ಟ್ವಿಟರ್-ಇನ್ಸ್ಟಾದಲ್ಲಿ ‘ಸಮಂತಾ ಅಕ್ಕಿನೇನಿ’ ಹೆಸರು ಮಾಯ: ಹೀಗೇಕೆ ಮಾಡಿದ್ರು ಸ್ಯಾಮ್ ?
Team Udayavani, Jul 31, 2021, 5:04 PM IST
ಹೈದರಾಬಾದ್ : ಟಾಲಿವುಡ್ ನಟಿ ಹಾಗೂ ಅಕ್ಕಿನೇನಿ ಕುಟುಂಬದ ಸೊಸೆ ಸಮಂತಾ ಬೇರೆ ವಿಚಾರಕ್ಕಾಗಿ ಇದೀಗ ಸುದ್ದಿಯಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಹೆಸರನ್ನು ತೆಗೆದಿದ್ದಾರೆ.
2010 ರಲ್ಲಿ ತೆರೆಕಂಡ ‘ಯೇ ಮಾಯ ಚೇಸಾವೆ’ ಚಿತ್ರದ ಮೂಲಕ ಸಮಂತಾ ಚಿತ್ರರಂಗಕ್ಕೆ ಕಾಲಿಟ್ಟ ಶ್ಯಾಮ್, ಅದೇ ಚಿತ್ರದ ನಾಯಕ ನಾಗ ಚೈತನ್ಯ ಜೊತೆ ಪ್ರೀತಿಯಲ್ಲಿ ಬಿದ್ದರು. ಈ ಜೋಡಿ 2017 ರಲ್ಲಿ ಸತಿ-ಪತಿಗಳಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ ಪುತ್ರ ನಾಗ ಚೈತನ್ಯರನ್ನು ಮದುವೆಯಾದ ಬಳಿಕ ತಮ್ಮ ಹೆಸರನ್ನು ಸಮಂತಾ ಅಕ್ಕಿನೇನಿ ಎಂದು ಬದಲಿಸಿಕೊಂಡರು. ಸಾಮಾಜಿಕ ಜಾಲತಾಣಗಳಲ್ಲಿ ‘ಸಮಂತಾ ಅಕ್ಕಿನೇನಿ’ ಅಂತಲೇ ತಮ್ಮ ಹೆಸರನ್ನು ನಮೂದಿಸಿಕೊಂಡಿದ್ದರು. ಈಗ ನೋಡಿದರೆ, ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್ಗಳಲ್ಲಿ ‘ಸಮಂತಾ’ ಹಾಗೂ ‘ಅಕ್ಕಿನೇನಿ’ ಎರಡೂ ಹೆಸರುಗಳನ್ನು ತೆಗೆದು ಬರೀ ‘S’ ಅನ್ನು ಮಾತ್ರ ಸಮಂತಾ ಉಳಿಸಿಕೊಂಡಿದ್ದಾರೆ. ಏಕಾಏಕಿ ಸೋಷಿಯಲ್ ಮೀಡಿಯಾದಲ್ಲಿ ನಟಿ ಸಮಂತಾ ತಮ್ಮ ಹೆಸರು ಹಾಗೂ ಸರ್ನೇಮ್ಅನ್ನು ತೆಗೆದಿದ್ದು ಯಾಕೆ ಎಂಬ ಪ್ರಶ್ನೆ ಈಗ ಅಭಿಮಾನಿಗಳಲ್ಲಿ ಕಾಡುತ್ತಿದೆ.
ಇನ್ನು ತಮ್ಮ ವೃತ್ತಿ ಜೀವನದಲ್ಲಿ ಅನೇಕ ಹಿಟ್ ಚಿತ್ರಗಳನ್ನು ಸಮಂತಾ ನೀಡಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್’ ಮೂಲಕ ಒಟಿಟಿ ವೇದಿಕೆಗೂ ಕಾಲಿಟ್ಟರು. ಸದ್ಯ ‘ಶಾಕುಂತಲಂ’ ಸೇರಿದಂತೆ ಎರಡ್ಮೂರು ಚಿತ್ರಗಳಲ್ಲಿ ಸಮಂತಾ ಬಿಜಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್ಗೆ ಮತ್ತೂಂದು ಬೆದರಿಕೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Actor ರೂಪಾಲಿ ಗಂಗೂಲಿಯಿಂದ ಮಲಮಗಳಿಗೆ ಕಿರುಕುಳ?
CELEBRITIES: ಶಾರುಖ್ ಟು ಸಲ್ಮಾನ್; ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು
Bollywood: ವರುಣ್ ಧವನ್ ʼಬೇಬಿ ಜಾನ್ʼ ಟೀಸರ್ ನೋಡಿ ʼಜವಾನ್ʼ ಕಾಪಿ ಎಂದ ನೆಟ್ಟಿಗರು
MUST WATCH
ಹೊಸ ಸೇರ್ಪಡೆ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.