ಹಣಕಾಸು ಸಚಿವೆ ಭೇಟಿ ಮಾಡಿದ ಮುಖ್ಯಮಂತ್ರಿ : ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ
Team Udayavani, Jul 31, 2021, 1:27 PM IST
ನವದೆಹಲಿ : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು.
ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಅಡಚಣೆ ಎದುರಾಗಿರುವುದರಿಂದ ಇದನ್ನು ಕೂಡಲೇ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಇದನ್ನೂ ಓದಿ :ಲಾಕ್ಡೌನ್ನಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ| ಯುವಕರ ನಿಸ್ವಾರ್ಥ ಸೇವೆಗೆ ಸಲಾಂ
ಇದಲ್ಲದೆ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅಗತ್ಯವಿರುವ ಅನುದಾನ ಬಿಡುಗಡೆಯ ಕುರಿತೂ ಸಹ ಕೇಂದ್ರ ಸಚಿವರ ಗಮನಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.