ಹಾಸನದಲ್ಲಿ ಮಂಗಗಳ ಮಾರಣಹೋಮ: ವರದಿ ಕೇಳಿದ ಹೈಕೋರ್ಟ್
Team Udayavani, Jul 30, 2021, 8:50 PM IST
ಹಾಸನ: ಬೇಲೂರು ತಾಲೂಕಿ ಚೌಡೇನಹಳ್ಳಿಯ ಬಳಿ 30 ಕ್ಕೂ ಹೆಚ್ಚು ಮಂಗಗಳ ಕಳೇಬರ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈ ಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಆ.4 ರೊಳಗೆ ವರದಿ ಸಲ್ಲಿಸುವಂತೆ ಹಾಸನ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದೆ
ಹಾಸನದ ಚೌಡನಹಳ್ಳಿಯಲ್ಲಿ ಮಂಗಗಳ ಮಾರಣಹೋಮ ನಡೆದಿತ್ತು. ಇಂತಹ ಅಮಾನವೀಯ ಕೃತ್ಯಕ್ಕೆ ಹೈಕೋರ್ಟ್ ತೀವ್ರ ಆತಂಕ ವ್ಯಕ್ತಪಡಿಸಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಎಸ್ಪಿ, ಆರ್ಎಫ್ಒ ಅವರನ್ನು ಪ್ರತಿವಾದಿಯಾಗಿಸಲು ಸೂಚನೆ ನೀಡಲಾಗಿದೆ.
ಕಾಡಿನ ಪ್ರಾಣಿಗಳಿಗೂ ಬದುಕುವ ಹಕ್ಕಿದೆ. ಮಂಗಗಳನ್ನು ಬರ್ಬರವಾಗಿ ಹತ್ಯೆಗೈದಿರುವುದು ಆಘಾತಕಾರಿ. ಇಲ್ಲಿ ಪ್ರಾಣಿಗಳ ದೌರ್ಜನ್ಯ ತಡೆ ಕಾಯ್ದೆ ಸ್ಪಷ್ಟ ಉಲ್ಲಂಘನೆ ಆಗಿದೆ. ಮಂಗಗಳ ಹಾವಳಿಯನ್ನೂ ಘನತೆಯಿಂದ ನಿಯಂತ್ರಿಸಬೇಕು ಎಂದು ಕೋರ್ಟ್ ಹೇಳಿದೆ. ಅಷ್ಟೇ ಅಲ್ಲದೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಆಗಸ್ಟ್ 4ರ ಒಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯ ನ್ಯಾಯಮೂರ್ತಿ ಒಕಾ, ನ್ಯಾಯಮೂರ್ತಿ ಸಂಜಯ್ ಗೌಡರವರ ಪೀಠ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.