ದೇಹ ದೇಗುಲದಲ್ಲಿ ದೇವ ಸ್ಮರಣೆ: ಪ್ರಭು ಶ್ರೀನಿವಾಸ್‌ ನಿರ್ದೇಶನದ ‘ಬಾಡಿ ಗಾಡ್‌’


Team Udayavani, Jul 29, 2021, 1:34 PM IST

ಬಾಡಿ ಗಾಡ್‌’

ಕೋವಿಡ್‌ ಆತಂಕ ಮತ್ತು ಲಾಕ್‌ಡೌನ್‌ ನಡುವೆಯೇ ಸದ್ದಿಲ್ಲದೆ ಅನೇಕರು ತಮ್ಮ ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿ ಕೊಂಡಿದ್ದಾರೆ. ಹೀಗೆ ಕೋವಿಡ್‌ ಭಯದ ನಡುವೆಯೇ ಶುರುವಾದ ಚಿತ್ರವೊಂದು ಸದ್ಯ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದೆ. ಅದರ ಹೆಸರು “ಬಾಡಿ ಗಾಡ್‌’.

ಪ್ರಭು ಶ್ರೀನಿವಾಸ್‌ “ಬಾಡಿ ಗಾಡ್‌’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮನೋಜ್‌, ಮಠ ಗುರುಪ್ರಸಾದ್‌, ಪದ್ಮಜಾರಾವ್‌, ನಿರಂಜನ್‌, ಅಶ್ವಿ‌ನ್‌ ಹಾಸನ್‌ ಮೊದಲಾದವರು”ಬಾಡಿ ಗಾಡ್‌’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಬಾಡಿ ಗಾಡ್‌’ ಚಿತ್ರದ ಟೈಟಲ್‌ ಮತ್ತು ಕಥಾಹಂದರ ಬಗ್ಗೆ ಮಾತಿಗಿಳಿದ ನಿರ್ದೇಶಕ ಪ್ರಭು ಶ್ರೀನಿವಾಸ್‌, “ಸತ್ತ ವ್ಯಕ್ತಿಯ ದೇಹದ ಹಿಂದೆ ಹೆಣೆಯಲಾಗಿರುವ ವಿಭಿನ್ನ ಕಥೆ ಈ ಸಿನಿಮಾದಲ್ಲಿದೆ. ಲಾಕ್‌ಡೌನ್‌ ಸಮಯದಲ್ಲಿ ಸೀಮಿತ ಕಲಾವಿದರು ಮತ್ತು ತಂತ್ರಜ್ಞರನ್ನು ಇಟ್ಟುಕೊಂಡು ಸಿನಿಮಾ ನಿರ್ದೇಶಿಸಿದ್ದೇನೆ. ಮೊದಲು ಈ ಕಥೆಯನ್ನು ನನ್ನ ಸ್ನೇಹಿತರ ಬಳಿ ಹೇಳಿದೆ. ಅವರೆ ನಿರ್ಮಾಣ ಮಾಡಬೇಕಿತ್ತು. ಆದ್ರೆ ಕಾರಣಾಂತರದಿಂದ ನಾನೇ ನಿರ್ಮಾಣ ಮಾಡಬೇಕಾಯಿತು. ಪ್ರಮೋಷನಲ್‌ ಸಾಂಗ್‌ ಒಂದನ್ನು ಹೊರತುಪಡಿಸಿ ಈಗಾಗಲೇ ಉಳಿದೆಲ್ಲ ಚಿತ್ರೀಕರಣ ಮುಕ್ತಾಯವಾಗಿದೆ’ ಎಂದರು.

ಇದನ್ನೂ ಓದಿ:ಪ್ರೇಕ್ಷಕರ ಸನಿಹಕೆ ಬರೋಕೆ ರೆಡಿ: ಆಗಸ್ಟ್‌ 1ಕ್ಕೆ ಟ್ರೇಲರ್‌, ಆ. 20ಕ್ಕೆ ಸಿನಿಮಾ ರಿಲೀಸ್

ಇನ್ನು ಚಿತ್ರದಲ್ಲಿ ಪ್ರಮುಖಪಾತ್ರದಲ್ಲಿಕಾಣಿಸಿಕೊಂಡಿರುವ ಮಠ ಗುರುಪ್ರಸಾದ್‌, “ಲಾಕ್‌ ಡೌನ್‌ ಸಮಯದಲ್ಲಿ ಖಾಲಿ ಕುಳಿತ್ತಿದ್ದ ನನಗೆ ನಿರ್ದೇಶಕರು ಹೇಳಿದ ಈ ಕಥೆ ಇಷ್ಟವಾಯಿತು. ಇದರಲ್ಲಿ ಅರವತ್ತರ ಆಸುಪಾಸಿನ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇಲ್ಲಿಯವರೆಗೆ ಪತ್ರಕರ್ತ, ನಿರ್ದೇಶಕನಾಗಿ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ನನಗೆ ಇದರಲ್ಲೊಂದು ಹೊಸಥರದ ಪಾತ್ರ ಸಿಕ್ಕಿದೆ. ಚೆನ್ನಾಗಿ ಓದಿದ್ದ, ಮಗ-ಮಗಳು ವಿದೇಶದಲ್ಲಿ ನೆಲೆಸಿರುತ್ತಾರೆ. ವಯಸ್ಸಾದವರಿಗೆ ಮಕ್ಕಳ ಅವಶ್ಯಕತೆ ಎಷ್ಟಿರುತ್ತದೆ ಎನ್ನುವುದನ್ನ ನನ್ನ ಪಾತ್ರ ಹೇಳುತ್ತದೆ’ ಎಂದರು

ಈ ಹಿಂದೆ “ಮೊಗ್ಗಿನ ಮನಸ್ಸು’, “ಓ ಪ್ರೇಮವೇ’ ಮುಂತಾದ ಚಿತ್ರಗಳಲ್ಲಿ ಮನೋಜ್‌ “ಬಾಡಿಗಾಡ್‌’ ನಾಯಕನಾಗಿ ‌ ಅಭಿನಯಿಸಿದ್ದಾರೆ. ಚಿತ್ರದ ಬಗ್ಗೆ ಮಾತನಾಡಿದ ನಾಯಕ ನಟ ಮನೋಜ್‌, “ಇದರಲ್ಲಿ ನನ್ನದು ಮಧ್ಯಮ ವರ್ಗದ ಕುಟುಂಬದ ಹುಡುಗನ ಪಾತ್ರ. ಸಿನಿಮಾ‌ದಲ್ಲಿ ನನ್ನ ಹಾಗೂ ಗುರು ಪ್ರಸಾದ್‌ ಅವರ ಕಾಂಬಿನೇಶನ್‌ ನೋಡುಗರಿಗೆ ಇಷ್ಟವಾಗಲಿದೆ’ ಎಂದರು.

ಟಾಪ್ ನ್ಯೂಸ್

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.