“ಬರೋದಾದ್ರೆ ಏಳು ಗಂಟೆ ಒಳಗೆ ಬನ್ನಿ”: ಚಾರ್ಮಾಡಿ ಘಾಟಿಯಲ್ಲಿ ಸಂಚಾರ ದುಸ್ತರ

Team Udayavani, Jul 25, 2021, 8:13 PM IST

dfrtretre

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರ ಜೋರಿದೆ.  ಸಂಜೆ ಏಳು ಗಂಟೆಯ ನಂತರ ಚಾರ್ಮಾಡಿ ಘಾಟ್ ಮೂಲಕ ಮಂಗಳೂರು-ಧರ್ಮಸ್ಥಳಕ್ಕೆ ತೆರಳಲು ಯಾರೂ ಬರಬೇಡಿ. ಬಂದರೆ, ಇಡೀ ರಾತ್ರಿ ಚಾರ್ಮಾಡಿ ಘಾಟಿಯ ಚಳಿಯಲ್ಲಿ ನಡುಗಬೇಕು. ಜೊತೆಗೆ, ಬೆಳಗ್ಗೆ ಗಾಡಿಗಳು ಹೊರಟಾಗಲೂ ಮೂರ್ನಾಲ್ಕು ಗಂಟೆ ಚಾರ್ಮಾಡಿ ಘಾಟಿಯಲ್ಲಿ ನಿಲ್ಲಬೇಕಾಗುತ್ತದೆ.

ಇಂದು-ನಿನ್ನೆ ಮಳೆ ಪ್ರಮಾಣ ತಗ್ಗಿದ್ದರೂ ಚಾರ್ಮಾಡಿಯ ದಟ್ಟ ಕಾನನದಲ್ಲಿ ವರುಣ ಅಬ್ಬರ ನಿಂತಿಲ್ಲ. ಹಾಗಾಗಿ, ಕಳೆದ ಎರಡ್ಮೂರು ವರ್ಷದಿಂದ ಪ್ರತಿ ವರ್ಷ ಚಾರ್ಮಾಡಿಯಲ್ಲಿ ಬೆಟ್ಟ-ಗುಡ್ಡ, ಭೂ ಕುಸಿತ ಸಾಮಾನ್ಯವಾಗಿತ್ತು. ದುರಸ್ಥಿಗೆ ತಿಂಗಳುಗಳೇ ಬೇಕಾಗಿತ್ತು. ಹಾಗಾಗಿ, ಜಿಲ್ಲಾಡಳಿತ ಮುಂಜಾಗೃತ ಕ್ರಮವಾಗಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಬಾರದೆಂದು ಚಾರ್ಮಾಡಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಜರ್ನಿಗೆ ಸಂಪೂರ್ಣ ಬ್ರೇಕ್ ಹಾಕಿತ್ತು. ಆದರೂ ಗೊತ್ತಿದ್ದೋ… ಗೊತ್ತಿಲ್ಲದೆಯೋ ಬರುವ ಪ್ರವಾಸಿಗರು-ಪ್ರಯಾಣಿಕರಿಗೆ ಬಣಕಲ್ ಪೊಲೀಸರು ಯಾರನ್ನೂ ಬಿಡದೆ ಚಳಿಯಲ್ಲಿ ನಡುಗಿಸಿದ್ದರು.

ನಿನ್ನೆ ರಾತ್ರಿ ಕೂಡ ಸುಮಾರು 200 ವಾಹನಗಳು ಚಾರ್ಮಾಡಿ ಘಾಟಿ ಆರಂಭದ ಕೊಟ್ಟಿಗೆಹಾರದಲ್ಲಿ ಪರೇಡ್ ನಡೆಸಿದ್ದವು. ದಮ್ಮಯ್ಯ ಅಂದರೂ ಪೊಲೀಸರು ಬಿಟ್ಟಿರಲಿಲ್ಲ. ಇಂದು ಬೆಳಗ್ಗೆ 6 ಗಂಟೆಗೆ ವಾಹನಗಳನ್ನ ಬಿಡುತ್ತಿದ್ದಂತೆ ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುವ ಹಾಗೂ ಚಿಕ್ಕಮಗಳೂರಿನಿಂದ ಮಂಗಳೂರಿಗೆ ಹೋಗುವ ನೂರಾರು ವಾಹನಗಳಿಂದ ಚಾರ್ಮಾಡಿಯಲ್ಲಿ ಸುಮಾರು ಮೂರು ಗಂಟೆ ಟ್ರಾಫಿಕ್ ಜಾಮ್ ಆಗಿತ್ತು. ಪ್ರವಾಸಿಗರು-ಪ್ರಯಾಣಿಕರು ಇಡೀ ರಾತ್ರಿ ಚಾರ್ಮಾಡಿಯ ರಣಚಳಿಯಲ್ಲಿ ನಡುಗಿದ್ದಲ್ಲದೆ. ಬೆಳಗ್ಗೆ ಕೂಡ ಚಳಿಯಲ್ಲಿ ನಡುಗುತ್ತಾ ಮೂರ್ನಾಲ್ಕು ಗಂಟೆ ನಿಂತಲ್ಲೇ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಹಾಗಾಗಿ, ಪ್ರಯಾಣಿಕರು-ಪ್ರವಾಸಿಗರು ಬರೋದಾದರೆ ಸಂಜೆ ಏಳು ಗಂಟೆ ಒಳಗೆ ಬಂದು ಮಂಗಳೂರು ಸೇರಿಬೇಡಿ. ಏಳು ಗಂಟೆಯ ನಂತರ ಬಂದು ಕೊಟ್ಟಿಗೆಹಾರದಲ್ಲಿ ಪರಿತಪ್ಪಿಸಬೇಡಿ.

ಕೊಟ್ಟಿಗೆಹಾರದಲ್ಲಿ ತಂಗಲು ಸಮರ್ಪಕ ಲಾಡ್ಜ್ ಸೌಲಭ್ಯವೂ ಇಲ್ಲ. ಅತ್ತ ಪೊಲೀಸರು ಬಿಡೋದು ಇಲ್ಲ. ಹಾಗಾಗಿ, ಸಂಜೆ ಏಳು ಗಂಟೆಯ ನಂತರ ಬರಬೇಡಿ. ಬಂದು ಉಳಿಯಲು ಜಾಗವಿಲ್ಲದೆ ಮಲೆನಾಡ ಚಳಿಯಲ್ಲಿ ನಡುಗಬೇಡಿ ಅನ್ನೋ ಭಾವನೆ ಮಳೆಯಲ್ಲಿ ನೆನೆದು, ಚಳಿಯಲ್ಲಿ ನಡುಗುತ್ತಾ ರಸ್ತೆಯಲ್ಲಿ ಕಾಲ ಕಳೆಯೋ ಪ್ರಯಾಣಿಕರು-ಪ್ರವಾಸಿಗರನ್ನ ಕಣ್ಣಾರೆ ಕಂಡ ಕೊಟ್ಟಿಗೆಹಾರದ ಹೃದಯವಂತರದ್ದು.

ಟಾಪ್ ನ್ಯೂಸ್

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.