ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸ ನಿಮ್ಮ ಆದ್ಯತೆಯಾಗಲಿ : ಬೊಮ್ಮಾಯಿಗೆ ಸಿದ್ದರಾಮಯ್ಯ ಸಲಹೆ

Team Udayavani, Jul 28, 2021, 3:21 PM IST

fghfhfvcxx

ಬೆಂಗಳೂರು : ಪ್ರಮಾಣವಚನ ಸ್ವೀಕಾರದ ಮೂಲಕ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಅವಕಾಶವನ್ನು ಸಂವಿಧಾನಬದ್ದವಾಗಿ ಪಡೆದಿರುವ  ಬಸವರಾಜ ಬೊಮ್ಮಾಯಿಯವರೇ ನಿಮಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು. ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ ಎಂದು ಹಾರೈಸುತ್ತೇನೆ.

ಕಳೆದ ಎರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ. ಅಧಿಕಾರದ ಆಸೆಯೋ, ತಿಳುವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ, ಹಿಂದಿನ ಮುಖ್ಯಮಂತ್ರಿಗಳು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಸೊಲ್ಲೆತ್ತಲಿಲ್ಲ. ಆ ಧೈರ್ಯವನ್ನು ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ.

ಬರಪರಿಹಾರ, ಜಿಎಸ್ ಟಿ ಪಾಲು, ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು- ಈ ಎಲ್ಲ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ತೋರಿರುವ ಮಲತಾಯಿಧೋರಣೆ ನಿಮಗೆ ತಿಳಿದಿದೆ. ಇದನ್ನು ಪ್ರಧಾನಿ ಮೋದಿ ಮತ್ತು ಸಂಬಂಧಿತ ಸಚಿವರ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ನೀವು ಆದ್ಯತೆಯಿಂದ ಮಾಡಬೇಕೆಂಬುದು ನನ್ನ ಸಲಹೆ.

ರಾಜ್ಯಕ್ಕೆ ಅನ್ಯಾಯವಾದ ಸಂದರ್ಭದಲ್ಲಿ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪ್ರಯತ್ನದ ಪರಂಪರೆಯೊಂದು ನಮ್ಮಲ್ಲಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಈ ರೀತಿಯ ಮುಕ್ತಚರ್ಚೆ-ಸಂವಾದಗಳೇ ನಿಂತುಬಿಟ್ಟಿವೆ. ನೀವು ಇದಕ್ಕೆ ಮರುಚಾಲನೆ ನೀಡುವಿರೆಂಬ ನಿರೀಕ್ಷೆ ನನ್ನದು.

ಪ್ರಧಾನಮಂತ್ರಿ ಇಲ್ಲವೇ ಮುಖ್ಯಮಂತ್ರಿ ಸ್ಥಾನ ಪಕ್ಷಕ್ಕೆ ಸೀಮಿತವಾದುದಲ್ಲ, ಅದು ಇಡೀ ದೇಶ ಮತ್ತು ರಾಜ್ಯಕ್ಕೆ ಸಂಬಂಧಿಸಿದ್ದು. ವಿರೋಧ ಪಕ್ಷವಾಗಿ ನಮ್ಮ ನಡುವಿನ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ.

ಸಾರ್ವಜನಿಕ ವಿಷಯಕ್ಕೆ ಸಂಬಂಧಿಸಿದ ಹಾಗೆ ಹಿಂದಿನ ಮುಖ್ಯಮಂತ್ರಿಗಳಿಗೆ ಹತ್ತಾರು ಪತ್ರಗಳನ್ನು ಬರೆದರೂ ಅದಕ್ಕೆ ಪ್ರತಿಕ್ರಿಯಿಸುವ ಕನಿಷ್ಠ ಸೌಜನ್ಯವನ್ನೂ ಅವರು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ. ಪಾರದರ್ಶಕತೆ ಪ್ರಜಾಪ್ರಭುತ್ವದ ಆತ್ಮವಾಗಿದೆ. ನಿಮ್ಮ ಕಾಲದಲ್ಲಿಯಾದರೂ ಮಾಹಿತಿಯ ವಿನಿಮಯ ಸುಗಮವಾಗಿ ನಡೆಯುವಂತೆ ಮಾಡುವಿರೆಂದು ನಂಬಿದ್ದೇನೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.