ಬ್ಯಾಕ್‌ ಟು ಬ್ಯಾಕ್‌ ಧನಂಜಯ್‌ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ


Team Udayavani, Jul 29, 2021, 10:27 AM IST

ಬ್ಯಾಕ್‌ ಟು ಬ್ಯಾಕ್‌ ಧನಂಜಯ್‌ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ

ಕನ್ನಡ ಚಿತ್ರರಂಗದಲ್ಲಿ ಸದ್ಯದ ಮಟ್ಟಿಗೆ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ಬಿಝಿಯಾಗಿರುವ ನಟ ಯಾರು ಎಂಬ ಪ್ರಶ್ನೆಗೆ ಚಿತ್ರರಂಗದ ಮಂದಿಯಿಂದ ಬರುವ ಉತ್ತರ ನಟ ಡಾಲಿ ಧನಂಜಯ್‌. ಹೌದು, ಕನ್ನಡ ಚಿತ್ರರಂಗದಲ್ಲಿ ನಾಯಕನಾಗಿ ಮತ್ತು ಖಳನಾಯಕನಾಗಿ ಎರಡೂ ಥರದ ಪಾತ್ರಗಳಲ್ಲೂ ಗುರುತಿಸಿ ಕೊಂಡಿರುವ ನಟ ಧನಂಜಯ್‌ ಸದ್ಯದ ಮಟ್ಟಿಗೆ ಫ‌ುಲ್‌ ಬಿಝಿ.

ಈ ವರ್ಷದ ಆರಂಭದಲ್ಲಿಯೇ ಧನಂಜಯ್‌ ಅಭಿನಯಿಸಿದ್ದ “ಪೊಗರು’ ಮತ್ತು “ಯುವರತ್ನ’ ಚಿತ್ರಗಳು ಬಿಡುಗಡೆಯಾಗಿದ್ದು, ಎರಡೂ ಚಿತ್ರಗಳಲ್ಲೂ ಪ್ರೇಕ್ಷಕರು ಧನಂಜಯ್‌ ಪಾತ್ರವನ್ನು ಮತ್ತು ಅಭಿನಯವನ್ನು ಮೆಚ್ಚಿಕೊಂಡಿದ್ದರು. ಇದು ವರ್ಷದ ಮೊದಲರ್ಧದಷ್ಟೇ ಭರ್ಜರಿಯಾಗಿ ಸಿನಿ ಅಕೌಂಟ್‌ ಓಪನ್‌ ಮಾಡಿರುವ ಧನಂಜಯ್‌, ವರ್ಷದ ದ್ವಿತೀಯರ್ಧದಲ್ಲಿ ಇನ್ನಷ್ಟು ಸಿನಿಮಾಗಳ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.

ಹೌದು, ಕೋವಿಡ್‌ ಎರಡನೇ ಲಾಕ್‌ಡೌನ್‌ ಬಳಿಕ ಧನಂಜಯ್‌ ಅಭಿನಯಿಸಿರುವ ಮತ್ತೂಂದು ಬಿಗ್‌ ಬಜೆಟ್‌ ಚಿತ್ರ “ಸಲಗ’ ತೆರೆಗೆ ಬರಲು ರೆಡಿಯಾಗುತ್ತಿದೆ. ದುನಿಯಾ ವಿಜಯ್‌ ನಟಿಸಿ, ನಿರ್ದೇಶಿಸಿರುವ “ಸಲಗ’ ಚಿತ್ರದಲ್ಲಿ ಧನಂಜಯ್‌ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರ ಇದೇ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗುತ್ತಿದೆ. ಇದರ ಬೆನ್ನಲ್ಲೇ ಧ‌ನಂಜಯ್‌ ನಾಯಕನಾಗಿ ಅಭಿನಯಿಸಿರುವ “ಬಡವ ರಾಸ್ಕಲ್‌’ ಚಿತ್ರದ ಬಹುತೇಕ ಕೆಲಸಗಳು ಕೂಡ ಪೂರ್ಣಗೊಂಡಿದ್ದು, ಚಿತ್ರತಂಡ ನಿಧಾನವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.

ಇದನ್ನೂ ಓದಿ:ಆಡಿಯೋ ಪ್ರಿಯರು ಕಾತುರದಿಂದ ಕಾಯುತ್ತಿದ್ದ ನಥಿಂಗ್‍ ಇಯರ್ (1) ಬಿಡುಗಡೆ: ಇದರ ವಿಶೇಷವೇನು?

ಇದಲ್ಲದೆ “ರತ್ನನ್‌ ಪ್ರಪಂಚ’, “ತೋತಾಪುರಿ’, “ಭೈರಾಗಿ’, ತೆಲುಗಿನ “ಪುಷ್ಪಾ’ ಚಿತ್ರದ ಚಿತ್ರೀಕರಣ ಕೂಡ ಪೂರ್ಣಗೊಂಡಿದ್ದು, ಈ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದೆ. ಅಂದು ಕೊಂಡಂತೆ ನಡೆದರೆ ಈ ಚಿತ್ರಗಳು ಕೂಡ ಈ ವರ್ಷದ ಕೊನೆಯಲ್ಲಿ ತೆರೆಗೆ ಬರುವ ಯೋಚನೆಯಲ್ಲಿವೆ.

ಇದರೊಂದಿಗೆ ಧನಂಜಯ್‌ ನಾಯಕನಾಗಿ ಅಭಿನಯಿಸುತ್ತಿರುವ “ಹೆಡ್‌ ಆ್ಯಂಡ್‌ ಬುಷ್‌’ ಮತ್ತು “ಮಾನ್ಸೂನ್ ರಾಗ’, “ಡಾಲಿ’ ಚಿತ್ರದ ಕೆಲಸಗಳು ಕೂಡ ಜೋರಾಗಿ ನಡೆಯುತ್ತಿದ್ದು, ಈ ಚಿತ್ರಗಳು ಮುಂದಿನ ವರ್ಷದ ಆರಂಭದಲ್ಲಿ‌ ತೆರೆಗೆ ಬರಬಹುದು ಎನ್ನಲಾಗುತ್ತಿದೆ.

ಚಿತ್ರ‌ರಂಗದ ಮೂಲಗಳ ಪ್ರಕಾರ, ಸದ್ಯದ ಮಟ್ಟಿಗೆ ಧನಂಜಯ್‌ ಅಭಿನಯದ ಎರಡು ಚಿತ್ರಗಳು ಬಿಡುಗಡೆಯಾಗಿದ್ದು,ಈ ವರ್ಷದ ‌ಕೊನೆಯೊಳಗೆ ಏನಿಲ್ಲವೆಂದರೂ ಇನ್ನೂ ಐದಾರು ಚಿತ್ರಗಳು ತೆರೆ ಕಾಣಬಹುದು ಎಂಬ ನಿರೀಕ್ಷೆಯಿದೆ

ತೆಲುಗಿನ “ಪುಷ್ಪಾ’ದ ಮೇಲೂ ನಿರೀಕ್ಷೆ: ಈ ಹಿಂದೆ ತೆಲುಗಿನ “ಭೈರವಗೀತ’ ಚಿತ್ರದ ಮೂಲಕ ಟಾಲಿವುಡ್‌ ಅಂಗಳಕ್ಕೆ ಪರಿಚಯವಾಗಿದ್ದ ಧನಂಜಯ್‌ ಈಗ ತೆಲುಗಿನ ಮತ್ತೂಂದು ಬಿಗ್‌ ಬಜೆಟ್‌ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯ ತೆಲುಗಿನಲ್ಲಿ ಅಲ್ಲು ಅರ್ಜುನ್‌ ನಾಯಕನಾಗಿರುವ, ಸುಕುಮಾರ್‌ ನಿರ್ದೇಶನದ “ಪುಷ್ಪಾ’ ಚಿತ್ರದಲ್ಲೂ ಧನಂಜಯ್‌ ಪ್ರಮುಖಪಾತ್ರದಲ್ಲಿಕಾಣಿಸಿಕೊಂಡಿದ್ದಾರೆ.

ಈಗಾಗಲೇ”ಪುಷ್ಪಾ’ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರತಂಡ ಸದ್ಯ ಪ್ರಮೋಶನ್‌ ಕೆಲಸದಲ್ಲಿ ಬಿಝಿಯಾಗಿದೆ. ಆಗಸ್ಟ್‌ ವೇಳೆಗೆ “ಪುಷ್ಪಾ’ ತೆರೆಗೆ ಬರುವ ಯೋಚನೆಯಲ್ಲಿದ್ದು, ತೆಲುಗಿನ ಜೊತೆಗೆ ಕನ್ನಡ, ತಮಿಳು, ಹಿಂದಿ ಮತ್ತು ಮಲೆಯಾಳಂ ಭಾಷೆಗಳಲ್ಲೂ ಚಿತ್ರ ಏಕಕಾಲಕ್ಕೆ ತೆರೆ ಕಾಣುತ್ತಿದೆ

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.