‘ಶಿಲ್ಪಾ ಶೆಟ್ಟಿಗೆ ಮಾನನಷ್ಟವಾಗಲು ಕಾರಣವೇನು?: ನಟಿ ಪರ ವಕೀಲರಿಗೆ ಪ್ರಶ್ನೆಗಳ ಸುರಿಮಳೆ
Team Udayavani, Jul 30, 2021, 4:49 PM IST
ಮುಂಬೈ : ಮಾಧ್ಯಮಗಳ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೆ ಕೊಂಚ ಹಿನ್ನಡೆಯಾಗಿದ್ದು, ‘’ಶಿಲ್ಪಾ ಶೆಟ್ಟಿ ಅತ್ತಿದ್ದಾರೆ ಎಂದು ವರದಿ ಪ್ರಕಟ ಮಾಡಿದರೆ ಅದು ಮಾನ ಹಾನಿ ಹೇಗಾಗುತ್ತದೆ?’’ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದ್ದಾರೆ.
ನೀಲಿ ಸಿನಿಮಾ ನಿರ್ಮಾಣ ಪ್ರಕರಣದಡಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಕುರಿತು ನಡೆದ ಬೆಳವಣೆಗೆಗಳ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದ ಕೆರಳಿದ ಶಿಲ್ಪಾ ಶೆಟ್ಟಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು.
ಮಾಧ್ಯಮಗಳು ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ ತಪ್ಪಾದ, ಅವಹೇಳನಕಾರಿ, ಸುಳ್ಳು ಮಾನಹಾನಿಕರ ಹೇಳಿಕೆಗಳನ್ನು ಪ್ರಕಟಿಸುತ್ತಿವೆ. ಈ ಮೂಲಕ ಖಾಸಗಿತನಕ್ಕೆ ಚ್ಯುತಿ ತರುತ್ತಿವೆ ಎಂದು ಮಾನನಷ್ಟ ಹೂಡಿದ್ದ ಶಿಲ್ಪಾ, ಅಲ್ಲದೆ, ತಮಗೆ 25 ಕೋಟಿ ರೂ. ಮತ್ತು ಅದರೊಂದಿಗೆ ವರ್ಷಕ್ಕೆ ಶೇ 18 ಬಡ್ಡಿಯೊಂದಿಗೆ ಹಣ ಪಾವತಿಸಬೇಕು ಎಂದು ಕೋರಿದ್ದರು.
ಇಂದು (ಜು.30) ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಜಿಎಸ್ ಪಟೇಲ್ ಅವರು, ‘ಶಿಲ್ಪಾ ಶೆಟ್ಟಿಗೆ ಮಾನನಷ್ಟವಾಗಲು ಕಾರಣವೇನು? ಸಾರ್ವಜನಿಕ ಕ್ಷೇತ್ರದಲ್ಲಿರುವ ವ್ಯಕ್ತಿಯ ಬಗ್ಗೆ ನೀವು ಮಾತನಾಡುತ್ತಿದ್ದೀರಿ. ಇದು ಅವರ ಜೀವನದ ಒಂದು ಭಾಗ. ಈ ಹಿಂದೆ ಕೂಡ ಈ ವಿಚಾರಕ್ಕೆ ಸಂಬಂಧಿಸಿ ಹಲವು ತೀರ್ಪು ನೀಡಲಾಗಿತ್ತು. ಎಷ್ಟು ಬಾರಿ ಇದನ್ನೇ ಹೇಳಬೇಕು? ಪೊಲೀಸ್ ಮೂಲಗಳು ಹೇಳಿವೆ ಎಂದು ವರದಿಯಾದರೆ ಅದು ಎಂದಿಗೂ ಮಾನಹಾನಿಯಾಗುವುದಿಲ್ಲ. ಶಿಲ್ಪಾ ಶೆಟ್ಟಿ ಅತ್ತಿದ್ದಾರೆ ಎಂದು ವರದಿ ಪ್ರಕಟ ಮಾಡಿದರೆ ಅದು ಮಾನ ಹಾನಿ ಹೇಗಾಗುತ್ತದೆ?’ ಎಂದು ಶಿಲ್ಪಾ ಶೆಟ್ಟಿ ಪರ ವಕೀಲರಿಗೆ ಪ್ರಶ್ನೆ ಮಾಡಿದ್ದಾರೆ.
ಇನ್ನು ‘ಓದುಗರನ್ನು ಸೆಳೆಯಲು ತಪ್ಪಾದ ಸುದ್ದಿ ಪ್ರಕಟ ಮಾಡಲಾಗಿದೆ’ ಎಂದು ಶಿಲ್ಪಾ ಶೆಟ್ಟಿ ಪರ ವಕೀಲರು ವಾದ ಮಂಡಿಸಿದರು. ಇದೆ ವೇಳೆ ಮಹತ್ವದ ಮಾತೊಂದು ಹೇಳಿರುವ ನ್ಯಾಯಮೂರ್ತಿಗಳು ಶಿಲ್ಪಾ ಶೆಟ್ಟಿಯವರ ಮನವಿ ಮಾಧ್ಯಮ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.