ಕಾಂಗ್ರೆಸ್ ನತ್ತ ಮುಖ ಮಾಡಿದ್ರಾ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ .?
ಹಿರಿಯ ಕಾಂಗ್ರೆಸ್ ನಾಯಕರು ಹೇಳಿದ್ದೇನು..? ರಾಹುಲ್ ಗಾಂಧಿ ಏನ್ ಹೇಳಿದ್ದಾರೆ..?
Team Udayavani, Jul 29, 2021, 5:27 PM IST
ನವ ದೆಹಲಿ : ಕಳೆದ ವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷದ ಪ್ರಮುಖರ ಸಭೆ ನಡೆಸಲಾಗಿದ್ದು, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸಿದ್ಧಾಂತಕ್ಕೆ ಸರಿ ಹೋಂದುತ್ತಾರೆಯೇ ಎನ್ನುವುದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಇಂಡಿಯಾ ಟುಡೆ ವರದಿ ಮಾಡಿದೆ.
ಜುಲೈ 22(ಗುರುವಾರ) ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರುಗಳಾದ ಕಮಲ್ ನಾಥ್, ಮಲ್ಲಿಕಾರ್ಜುನ ಖರ್ಗೆ, ಎ ಕೆ ಆ್ಯಂಟೋನಿ, ಅಜಯ್ ಮಕೆನ್, ಆನಂದ್ ಶರ್ಮಾ, ಹರೀಶ್ ರಾವತ್, ಅಂಬಿಕಾ ಸೋನಿ, ಕೆ. ಸಿ ವೇಣುಗೋಪಾಲ್ ಮೊದಲಾದವರು ಇದ್ದರು ಎನ್ನಲಾಗಿದ್ದು, ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಮಾತುಕತೆಗಳು ನಡೆದಿವೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಡಾ.ಅಶ್ವತ್ಥನಾರಾಯಣ ನಿರ್ವಹಿಸಿದ್ದ ಇಲಾಖೆಗಳ ಕಡತ ಬಾಕಿ ಶೂನ್ಯ: ಎಲ್ಲ 3,760 ಕಡತ ವಿಲೇವಾರಿ
ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರೊಂದಿಗೆ ರಾಹುಲ್ ಗಾಂಧಿ ಹಂಚಿಕೊಂಡ ವಿಚಾರಗಳನ್ನು ಪಕ್ಷದ ಹಿರಿಯರೊಂದಿಗೆ ಚರ್ಚೆ ನಡೆಸಲಾಗಿದ್ದು, ಪ್ರಶಾಂತ್ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಕೊಳ್ಳುವುದರ ಬಗ್ಗೆ ಅಭಿಮತ ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ.
ರಾಷ್ಟ್ರೀಯ ಸುದ್ದಿ ಸಂಸ್ಥೆ ಇಂಡಿಯಾ ಟುಡೆ ಯೊಂದಿಗೆ ಮಾತನಾಡಿದ ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು, ರಾಹುಲ್ ಗಾಂಧಿಯವರು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕೇವಲ ಚುನಾವಣಾ ಸಲಹೆಗಳನ್ನು ನೀಡುವುದರ ಬದಲಾಗಿ, ಪಕ್ಷಕ್ಕೆ ಸೇರ್ಪಡೆಯಾದರೇ ಹೇಗೆ ಎನ್ನುವುದರ ಬಗ್ಗೆ ಚರ್ಚೆ ಮಾಡಿದ್ದಾರೆ. ಮಾತ್ರವಲ್ಲದೇ, ಪ್ರಶಾಂತ್ ಕಿಶೋರ್ ಪಕ್ಷದ ಸಿದ್ಧಾಂತಗಳಿಗೆ ಒಪ್ಪುತ್ತಾರೆಯೇ ಎಂಬ ಸಲಹೆಗಳನ್ನು ಕೂಡ ಪಡೆದಿರುವುದಾಗಿ ಹೇಳಿದ್ದಾರೆ.
ಇನ್ನೊಬ್ಬ ಹೆಸರು ಹೇಳಲು ಇಚ್ಛಿಸದ ಕಾಂಗ್ರೆಸ್ ನಾಯಕ, ಪ್ರಶಾಂತ್ ಕಿಶೋರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರೇ, ಯಾವುದೇ ತಪ್ಪಿಲ್ಲ. ಇದು ಹೊಸ ಯೋಚನೆಗಳನ್ನು ಹಾಗೂ ಕಾರ್ಯ ತಂತ್ರಗಳನ್ನು ರೂಪಿಸುವ ಸಮಯ. ಚುನಾವಣೆಯನ್ನು ಸಮರ್ಥವಾಗಿ ಎದುರಿಸುವುದಕ್ಕೆ ಸಾಧ್ಯವಾಗಬಹುದು ಎಂದು ಅವರು ಹೇಳಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ : ಬೊಮ್ಮಾಯಿ ರಾಜ್ಯ‘ಭಾರ’..! ತಂದೆಗಾದ ಸ್ಥಿತಿ ಮಗನಿಗೂ ಆಗಬಹುದೇ..?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.