ತೆಕ್ಕಟ್ಟೆ ಗ್ರಾಮಕರಣಿಕರ ಕಚೇರಿಗೆ ಜಿಲ್ಲಾಧಿಕಾರಿ ಜಗದೀಶ್ ದಿಢೀರ್ ಭೇಟಿ
Team Udayavani, Jul 27, 2021, 5:45 PM IST
ತೆಕ್ಕಟ್ಟೆ : ಇಲ್ಲಿನ ಗ್ರಾಮಕರಣಿಕರ ಕಚೇರಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಜು. 27ರಂದು ದಿಢೀರ್ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯ ಬಳಿ ಅಳಲು ತೋಡಿಕೊಂಡ ವಯೋವೃದ್ಧೆ :
ಜಿಲ್ಲಾಧಿಕಾರಿ ಅವರು ಗ್ರಾಮಕರಣಿಕರ ಕಚೇರಿಯಲ್ಲಿ ಕಡತವನ್ನು ಪರಿಶೀಲಿಸಿ, ಅನಂತರ ತೆಕ್ಕಟ್ಟೆ ಗ್ರಾ.ಪಂ.ಕಚೇರಿಗೆ ಆಗಮಿಸಿದ ಸಾರ್ವಜನಿಕರ ಬಳಿ ಗ್ರಾಮ ಮಟ್ಟದ ಅಧಿಕಾರಿಗಳ ಕಾರ್ಯವೈಖರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ಸಂದರ್ಭದಲ್ಲಿ ಆಶ್ರಯ ಯೋಜನೆಗಾಗಿ ಅರ್ಜಿ ಸಲ್ಲಿಸಲು ಬಂದಿದ್ದ ಆಲುಗುಡ್ಡೆ ನಿವಾಸಿ ಬಾಬಿ (60) ಎಂಬ ಬಡ ವಯೋವೃದ್ಧೆಯೋರ್ವರು ಇದ್ದ ಹಳೆಯ ಮನೆ ಸೋರುತ್ತಿದ್ದು ಅದನ್ನು ಕೆಡವಲಾಗಿದೆ. ಆದರೆ ಪ್ರಸ್ತುತ ಸರಕಾರ ಈಗ ಮನೆ ನಿರ್ಮಾಣದ ಅರ್ಜಿ ಸ್ವೀಕಾರವನ್ನು ಸ್ಥಗಿತಗೊಳಿಸಿದೆ. ಅಲ್ಲದೆ ಆಶ್ರಯಿಸಲು ಸೂರು ಇಲ್ಲ. ಮಳೆಯಿಂದ ರಕ್ಷಣೆಗಾಗಿ ಬೇರೆಯವರ ಮನೆಯನ್ನು ಆಶ್ರಯಿಸಿದ್ದೇನೆ ಎಂದು ತನ್ನ ಅಳಲು ತೋಡಿಕೊಂಡರು.
ಇಂತಹ ಸಮಸ್ಯೆಗಳಿಗೆ ಮಾನವೀಯ ನೆಲೆಯ ಮೇಲೆ ತತ್‌ಕ್ಷಣವೇ ಸ್ಪಂದಿಸುವಂತೆ ಗ್ರಾಮ ಲೆಕ್ಕಾಧಿಕಾರಿ ದೀಪಿಕಾ ಶೆಟ್ಟಿ ಅವರ ಬಳಿ ಜಿಲ್ಲಾಧಿಕಾರಿ ಆದೇಶಿಸಿದರು.
ಇದೇ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯ ವಿಜಯ ಭಂಡಾರಿ ಅವರು ತೆಕ್ಕಟ್ಟೆ ರಾ.ಹೆ.66ರ ಪ್ರಮುಖ ಸರ್ಕಲ್‌ನಲ್ಲಿ ಹೈಮಾಸ್ಟ್ ಬೆಳಕಿಲ್ಲದ ಪರಿಣಾಮ ಸಂಭವನೀಯ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಈ ಬಗ್ಗೆ ತುರ್ತು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಳಿ ಮನವಿ ಮಾಡಿಕೊಂಡರು.
ಇದನ್ನೂ ಓದಿ :ಬಿಜೆಪಿ ಹೈಕಮಾಂಡ್ ಪಾಲಿಗೆ ರಾಜ್ಯದ ಜನರೇನು ಪ್ರಯೋಗ ಪಶುಗಳೆ? : ದಿನೇಶ್ ಗುಂಡೂರಾವ್ ಟ್ವೀಟ್
ಈ ಸಂದರ್ಭದಲ್ಲಿ ಬೈಂದೂರು ತಾಲೂಕಿನ ಉಪ ತಹಶೀಲ್ದಾರ್ ನರಸಿಂಹ ಕಾಮತ್, ಗ್ರಾಮಲೆಕ್ಕಾಧಿಕಾರಿ ದೀಪಿಕಾ ಶೆಟ್ಟಿ, ಪಿಡಿಒ ಸುನಿಲ್, ಗ್ರಾ.ಪಂ. ಸದಸ್ಯ ವಿಜಯ ಭಂಡಾರಿ. ಕಾರ್ಯದರ್ಶಿ ಚಂದ್ರ , ಗ್ರಾಮ ಸಹಾಯಕ ಚಂದ್ರ ದೇವಾಡಿಗ ಹಾಗೂ ಗ್ರಾ.ಪಂ. ಸಿಬಂದಿ ಉಪಸ್ಥಿತರಿದ್ದರು.
ಗ್ರಾಮ ಮಟ್ಟದ ಅಧಿಕಾರಿಗಳ ಕಾರ್ಯವೈಖರಿಗಳನ್ನು ಪರಿಶೀಲಿಸುವ ನಿಟ್ಟಿನಿಂದ ಗ್ರಾಮಗಳಿಗೆ ತೆರಳಿ ದಫ್ತಾ ತಪಾಸಣೆ ಮಾಡುತ್ತಿದ್ದೇನೆ. ಅಲ್ಲದೆ ಸಾರ್ವಜನಿಕರಿಗೆ ಅಧಿಕಾರಿಗಳ ಸ್ಪಂದನೆ ಹಾಗೂ ಯಾವುದಾದರೂ ಲೋಪದೋಷಗಳಿವೆ ಎನ್ನುವುದನ್ನು ಕೂಲಂಕಷವಾಗಿ ಪರೀಕ್ಷಿಸಲಾಗುವುದು. ತೆಕ್ಕಟ್ಟೆ ಗ್ರಾಮ ಕರಣಿಕರ ಕಚೇರಿಯ ದಾಖಲಾತಿಗಳು ಅತ್ಯಂತ ಪಾರದರ್ಶಕವಾಗಿದೆ ಹಾಗೂ ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ.
– ಜಿ.ಜಗದೀಶ್ ಜಿಲ್ಲಾಧಿಕಾರಿ, ಉಡುಪಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.