ಪಶ್ಚಿಮಬಂಗಾಳ: ಬಿಜೆಪಿ ಮುಖಂಡ, ಸಂಸದ ಬಾಬುಲ್ ಸುಪ್ರೀಯೊ ಸಕ್ರಿಯ ರಾಜಕೀಯಕ್ಕೆ ಗುಡ್ ಬೈ
ಗುಡ್ ಬೈ…ಟಿಎಂಸಿ, ಕಾಂಗ್ರೆಸ್, ಸಿಪಿಐಎಂ ಸೇರಿದಂತೆ ಬೇರೆ ಯಾವುದೇ ಪಕ್ಷಕ್ಕೆ ಹೋಗಲ್ಲ.
Team Udayavani, Jul 31, 2021, 5:29 PM IST
ನವದೆಹಲಿ: ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದಿರುವುದಾಗಿ ಪಶ್ಚಿಮಬಂಗಾಳದ ಬಿಜೆಪಿ ಮುಖಂಡ ಬಾಬುಲ್ ಸುಪ್ರಿಯೊ ಶನಿವಾರ(ಜುಲೈ 31) ಫೇಸ್ ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.
ಇದನ್ನೂ ಓದಿ:ಟೋಕಿಯೊ ಒಲಿಂಪಿಕ್ಸ್: ಸೆಮಿ ಫೈನಲ್ ನಲ್ಲಿ ಮುಗ್ಗರಿಸಿದ ಪಿ.ವಿ.ಸಿಂಧು
ಬಾಬುಲ್ ಸುಪ್ರಿಯೋ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ 2014ರಿಂದ 2016ರ ಜುಲೈವರೆಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಖಾತೆ ಸಚಿವರಾಗಿದ್ದು, 2016ರಿಂದ 2019ರವರೆಗೆ ಭಾರೀ ಕೈಗಾರಿಕೆ ರಾಜ್ಯ ಖಾತೆ ಸಚಿವರಾಗಿದ್ದರು. ಆದರೆ ಇತ್ತೀಚೆಗಷ್ಟೇ ಸಚಿವ ಸಂಪುಟ ಪುನಾರಚನೆ ವೇಳೆ ಸುಪ್ರಿಯೊಗೆ ಯಾವುದೇ ಸ್ಥಾನ ಸಿಕ್ಕಿರಲಿಲ್ಲ. ಆ ಬಳಿಕ ಸುಪ್ರಿಯೊ ಫೇಸ್ ಬುಕ್ ನಲ್ಲಿ ಸತತವಾಗಿ ಟ್ವೀಟ್ ಮೂಲಕ ಅಸಮಧಾನ ಹೊರಹಾಕುತ್ತಿದ್ದರು.
ಗುಡ್ ಬೈ…ಟಿಎಂಸಿ, ಕಾಂಗ್ರೆಸ್, ಸಿಪಿಐಎಂ ಸೇರಿದಂತೆ ಬೇರೆ ಯಾವುದೇ ಪಕ್ಷಕ್ಕೆ ಹೋಗಲ್ಲ. ಯಾರೂ ನನ್ನ ಪಕ್ಷಕ್ಕೆ ಸೇರ್ಪಡೆಗೊಳ್ಳಿ ಎಂದು ಕರೆದಿಲ್ಲ ಎಂದು ಸ್ಪಷ್ಟಪಡಿಸಿರುವ ಸುಪ್ರಿಯೊ, ನಾನೀಗ ಏಕಾಂಗಿ ಆಟಗಾರನಾಗಿದ್ದೇನೆ. ನಾನು ಪಶ್ಚಿಮಬಂಗಾಳದ ಬಿಜೆಪಿ ಪಕ್ಷದಲ್ಲಿದ್ದೆ ಅಷ್ಟೇ ಎಂದು ತಿಳಿಸಿದ್ದಾರೆ.
ದೀರ್ಘ ಚರ್ಚೆಯ ನಂತರ ನಾನು ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗುವ ನಿರ್ಧಾರ ತೆಗೆದುಕೊಂಡಿದ್ದು, ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದೇನೆ ಎಂದು ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಬಾಬುಲ್ ಸುಪ್ರಿಯೋ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.