![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 25, 2021, 11:41 AM IST
ಗದಗ: ಕಳೆದೊಂದು ವಾರದಿಂದ ಬಿಟ್ಟು ಬಿಡದೆ ಮಳೆಯಾಗಿದ್ದರಿಂದ ಜಿಲ್ಲೆಯ ಮಲಪ್ರಭ, ಬೆಣ್ಣೆಹಳ್ಳ ಹಾಗೂ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಬೆಣ್ಣೆಹಳ್ಳ ಉಕ್ಕಿ ಹರಿದಿದ್ದರಿಂದ ಹೊಳೆಆಲೂರು- ಮೆಣಸಗಿ ಸೇತುವೆ ಜಲಾವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ.
ಜಿಲ್ಲೆಯ ನರಗುಂದ, ರೋಣ ಹಾಗೂ ಮುಂಡರಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನೆರೆ ಆತಂಕ ಆವರಿಸಿದೆ. ಕಳೆದ ಎರಡು ದಿನಗಳಿಂದ ಬೆಣ್ಣೆಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿದೆ. ಇದೇ ವೇಳೆ ನವಿಲುತೀರ್ಥ ಜಲಾಶಯದಲ್ಲಿ ಒಳ ಹರಿವು ಹೆಚ್ಚಿದ್ದರಿಂದ ಸುಮಾರು 18 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಹೀಗಾಗಿ ಬೆಣ್ಣೆಹಳ್ಳದ ನೀರು ನದಿಗೆ ಸೇರಲಾಗದೇ ಹಿಮ್ಮುಖವಾಗುತ್ತಿದೆ. ಪರಿಣಾಮ ಹೊಳೆಆಲೂರು- ಮೆಣಸಗಿ ಸೇತುವೆ ಜಲಾವೃತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಅಕ್ಕಪಕ್ಕದ ಜಮೀನುಗಳಿಗೂ ಹಳ್ಳ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಗೀಡಗಿದೆ.
ಮತ್ತೊಂದೆಡೆ ತುಂಗಭದ್ರಾ ನದಿಯಲ್ಲೂ ನೀರಿನ ಪ್ರಮಾಣ ಹೆಚ್ಚಾಗಿದ್ದು, ಮುಂಡರಗಿ ತಾಲೂಕಿನ ವಿಠಲಾಪೂರ ಗ್ರಾಮಕ್ಕೆ ನೀರು ನುಗ್ಗುತ್ತಿವೆ.
ಇದನ್ನೂ ಓದಿ:39,742 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆ; 535 ಸೋಂಕಿತರು ಸಾವು
ಗುಮ್ಮಗೋಳ ಗ್ರಾಮದ ಗೋಣಿಬಸವೇಶ್ವರ ದೇವಸ್ಥಾನದ ಸಮೀಪದ ವರೆಗೆ ನೀರು ಆವರಿಸಿದೆ. ಪ್ರವಾಹಕ್ಕೆ ಒಳಗಾಗಬಹುದಾದ ಗ್ರಾಮಗಳಿಗೆ ಭೇಟಿ ನೀಡಿರುವ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಗ್ರಾಮಸ್ಥರಿಗೆ ಸೂಚಿಸಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.