ಚಾರ್ಮಾಡಿ ಘಾಟಿನಲ್ಲಿ ಶಾಸಕರ ಬೆಂಬಲಿಗರ ವಾಹನಕ್ಕಿಲ್ಲತಡೆ:ಖಾಕಿ ವಿರುದ್ಧ ಜನಸಾಮಾನ್ಯರ ಆಕ್ರೋಶ
Team Udayavani, Jul 26, 2021, 9:02 PM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿನಲ್ಲಿ ಸಂಜೆ 7 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆದರೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಬೆಂಬಲಿಗರ ವಾಹನಗಳಿಗೆ ಅನುಮತಿ ನೀಡುವ ಮೂಲಕ ಪೊಲೀಸರು ಆದೇಶ ಉಲ್ಲಂಘಿಸಿರುವ ಆರೋಪ ಕೇಳಿ ಬಂದಿದೆ.
ಚಾರ್ಮಾಡಿಯ ದಟ್ಟ ಕಾನನದಲ್ಲಿ ವರುಣ ಅಬ್ಬರ ನಿಂತಿಲ್ಲ. ಹಾಗಾಗಿ, ಕಳೆದ ಎರಡ್ಮೂರು ವರ್ಷದಿಂದ ಪ್ರತಿ ವರ್ಷ ಚಾರ್ಮಾಡಿಯಲ್ಲಿ ಬೆಟ್ಟ-ಗುಡ್ಡ, ಭೂ ಕುಸಿತ ಸಾಮಾನ್ಯವಾಗಿತ್ತು. ದುರಸ್ಥಿಗೆ ತಿಂಗಳುಗಳೇ ಬೇಕಾಗಿತ್ತು. ಹಾಗಾಗಿ, ಜಿಲ್ಲಾಡಳಿತ ಮುಂಜಾಗೃತ ಕ್ರಮವಾಗಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಬಾರದೆಂದು ಚಾರ್ಮಾಡಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಜರ್ನಿಗೆ ಸಂಪೂರ್ಣ ಬ್ರೇಕ್ ಹಾಕಲಾಗಿದೆ. ಪರಿಣಾಮ ನಿನ್ನೆ ಹಾಗೂ ಇವತ್ತು ಪ್ರವಾಸಿಗರು ಚಳಿಯಲ್ಲೇ ಅಲ್ಲೆ ಕಾಯುವ ಪರಿಸ್ಥಿತಿ ಎದುರಾಗಿದೆ.
ಆದರೆ, ಶಾಸಕ ಹರೀಶ್ ಪೂಂಜಾ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಫೋನ್ ಮಾಡಿದ ಕೂಡಲೇ ಅವರ ಬೆಂಬಲಿಗರ ವಾಹನಗಳಿಗೆ ಅನುಮತಿ ಕೊಡಲಾಯಿತು. ಇದು ಜನ ಸಾಮಾನ್ಯರ ಕಣ್ಣು ಕೆಂಪಾಗಿಸಿದ್ದು, ಸಾಮಾನ್ಯರಿಗೆ ಒಂದು ನ್ಯಾಯ ರಾಜಕಾರಣಿಗಳಿಗೆ ಒಂದು ನ್ಯಾಯವೇ ಎಂದು ಪ್ರಶ್ನಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
Malpe ಬೀಚ್ ಸ್ವಚ್ಛತೆ: 3 ದಿನದಲ್ಲಿ 26 ಲೋಡ್ ಕಸ ಸಂಗ್ರಹ
Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.