ಪುರುಷರ ತಪ್ಪಿಗೆ ಮಹಿಳೆಯರಿಗೇಕೆ ಶಿಕ್ಷೆ? ಶಿಲ್ಪಾ ಶೆಟ್ಟಿ ಬೆಂಬಲಕ್ಕೆ ನಿಂತ ನಟಿ ರಿಚಾ ಚಡ್ಡಾ
Team Udayavani, Aug 1, 2021, 6:26 PM IST
ಮುಂಬೈ:ಬಾಲಿವುಡ್ ನಟಿ ರಿಚಾ ಚಡ್ಡಾ ಅವರು ನಟಿ ಶಿಲ್ಪಾ ಶೆಟ್ಟಿಯವರ ಬೆಂಬಲಕ್ಕೆ ನಿಂತಿದ್ದಾರೆ. ಮಾಡದ ತಪ್ಪಿಗೆ ಟೀಕೆಗೆ ಗುರಿಯಾಗುತ್ತಿರುವ ಶಿಲ್ಪಾ ಪರ ಟ್ವೀಟ್ ಮಾಡಿದ್ದಾರೆ.
ಪುರುಷರು ಮಾಡಿದ ತಪ್ಪಿಗೆ ಮಹಿಳೆಯರು ಶಿಕ್ಷೆ ಅನುಭವಿಸುವುದು ಈ ಮೊದಲಿನಿಂದಲೂ ಬೆಳೆದು ಬಂದಿದೆ. ನಾವು ಇದನ್ನು ರಾಷ್ಟ್ರೀಯ ಕ್ರೀಡೆಯಂತೆ ಬೆಳೆಸಿಕೊಂಡು ಬಂದಿದ್ದೇವೆ ಎನ್ನುವ ಮೂಲಕ ಶಿಲ್ಪಾ ಶೆಟ್ಟಿ ವಿರುದ್ಧ ಟೀಕೆ, ಟ್ರೋಲ್ ಮಾಡಿದವರಿಗೆ ತಿರುಗೇಟು ನೀಡಿದ್ದಾರೆ ಚಡ್ಡಾ.
ನೀಲಿ ಸಿನಿಮಾ ನಿರ್ಮಾಣ ಹಾಗೂ ವಿತರಣೆ ಆರೋಪದಡಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯ ಬಂಧನದ ಬಳಿಕ ಶಿಲ್ಪಾ ಶೆಟ್ಟಿಯವರ ವಿರುದ್ಧವೂ ಟೀಕೆಗಳು ಕೇಳಿ ಬಂದಿದ್ದವು. ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಕೂಡ ಮಾಡಲಾಗಿತ್ತು. ತಮ್ಮ ವಿರುದ್ಧ ಮಾಡಲಾದ ಟೀಕೆಗಳು ಹಾಗೂ ಸುದ್ಧಿಗಳ ವಿರುದ್ಧ ನ್ಯಾಯಾಲಯದ ಮೊರೆ ಹೋದ ಶಿಲ್ಪಾ ಶೆಟ್ಟಿ, ಕೆಲವು ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನೂ ಹೂಡಿದ್ದಾರೆ.
ಶಿಲ್ಪಾ ಶೆಟ್ಟಿಯವರ ಈ ನಡೆಯನ್ನು ಬೆಂಬಲಿಸಿರುವ ರಿಚಾ ಚಡ್ಡಾ, ಅವರು ಮೊಕದ್ದಮೆ ಹೂಡಿರುವುದು ಒಳ್ಳೆಯ ವಿಚಾರ ಎಂದಿದ್ದಾರೆ.
ಇನ್ನು ಶನಿವಾರವಷ್ಟೇ ಬಾಲಿವುಡ್ ಸಿನಿಮಾ ನಿರ್ದೇಶಕ ಹನ್ಸಲ್ ಮೆಹ್ತಾ ಅವರೂ ಶಿಲ್ಪಾ ಶೆಟ್ಟಿ ಬೆಂಬಲಿಸಿ ಟ್ವೀಟ್ ಮಾಡಿದ್ದರು. ಸರಣಿ ಟ್ವೀಟ್ ಗಳ ಮೂಲಕ ಶಿಲ್ಪಾ ಶೆಟ್ಟಿ ಬೆಂಬಲಕ್ಕೆ ನಿಂತಿರುವ ಮೆಹ್ತಾ, ”ನೀವು ಶಿಲ್ಪಾ ಶೆಟ್ಟಿ ಪರವಾಗಿ ನಿಲ್ಲಲು ಸಾಧ್ಯವಾಗದಿದ್ದರೆ ಕನಿಷ್ಠ ಆಕೆಯನ್ನು ಒಂಟಿಯಾಗಿ ಬಿಟ್ಟುಬಿಡಿ. ಕಾನೂನು ಎಲ್ಲವನ್ನೂ ತೀರ್ಮಾನಿಸಲಿ ಎಂದಿದ್ದರು.
”ಚೆನ್ನಾಗಿದ್ದಾಗ ಎಲ್ಲರೂ ಒಟ್ಟಿಗೆ ಪಾರ್ಟಿ ಮಾಡಿದ್ದರು. ಆದ್ರೆ ಕೆಟ್ಟ ಸಮಯದಲ್ಲಿ ಮೌನ ಆವರಿಸಿದೆ. ಪ್ರತ್ಯೇಕತೆ ಇದೆ. ಸತ್ಯ ಏನೇ ಇರಲಿ, ಡ್ಯಾಮೇಜ್ ಈಗಾಗಲೇ ಆಗಿದೆ” ಎಂದಿರುವ ಹನ್ಸಲ್ ಬಾಲಿವುಡ್ ಮಂದಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೊಂದು ಬೆದರಿಕೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Actor ರೂಪಾಲಿ ಗಂಗೂಲಿಯಿಂದ ಮಲಮಗಳಿಗೆ ಕಿರುಕುಳ?
CELEBRITIES: ಶಾರುಖ್ ಟು ಸಲ್ಮಾನ್; ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು
Bollywood: ವರುಣ್ ಧವನ್ ʼಬೇಬಿ ಜಾನ್ʼ ಟೀಸರ್ ನೋಡಿ ʼಜವಾನ್ʼ ಕಾಪಿ ಎಂದ ನೆಟ್ಟಿಗರು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.