![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 31, 2021, 3:18 PM IST
ಲೂಸ್ ಮಾದ ಯೋಗೇಶ್ ನಾಯಕರಾಗಿ ನಟಿಸಿರುವ “ಲಂಕೆ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಈಗ ಚಿತ್ರದ ಮತ್ತೂಂದು ಹಾಡು ಬಿಡುಗಡೆಯಾಗಿದೆ. ಚಿತ್ರದ “ನಯನಕ್ಕೆ ನಯನ ಸೇರೋಕ್ಷಣ…’ ಎಂಬ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಕೇಳುಗರ ಮೆಚ್ಚುಗೆ ಪಡೆಯುತ್ತಿದೆ.
ಈ ಹಾಡಿನ ಬಗ್ಗೆ ಮಾತನಾಡಿದ ನಿರ್ದೇಶಕ ರಾಮ್‌ಪ್ರಸಾದ್, “ಸ್ವಲ್ಪ ದುಃಖ ಹಾಗೂ ಹೆಚ್ಚಿನ ಸಂತೋಷವನ್ನು ಹಾಡಿನ ಮೂಲಕ ಹೇಳಬೇಕೆಂದು ಕೊಂಡೆ. ಗೀತ ರಚನೆಕಾರ ಗೌಸ್‌ಫೀರ್ ಅವರ ಬಳಿ ಹೇಳಿದಾಗ ನಯನಕ್ಕೆ ನಯನ ಸೇರೋಕ್ಷಣ ಎಂಬ ಸುಂದರ ಗೀತೆ ಬರೆದುಕೊಟ್ಟರು. ಅಷ್ಟೇ ಮಧುರವಾಗಿ ಕಾರ್ತಿಕ್ ಈ ಹಾಡಿಗೆ ಸಂಗೀತ ನೀಡಿದ್ದಾರೆ. ಧನಂಜಯ್ ಅವರ ನೃತ್ಯ ನಿರ್ದೇಶನದಲ್ಲಿ ಯೋಗಿ ಹಾಗೂ ಕೃಷಿ ತಾಪಂಡ ಅದ್ಭುತವಾಗಿ ನಟಿಸಿದ್ದಾರೆ’ ಎಂದರು.
ಇದನ್ನೂ ಓದಿ:ಬಾಟಲ್ ಹಿಡಿದು ಮಾದಕ ನೋಟ ಬೀರಿದ ಗಡಂಗ್ ರಕ್ಕಮ್ಮಾ
ನಾಯಕ ಯೋಗೀಶ್ ಸಹ ಈ ಹಾಡಿನ ಬಗ್ಗೆ ಮೆಚ್ಚುಗೆ ಸೂಚಿಸಿ ಮಾತನಾಡಿದರು. ಸಂಗೀತ ನಿರ್ದೇಶಕ ಕಾರ್ತಿಕ್ ಶರ್ಮಾ ಹಾಗೂ ನೃತ್ಯ ನಿರ್ದೇಶಕರ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಚಿತ್ರದ ನಾಲ್ಕು ಹಾಡುಗಳು ಬೇರೆ ಬೇರೆ ಶೈಲಿಯಲ್ಲಿದೆ. ಈ ಹಾಡು ಸೂಫಿ ಹಾಗೂ ಕವಾಲಿ ಶೈಲಿಯಲ್ಲಿದೆ. ಗೌಸ್ ಫೀರ್ ಅವರ ಸಾಹಿತ್ಯ ಸೊಗಸಾಗಿದೆ ಹಾಗೂ ಈ ಹಾಡನ್ನು ಕನ್ನಡದವರೇ ಆದ ಧನುಷ್ ಜಗದೀಶ್ ಹಾಗೂ ರಕ್ಷಿತಾ ಸುರೇಶ್ ಹಾಡಿದ್ದಾರೆ ಎಂದು ಚಿತ್ರದ ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಕಾರ್ತಿಕ ಶರ್ಮ ಮಾಹಿತಿ ನೀಡಿದರು.
ಗೀತ ರಚನೆಕಾರ ಗೌಸ್ ತಾವು ಬರೆದಿರುವ ಈ ಹಾಡಿನ ಬಗ್ಗೆ ಮಾತನಾಡಿ, ಸಂಗೀತ ನಿರ್ದೇಶಕರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು. ನಿರ್ಮಾಪಕ ಪಟೇಲ್ ಶ್ರೀನಿವಾಸ್ ಹಾಗೂ ಸುರೇಖ ರಾಮ್ ಪ್ರಸಾದ್, ಕೃಷಿ ತಾಪಂಡ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.