ರೀತಿಯಾಗಿ ವಿದ್ಯೆಯಿಂದ ವಿನಯ, ಜ್ಞಾನವನ್ನು ಅರ್ಜಿಸಿಕೊಳ್ಳಬಹುದು. ಜ್ಞಾನ ಎಂಬುದು ನಿರ್ದಿಷ್ಟವಾಗಿ ಒಂದು ಪರಿಧಿಯೊಳಗಿಲ್ಲ ಜ್ಞಾನವನ್ನು ಯಾರು ಬೇಕಾದರೂ ಕರಗತ ಮಾಡಿಕೊಳ್ಳಬಹುದು. ಆದರೆ ವಿದ್ಯೆ ಎಂಬುದು ನಿರ್ದಿಷ್ಟ ಕ್ಷೇತ್ರದಲ್ಲಿ ಆಸಕ್ತಿಯಿರುವ ವ್ಯಕ್ತಿಗಳು ಆಯಾಯ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಾದಿಗಳನ್ನು ಕಲಿಯುವುದು ಎಂದರ್ಥ.

ಮಕ್ಕಳು ಶಾಲೆಗೆ ವಿದ್ಯಾರ್ಜನೆಗಾಗಿ ಬರುವವರು, ಶಾಲೆಯಲ್ಲಿ ಮಾಡುವ ಪಾಠ, ಪ್ರವಚನಗಳು ಮಕ್ಕಳಿಗೆ ಮನದ ಟ್ಟಾಗುವುದು ಮುಖ್ಯ ವಾಗಿರುತ್ತವೆ. ಆಂಗ್ಲ ಭಾಷೆಯಲ್ಲಿ ಪಾಠ ಮಾಡಿ ವಿದ್ಯಾರ್ಥಿಗಳಿಗೆ ಅರ್ಥ ವಾಗದಿದ್ದಾಗ ಮಾತೃ ಭಾಷೆಯಲ್ಲಿ ಮತೊಮ್ಮೆ, ಮಗದೊಮ್ಮೆ ಅದೇ ಪಠ್ಯ ವಿಚಾರಗಳನ್ನು ಮನದಟ್ಟಾಗುವಂತೆ ಹೇಳುವುದೂ ಇದೆ.

ಪ್ರಾಥಮಿಕ ಶಾಲೆಗೆ ಹೋಗುವ ಹಂತದಲ್ಲಿ ಮಕ್ಕಳು ಹೆಚ್ಚಾಗಿ ಮಾತೃಭಾಷೆಯನ್ನೇ ಮಾತನಾಡುತ್ತಿರುತ್ತಾರೆ. ಹಾಗಾಗಿ ಮಾತೃಭಾಷೆಯಲ್ಲೇ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ನೀಡುವುದು ಒಳಿತು. ಮಾತೃಭಾಷೆಯಲ್ಲೇ ಮನೆಯಲ್ಲಿ ಮಾತನಾಡುತ್ತಾ, ಆಡುತ್ತಾ ವ್ಯವಹರಿಸುತ್ತ ಇದ್ದ ಮಗುವೊಂದನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸಿ, ಒತ್ತಾಯಪೂರ್ವಕವಾಗಿ ಆಂಗ್ಲ ಭಾಷೆಯಲ್ಲಿ ಮಾತನಾಡುವಂತೆ ಶಿಕ್ಷಕರು ಗದರುವುದು ಖಂಡನೀಯ.

ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತ ಮಾತ್ರಕ್ಕೆ ಮಕ್ಕಳು ಇಂಗ್ಲಿಷ್‌ ಮಾತನಾಡಲು ಕಲಿಯುತ್ತಾರೆ ಎಂಬುದು ಭ್ರಮೆ. ಕನಿಷ್ಠ ಪ್ರಾಥಮಿಕ ಶಿಕ್ಷಣವನ್ನು ಪಡೆಯದೇ ಇರುವ ವ್ಯಕ್ತಿಗಳು ಅತ್ಯುತ್ತಮವಾಗಿ ಇಂಗ್ಲಿಷಿನಲ್ಲಿ ವ್ಯವಹರಿಸುತ್ತಾರೆ. ಬೇರೆ ಬೇರೆ ಭಾಷೆ ಬಲ್ಲವರೊಂದಿಗೆ ನಾವು ಮಾತನಾಡುತ್ತಾ ಹೋದಂತೆ ನಮಗೂ ಅವರ ಭಾಷೆಯನ್ನು ಕಲಿಯಬಹುದು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲಿಷ್‌ಗೆ ಬಹಳ ಪ್ರಾಮುಖ್ಯ ಇದೆ. ಹಾಗಾಗಿ ಹೆತ್ತವರು ಆಂಗ್ಲ ಮಾಧ್ಯಮದತ್ತ ಆಕರ್ಷಿತರಾಗುತ್ತಾರೆ. ಕೇವಲ ಒಂದು ಭಾಷೆಯನ್ನು ಕಲಿಯುವ ಸಲುವಾಗಿ ಲಕ್ಷ ಲಕ್ಷ ದುಡ್ಡು ಸುರಿಯುವ ಬದಲು, ಪ್ರಾಥಮಿಕ ಶಿಕ್ಷಣವನ್ನು ಮಾತೃ ಭಾಷೆಯಲ್ಲಿ ನೀಡಿ, ಇಂಗ್ಲಿಷ್‌ ಕಥೆ ಪುಸ್ತಕಗಳನ್ನು ಮಕ್ಕಳಿಗೆ ಓದಿಸುವ ಮೂಲಕ ಹಾಗೂ ಇಂಗ್ಲಿಷ್‌ ಭಾಷೆಯಲ್ಲಿ ಪ್ರಸಾರವಾಗುವ ಕಾಟೂìನ್‌ಗಳನ್ನು ಮಕ್ಕಳಿಗೆ ತೋರಿಸುವ ಮೂಲಕ ಕೂಡ ಇಂಗ್ಲಿಷ್‌ ಕಲಿಸಬಹುದು. ಪ್ರಾಥಮಿಕ ಶಿಕ್ಷಣವನ್ನು ಮಾತೃ ಭಾಷೆಯಲ್ಲೇ ನೀಡುವುದು ಸಮಂಜಸ. ಸಾಧಿಸಬೇಕೆಂಬ ಹಠವಿದ್ದರೆ ಯಾವುದೇ ಭಾಷೆ ಮಾತನಾಡುವ ವ್ಯಕ್ತಿಯೂ ಕೂಡ ಸಾಧಿಸಬಹುದು. ಕೇವಲ ಇಂಗ್ಲಿಷ್‌ ಬಲ್ಲವರು ಮಾತ್ರ ಸಾಧಿಸಬೇಕೆಂಬ ನಿಯಮವೇನಿಲ್ಲ. ಸಾಧನೆಗೆ ಪ್ರತಿಭೆ ಮುಖ್ಯವೇ ಹೊರತು ಭಾಷೆಯಲ್ಲ.

ಕವನ ದೇವಾಡಿಗ

ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.