ವಿದ್ಯುತ್ ಪ್ರವಹಿಸಿ ಲೈನ್‌ಮನ್ ಸಾವು; ಮತ್ತೊರ್ವನಿಗೆ ಗಾಯ: ಗ್ರಾಮಸ್ಥರ ಆಕ್ರೋಶ


Team Udayavani, Jul 27, 2021, 7:16 PM IST

ವಿದ್ಯುತ್ ಪ್ರವಹಿಸಿ ಲೈನ್‌ಮನ್ ಸಾವು; ಮತ್ತೊರ್ವನಿಗೆ ಗಾಯ: ಗ್ರಾಮಸ್ಥರ ಆಕ್ರೋಶ

ಹುಣಸೂರು:ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಹೊಸಪುರ ಗ್ರಾಮದಲ್ಲಿ ವಿದ್ಯುತ್ ಲೈನ್ ದುರಸ್ತಿ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಕರ್ತವ್ಯ ನಿರತ ಲೈನ್‌ಮನ್ ಟಿ.ಸಿ.ಮೇಲೆಯೇ ದಾರುಣವಾಗಿ ಮೃತಪಟ್ಟಿದ್ದರೆ, ಮತ್ತೊರ್ವ ಲೈನ್‌ಮನ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಬೆಂಕಿಪುರ ನಿವಾಸಿ ಸಿದ್ದನಾಯ್ಕರ ಪುತ್ರ ಕರೀನಾಯ್ಕ(48) ಮೃತ, ಇವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಇವರೊಂದಿಗಿದ್ದ ಚಿಕ್ಕಾಡಿಗನಹಳ್ಳಿಯ ಲೈನ್‌ಮನ್ ಪ್ರಶಾಂತ್ ಗಾಯಗೊಂಡವರು.

ಘಟನೆ ವಿವರ: ಬಿಳಿಕೆರೆ ಉಪವಿಭಾಗ ವ್ಯಾಪ್ತಿಯ ಗೆಜ್ಜಯ್ಯನವಡ್ಡರಗುಡಿ ವಿದ್ಯುತ್ ವಿತರಣಾ ಕೇಂದ್ರದ ಲೈನ್‌ಮನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕರೀನಾಯ್ಕ ಹಾಗೂ ಪ್ರಶಾಂತ್ ಸೋಮವಾರ ಮದ್ಯಾಹ್ನ ಹೊಸಪುರದ ಬಳಿ ವಿದ್ಯುತ್ ಲೈನ್ ದುರಸ್ತಿಗಾಗಿ ವಿತರಣಾ ಕೇಂದ್ರದಲ್ಲಿ ವಿದ್ಯುತ್ ಸ್ಥಗಿತಗೊಳಿಸಲು ಸೂಚಿಸಿ, ಹೊಸಪುರಕ್ಕೆ ತೆರಳಿ ಇತರೆ ಸಿಬ್ಬಂದಿಗಳೊಂದಿಗೆ ದುರಸ್ತಿಗೊಳಿಸುತ್ತಿದ್ದರು. ಈವೇಳೆ ವಿದ್ಯುತ್ ಕಂಬ ಹತ್ತಿ ಲೈನ್ ಸರಿಪಡಿಸುತ್ತಿದ್ದ ವೇಳೆಯೇ  ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ್ದು, ಕರೀನಾಯ್ಕರು ವಿದ್ಯುತ್ ಲೈನ್ ಮೇಲೆಯೇ ಸಾವನ್ನಪ್ಪಿದ್ದರೆ, ಜೊತೆಗಿದ್ದ ಪ್ರಶಾಂತ್‌ಗೂ ತೀವ್ರಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯುತ್ ಸಂಪರ್ಕ ಕಡಿತಗೊಳಿಸಿ ದುರಸ್ತಿಗೊಳಿಸುತ್ತಿದ್ದ ವೇಳೆಯೇ ಯಾರು ಮತ್ತೆ ಸಂಪರ್ಕ ಕಲ್ಪಿಸಿದವರ್‍ಯಾರೆಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರೊಬ್ಬರು ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಹಾಗೂ ಬೆಂಕಿಪುರದ ಕುಟುಂಬದ ಮಂದಿ ಸ್ಥಳದಲ್ಲಿ ಜಮಾಯಿಸಿ ಅಧಿಕಾರಿಗಳ ವಿರುದ್ದ ಆಕ್ರೋಶ ಹೊರ ಹಾಕಿದರು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಬರಬೇಕು, ಸೂಕ್ತ ಪರಿಹಾರ ಹಾಗೂ ತಪ್ಪಿಕಸ್ಥರ ವಿರುದ್ದ ಕ್ರಮವಾಗಬೇಕೆಂದು ಪಟ್ಟು ಹಿಡಿದರು.

ಘಟನೆ ನಡೆದ ಬಗ್ಗೆ ಮಾಹಿತಿ ಪಡೆದ ಶಾಸಕ ಎಚ್.ಪಿ.ಮಂಜುನಾಥ್, ಚೆಸ್ಕಾಂ ಇ.ಇ.ಸುನಿಲ್, ಡಿ.ವೈ.ಎಸ್.ಪಿ.ರವಿಪ್ರಸಾದ್, ಇನ್ಸ್‌ಪೆಕ್ಟರ್ ರವಿಕುಮಾರ್ ಮತ್ತಿತರ ಅಧಿಕಾರಿಗಳು ತೆರಳಿದ ವೇಳೆ ಆಕ್ರೋಶಗೊಂಡಿದ್ದ ಗ್ರಾಮಸ್ಥರು ತಪ್ಪಿತಸ್ತರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಕೊನೆಗೆ ಗ್ರಾಮಸ್ಥರ ಮನವೊಲಿಸಿ ಶವವನ್ನು ಕೆಳಕ್ಕಿಳಿಸಿ, ಬಿಳಿಕೆರೆ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಟಾಪ್ ನ್ಯೂಸ್

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.