ಕೇರಳ : ಕಳೆದ 24 ಗಂಟೆಗಳಲ್ಲಿ 24,064 ಹೊಸ ಕೋವಿಡ್ ಪ್ರಕರಣಗಳು ಪತ್ತೆ..!
Team Udayavani, Jul 30, 2021, 12:34 PM IST
ಪ್ರಾತಿನಿಧಿಕ ಚಿತ್ರ
ತಿರುವನಂತಪುರಂ : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 24,064 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ ಕೆಲವು ದಿನಗಳಂತೆ ರಾಜ್ಯದ ಮಲಪ್ಪುರಂ, ತ್ರಿಶ್ಶೂರ್, ಕೋಝಿಕೋಡ್, ಎರ್ನಾಕುಲಂ, ಪಾಲಕ್ಕಾಡ್, ಕೊಲ್ಲಂ, ಅಳಪ್ಪುಝಾ, ಕಣ್ಣೂರು, ತಿರುವನಂತಪುರಂ ಹಾಗೂ ಕೊಟ್ಟಾಯಂನಲ್ಲಿ ಅತೀ ಹೆಚ್ಚು ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.
ಇನ್ನು, ನಿನ್ನೆ ಒಂದೇ ದಿನ ಕೋವಿಡ್ ಸೋಂಕಿನಿಂದ 128 ಸೋಂಕಿತರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಇಂದು(ಶುಕ್ರವಾರ, ಜುಲೈ 30) ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದ ಅಂಕಿ ಅಂಶದಲ್ಲಿ ಮಾಹಿತಿ ನೀಡಿದೆ.
ಇದನ್ನೂ ಓದಿ : ಬೊಮ್ಮಲಾಪುರಕ್ಕೆ ಬಿಎಸ್ ಯಡಿಯೂರಪ್ಪ ಭೇಟಿ: ರವಿ ಕುಟುಂಬಕ್ಕೆ 5 ಲಕ್ಷ ರೂ. ನೆರವು
ದಿನ ನಿತ್ಯ ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿರುವುದು ಭಾರಿ ಆತಂಕ ಸೃಷ್ಟಿ ಮಾಡಿದ್ದು, ಮೂರನೇ ಅಲೆಯ ಸುಳಿವಿದು ಎಂದು ಹೇಳಲಾಗುತ್ತಿದೆ.
ಕೇರಳದಲ್ಲಿ ಹೊಸದಾಗಿ ದಾಖಲಾಗುತ್ತಿರುವ ಒಟ್ಟು ಕೋವಿಡ್ ಸೋಂಕಿನ ಸರಾಸರಿ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಎಚ್ಚರಿಕೆಯ ಕರೆಗಂಟೆಯಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜುಲೈ31ರಿಂದ ಆಗಸ್ಟ್ 1ರವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದೆ.
ಕೇರಳದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಪರಿಣಾಮ ಕೇಂದ್ರ ಸರ್ಕಾರವು ಆರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಸೋಂಕು ನಿಯಂತ್ರಣ ತಂಡವನ್ನು ಅಧ್ಯಯನಕ್ಕಾಗಿ ಕಳುಹಿಸಿರುವುದಾಗಿ ತಿಳಿಸಿದೆ.
ಇದನ್ನೂ ಓದಿ : ಮೇಘ ಸ್ಪೋಟ : ಲಾಹೌಲ್ ಸ್ಪಿಟಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ 200ಕ್ಕೂ ಹೆಚ್ಚು ಪ್ರವಾಸಿಗರು..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.